ಟಾಟಾ ಪಂಚ್‌ಗೆ ಪಂಚ್ ಕೊಡುತ್ತಾ ಹ್ಯುಂಡೈ ಎಕ್ಸ್‌ಟರ್? ಇದರಲ್ಲಿ ಯಾವುದು ಬೆಸ್ಟ್

ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ತನ್ನ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಹ್ಯುಂಡೈ ಎಕ್ಸ್‌ಟರ್ ಅತ್ಯಂತ ಕಾಂಪ್ಯಾಕ್ಟ್ ಮತ್ತು ಕೈಗೆಟುಕುವ ಎಸ್‌ಯುವಿಯಾಗಿದೆ. ಈ ಹ್ಯುಂಡೈ ಎಕ್ಸ್‌ಟರ್ ಮತ್ತು ಇದರ ನೇರ ಪ್ರತಿಸ್ಪರ್ಧಿಯಾದ ಟಾಟಾ ಪಂಚ್ ನಡುವಿನ ವ್ಯತ್ಯಾಸಗಳ ಬಗ್ಗೆ ಮಾಹಿತಿ ಇಲ್ಲಿದೆ.

ಬೆಲೆಗಳು: ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ (Tata Punch) ಮೈಕ್ರೋ ಎಸ್‍ಯುವಿಗಳ ಬೆಲೆಗಳು ಹೆಚ್ಚು ಕಡಿಮೆ ಹೋಲುತ್ತವೆ. ಹ್ಯುಂಡೈನ ಹೊಸ ಎಕ್ಸ್‌ಟರ್ ಬೆಲೆಯು ರೂ.6 ಲಕ್ಷದಿಂದ ರೂ.9.32 ಲಕ್ಷದವರೆಗೆ ಇದೆ. ಟಾಟಾ ಪಂಚ್‌ನ ಬೆಲೆಯು ರೂ.6 ಲಕ್ಷದಿಂದ ರೂ.9.52 ಲಕ್ಷದವರೆಗೆ ಇದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.

Hyundai Exter vs Tata Punch

ಫೀಚರ್ಸ್: ಈ ಎಕ್ಸ್‌ಟರ್ ಮೈಕ್ರೋ ಎಸ್‍ಯುವಿಯಲ್ಲಿ ಕೆಲವು ವಿಭಾಗ-ಮೊದಲ ಫೀಚರ್ಸ್ ಗಳಲ್ಲಿ, ಅಂತರ್ನಿರ್ಮಿತ ಡ್ಯಾಶ್‌ಕ್ಯಾಮ್, ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ. ಇತರ ಗಮನಾರ್ಹ ವೈಶಿಷ್ಟ್ಯಗಳೆಂದರೆ 4.2-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, Apple CarPlay ಮತ್ತು Android Auto ಜೊತೆಗಿನ 8-ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಅನ್ನು ಹೊಂದಿದೆ.

ಇನ್ನು ಟಾಟಾ ಪಂಚ್ ಮೈಕ್ರೋ ಎಸ್‍ಯುವಿಯ ಯಾವೆಲ್ಲ ಫಿಚರ್ಸ್ ಗಳನ್ನು ಹೊಂದಿದೆ ಎಂಬುದನ್ನು ನೋಡುವುದಾದರೆ, ಇದರಲ್ಲಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಹೊಂದಿದೆ. ಇದರೊಂದಿಗೆ ಕೀಲೆಸ್ ಎಂಟ್ರಿ ಮತ್ತು ಗೋ, ಕ್ರೂಸ್ ಕಂಟ್ರೋಲ್, ಆಟೋ ಕ್ಲೈಮೇಟ್ ಕಂಟ್ರೋಲ್, ಪವರ್-ಫೋಲ್ಡಿಂಗ್ ವಿಂಗ್ ಮಿರರ್‌ಗಳು, ರಿಯರ್‌ವ್ಯೂ ಅನ್ನು ಒಳಗೊಂಡಿದೆ.

