Hyundai Exter: ಧೂಳೆಬ್ಬಿಸುತ್ತಿದೆ ಹ್ಯುಂಡೈ ಎಕ್ಸ್‌ಟರ್‌, ಪ್ರತಿಸ್ಪರ್ಧಿಗಳಿಗೆ ನಡುಕ!

ಹುಂಡೈ ಮೋಟಾರ್ ಇಂಡಿಯಾ (Hyundai Motor India) ಕೆಲವೇ ತಿಂಗಳ ಹಿಂದೆ, ಎಕ್ಸ್‌ಟರ್ (Exter) ಮೈಕ್ರೋ - ಎಸ್‌ಯುವಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿತ್ತು. ಅಂದಿನಿಂದಲೇ ಈ ಕಾರಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ದಿನದಿಂದ ದಿನಕ್ಕೆ ಕಾಯುವಿಕೆ ಅವಧಿ ಹೆಚ್ಚಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಹುಂಡೈ ಕಂಪನಿ ಎಕ್ಸ್‌ಟರ್ ಎಸ್‌ಯುವಿಯನ್ನು ಬಿಡುಗಡೆ ಮಾಡಿ, 30 ದಿನಗಳೊಳಗೆ 50,000ಕ್ಕೂ ಹೆಚ್ಚಿನ ಬುಕ್ಕಿಂಗ್ ಸ್ವೀಕರಿಸಿತ್ತು. ಆ ಬಳಿಕ, ಕೆಲವೇ ದಿನಗಳಲ್ಲಿ 75,000 ಆರ್ಡರ್ ಪಡೆದು, ಹೊಸದೊಂದು ದಾಖಲೆ ನಿರ್ಮಾಣ ಮಾಡಿತ್ತು. ಇದನ್ನು ಗಮನಿಸಿದ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಈ ಕಾರುಗಳನ್ನು ಶೀಘ್ರದಲ್ಲೇ ಪೂರೈಸಲು ಉತ್ಪಾದನೆಯನ್ನು ಶೇಕಡ 30% ಹೆಚ್ಚಿಸಿದೆ.

Hyundai Exter: ಧೂಳೆಬ್ಬಿಸುತ್ತಿದೆ ಹ್ಯುಂಡೈ ಎಕ್ಸ್‌ಟರ್‌, ಪ್ರತಿಸ್ಪರ್ಧಿಗಳಿಗೆ ನಡುಕ!

ಭಾರತದಲ್ಲಿ ಹ್ಯುಂಡೈ ಎಕ್ಸ್‌ಟರ್‌ ರೂ.6 ಲಕ್ಷದಿಂದ ರೂ.10 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಇಎಕ್ಸ್, ಎಸ್, ಎಸ್ಎಕ್ಸ್, ಎಸ್ಎಕ್ಸ್ (ಒ), ಹಾಗೂ ಎಸ್ಎಕ್ಸ್ (ಒ) ಕನೆಕ್ಟ್ ಎಂಬ ಐದು ರೂಪಾಂತರ ಆಯ್ಕೆಯಲ್ಲಿ ದೊರೆಯುತ್ತದೆ. ಸದ್ಯ, ಸಿಕ್ಕಿರುವ ಮಾಹಿತಿ ಪ್ರಕಾರ, ಎಂಟ್ರಿ ಲೆವೆಲ್ ಮಾದರಿಗಳಾದ ಇಎಕ್ಸ್, ಎಸ್ 9 ತಿಂಗಳು ಕಾಯುವಿಕೆ ಅವಧಿಯನ್ನು ಹೊಂದಿದೆ.