ಎಂಜಿನ್: ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 1.2-ಲೀಟರ್, 4-ಸಿಲಿಂಡರ್ ಎಂಜಿನ್‌ನೊಂದಿಗೆ ಬಂದಿದೆ. ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯನಿರ್ವಹಿಸುತ್ತದೆ. ಪೆಟ್ರೋಲ್ ರೂಪದಲ್ಲಿ, ಹುಂಡೈ ಎಕ್ಸ್‌ಟರ್‌ನ ಎಂಜಿನ್ 81.8 bhp ಪವರ್ ಮತ್ತು 113.8 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎಕ್ಸ್‌ಟರ್ ಕಾರಿನ CNG ಆವೃತ್ತಿಯು 67.7 bhp ಪವರ್ ಮತ್ತು 95.2 Nm ನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಎಕ್ಸ್‌ಟರ್ ಪೆಟ್ರೋಲ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‌ಟಿ ಗೇರ್‌ಬಾಕ್ಸ್‌ನೊಂದಿಗೆ ನೀಡಲಾಗುತ್ತದೆ. ಆದರೆ ಸಿಎನ್‌ಜಿ ಆವೃತ್ತಿಯಲ್ಲಿ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ನೀಡಲಾಗಿದೆ. ಎಕ್ಸ್‌ಟರ್ ಪೆಟ್ರೋಲ್ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಿದರೆ, AMT ಮಾದರಿ 19.2 ಕಿ.ಮೀ ಮೈಲೇಜ್ ನೀಡುತ್ತದೆ.ಇನ್ನು CNG ಆವೃತ್ತಿಯು 27.1 ಕಿ.ಮೀ ಮೈಲೇಜ್ ನೀಡುತ್ತದೆ.

ಇನ್ನು ಟಾಟಾ ಪಂಚ್ ಮೈಕ್ರೋ ಎಸ್‍ಯುವಿಯಲ್ಲಿ 1.2-ಲೀಟರ್, 3-ಸಿಲಿಂಡರ್, ರೆವೊಟ್ರಾನ್ ಪೆಟ್ರೋಲ್ ಎಂಜಿನ್‌ ಹೊಂದಿದ್ದು, ಇದು 85 bhp ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

ವಿನ್ಯಾಸ: ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‍ಯುವಿಯಲ್ಲಿ ವಿನ್ಯಾಸದ ಬಗ್ಗೆ ಹೇಳುವುದಾದರೆ, ಕಾರಿನ ಮುಂಭಾಗ ಪ್ಯಾರಾಮೆಟ್ರಿಕ್ ಫ್ರಂಟ್ ಗ್ರಿಲ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಕ್ಲಾಮ್‌ಶೆಲ್ ಬಾನೆಟ್ ಮತ್ತು ಎಚ್ ಆಕಾರದ ಎಲ್‌ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿವೆ. ಇನ್ನು ಈ ಮೈಕ್ರೋ ಎಸ್‍ಯುವಿಗೆ ಸುಲಭವಾಗಿ ಪ್ರವೇಶಿಸಲು ಮತ್ತು ಹೊರಬರಲು ಡೋರುಗಳು ವಿಶಾಲವಾಗಿ ತೆರೆಯಬಹುದು.

ಇನ್ನು ಟಾಟಾ ಪಂಚ್ ಗ್ರಾಹಕರನ್ನು ಆಕರ್ಷಿಸುವ ವಿನ್ಯಾಸ ಹೊಂದಿದೆ. ಪ್ರಮುಖವಾಗಿ ಫ್ರಂಟ್ ಸಿಗ್ನೇಚರ್ ಗ್ರಿಲ್ ಪಡೆದಿದ್ದು, ಎರಡು ಬದಿಯಲ್ಲಿ ಹೆಡ್‌ಲೈಟ್ ಇದ್ದು, ಅದರ ಕೆಳಗೆ ಫಾಗ್ ಲೈಟ್ ಹಾಕಲಾಗಿದೆ. ಸೈಡ್ ಪ್ರೊಫೈಲ್ ಫೋರ್ - ಸ್ಪೋಕ್ 16 ಇಂಚಿನ ಅಲಾಯ್ ವೀಲ್ಸ್, ORVMಗಳಲ್ಲಿ ಟರ್ನ್ ಇಂಡಿಕೇಟರ್ ಪಡೆಯುವ ಮೂಲಕ ಆಕರ್ಷಕವಾಗಿದೆ.

Article Published On: Tuesday, July 11, 2023, 8:30 [IST]
English summary
Hyundai exter vs tata punch micro suvs comparison details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+