ಟಾಪ್ ಎಂಡ್ ರೂಪಾಂತರಗಳಾದ ಎಸ್ಎಕ್ಸ್, ಎಸ್ಎಕ್ಸ್ (ಒ) 4 - 5 ತಿಂಗಳೊಳಗೆ ವಿತರಣೆಯಾಗಲಿದೆ. ಈ ಹಿಂದೆ, ಹ್ಯುಂಡೈ ಹೇಳಿದಂತೆ ಒಟ್ಟು ಬುಕ್ಕಿಂಗ್‌ನಲ್ಲಿ ಶೇಕಡ 75% ಸನ್‌ರೂಫ್ ರೂಪಾಂತರಗಳು ಪಡೆಯುತ್ತಿವೆ. ಇದರೊಟ್ಟಿಗೆ ಮೂರನೇ ಒಂದು ಭಾಗದಷ್ಟು ಮಂದಿ ಆಟೋಮೆಟಿಕ್ ವೇರಿಯೆಂಟ್ ಗಳನ್ನು ಆರ್ಡರ್ ಮಾಡುತ್ತಿದ್ದು, ಇದರಿಂದಲೇ ಈ ಹ್ಯುಂಡೈ ಎಕ್ಸ್‌ಟರ್‌ ಎಷ್ಟು ಬೇಡಿಕೆ ಹೊಂದಿದೆ ಎಂದು ಸುಲಭವಾಗಿ ಅರ್ಥವಾಗುತ್ತದೆ.

ಈ ಹ್ಯುಂಡೈ ಎಕ್ಸ್‌ಟರ್‌ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿದೆ. ಇದರ 1.2 - ಲೀಟರ್, 4 ಸಿಲಿಂಡರ್ ಎಂಜಿನ್‌ ಪೆಟ್ರೋಲ್ ಎಂಜಿನ್, 81.8 bhp ಪವರ್, 113.8 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 5 ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ಸಿಗುತ್ತದೆ.

ಸಿಎನ್‌ಜಿ ಎಂಜಿನ್ ಪಡೆದಿರುವ ಕಾರು, ಕೊಂಚ ಕಡಿಮೆ ಪವರ್ ಹೊರಹಾಕುತ್ತದೆ. 67.7 bhp ಪವರ್ ಹಾಗೂ 95.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ನೊಂದಿಗೆ ಲಭ್ಯವಿದೆ. ಈ ಹ್ಯುಂಡೈ ಎಕ್ಸ್‌ಟರ್‌ ಕಾರು ಯಾವ ಬೈಕಿಗೂ ಕಮ್ಮಿ ಇಲ್ಲದಂತೆ ಮೈಲೇಜ್ ನೀಡಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ 19.2kmpl ರಿಂದ 27.1 km/kg ಇಂಧನ ದಕ್ಷತೆ ಒಳಗೊಂಡಿದೆ.

ಈ ಕಾರು, 8 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಎಲೆಕ್ಟ್ರಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಸೀಟ್‌ಬೆಲ್ಟ್ ರಿಮೈಂಡರ್‌ ಒಳಗೊಂಡಂತೆ ವಿವಿಧ ಸೇಫ್ಟಿ ಫೀಚರ್ಸ್ ಹೊಂದಿದೆ.

ಇನ್ನು, ಹ್ಯುಂಡೈ ಎಕ್ಸ್‌ಟರ್ ಮೈಕ್ರೋ - ಎಸ್‌ಯುವಿಗೆ ಪ್ರಬಲ ಪ್ರತಿಸ್ಪರ್ಧಿ ಅಂದರೆ, ಟಾಟಾ ಪಂಚ್ ಮಾತ್ರ. ಎಕ್ಸ್‌ಟರ್ ಈ ಮಟ್ಟದಲ್ಲಿ ಬೇಡಿಕೆ ಪಡೆಯುತ್ತದೆ ಎಂದು ಯಾರು ಅಂದಾಜಿಸಿರಲಿಲ್ಲ. ಮುಂಬರುವ ದಿನದಲ್ಲಿ ಕಾಯುವಿಕೆ ಅವಧಿ ಮತ್ತಷ್ಟು ಹೆಚ್ಚಬಹುದು. ದಸರಾ, ದೀಪಾವಳಿ ಹಬ್ಬದ ವೇಳೆಗೆ ಈ ಕಾರನ್ನು ಮತ್ತಷ್ಟು ಮಂದಿ ಇಷ್ಟಪಟ್ಟು ಕೊಂಡುಕೊಳ್ಳಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, September 29, 2023, 18:25 [IST]
English summary
Hyundai exter suv waiting period up to 9 months details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+