Hyundai: ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಕಾರಿಗೆ ಭಾರೀ ರಿಯಾಯಿತಿ, ರೂ.5 ಲಕ್ಷ ಆರಂಭಿಕ ಬೆಲೆ

ದೇಶಾದ್ಯಂತ ಹ್ಯುಂಡೈ (Hyundai) ಆಯ್ದ ಡೀಲರ್‌ಶಿಪ್‌ಗಳು ಈ ವರ್ಷಾಂತ್ಯದಲ್ಲಿ ವಿವಿಧ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಣೆ ಮಾಡಿವೆ. ಅದರಲ್ಲೂ ಕಂಪನಿಯ ಗ್ರಾಂಡ್ ಐ10 ನಿಯೋಸ್ (Grand i10 Nios) ದೊಡ್ಡ ಮಟ್ಟದಲ್ಲಿ ಡಿಸ್ಕೌಂಟ್ ಆಫರ್ ಅನ್ನು ಪಡೆದುಕೊಂಡಿದೆ.

ಹೊಸ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ (Hyundai Grand i10 Nios), ಒಟ್ಟು ರೂ.48,000 ರಿಯಾಯಿತಿ ಸೌಲಭ್ಯವನ್ನು ಹೊಂದಿದೆ. ಮ್ಯಾನುವಲ್ (ಪೆಟ್ರೋಲ್) ರೂಪಾಂತರ ರೂ.20,000 ನಗದು ರಿಯಾಯಿತಿ (Cash Discount), ರೂ.10,000 ವಿನಿಮಯ ಬೋನಸ್ (Exchange Bonus) ಹಾಗೂ ರೂ.3,000 ಕಾರ್ಪೊರೇಟ್ ಡಿಸ್ಕೌಂಟ್ (Corporate Discount) ಪಡೆದಿದೆ.

Hyundai: ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಕಾರಿಗೆ ಭಾರೀ ರಿಯಾಯಿತಿ, ರೂ.5 ಲಕ್ಷ ಆರಂಭಿಕ ಬೆಲೆ

ಆಟೋಮೆಟಿಕ್ (ಪೆಟ್ರೋಲ್) ವೇರಿಯೆಂಟ್ ರೂ.10,000 ವಿನಿಮಯ ಬೋನಸ್ ಮತ್ತು ರೂ.3,000 ಕಾರ್ಪೊರೇಟ್ ರಿಯಾಯಿತಿಯನ್ನು ಹೊಂದಿದೆ. ಸಿಎನ್‌ಜಿ ರೂಪಾಂತರ ರೂ.35,000 ಕ್ಯಾಶ್ ಡಿಸ್ಕೌಂಟ್, ರೂ.10,000 ವಿನಿಮಯ ಬೋನಸ್ ಅನ್ನು ಒಳಗೊಂಡಿದೆ. ಡಿಸೆಂಬರ್ ತಿಂಗಳಿಗೆ ಮಾತ್ರ ರಿಯಾಯಿತಿ ಪ್ರಯೋಜನಗಳು ಅನ್ವಯವಾಗಲಿದೆ. ಆದರೆ, ಈ ಡಿಸ್ಕೌಂಟ್ ಆಫರ್ ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌, ಸ್ಟಾಕ್ ಲಭ್ಯತೆ ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ವಿವರಗಳಿಗೆ ಹತ್ತಿರದ ಶೋರೂಂ ಸಂಪರ್ಕಿಸಿರಿ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಕಾರು, ರೂ.5.84 ಲಕ್ಷದಿಂದ ರೂ.8.51 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎರಾ, ಮ್ಯಾಗ್ನಾ, ಸ್ಪೋರ್ಟ್ಜ್ ಎಕ್ಸಿಕ್ಯೂಟಿವ್, ಸ್ಪೋರ್ಟ್ಜ್, ಅಸ್ಟಾ ಸೇರಿದಂತೆ 5 ರೂಪಾಂತರ, 6-ಮೊನೊಟೋನ್ (monotone) ಹಾಗೂ 2-ಡುಯಲ್ ಟೋನ್ (dual-tone) ಬಣ್ಣಗಳೊಂದಿಗೆ ಸಿಗುತ್ತದೆ.

Hyundai: ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಕಾರಿಗೆ ಭಾರೀ ರಿಯಾಯಿತಿ, ರೂ.5 ಲಕ್ಷ ಆರಂಭಿಕ ಬೆಲೆ

ನೂತನ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಕಾರು, 1.2 - ಲೀಟರ್ ಪೆಟ್ರೋಲ್ ಎಂಜಿನ್ 83 PS ಗರಿಷ್ಠ ಪವರ್, 114 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 5 - ಸ್ವೀಡ್ ಮ್ಯಾನುವಲ್, 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

ಸಿಎನ್‌ಜಿ ರೂಪಾಂತರವು ಇದೇ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 69 PS ಪವರ್ ಮತ್ತು 95 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5 - ಸ್ವೀಡ್ ಮಾನ್ಯವಲ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 16.0 - 18.0 kmpl ಮೈಲೇಜ್ ನೀಡುತ್ತದೆ.

Hyundai: ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಕಾರಿಗೆ ಭಾರೀ ರಿಯಾಯಿತಿ, ರೂ.5 ಲಕ್ಷ ಆರಂಭಿಕ ಬೆಲೆ

ಹೊಸ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, 8 - ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋ ಎಸಿ, ಕ್ರೂಸ್ ಕಂಟ್ರೋಲ್, ಹೈಟ್ - ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್ ಮತ್ತು ಪುಶ್ - ಬಟನ್ ಸ್ಟಾರ್ಟ್/ ಸ್ಟಾಪ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, 6 ​​ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯುಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಅಸಿಸ್ಟ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ISOFIX ಚೈಲ್ಡ್ ಸೀಟ್ ಮೌಂಟ್ಸ್ ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಒಳಗೊಂಡಿದೆ. ಈ ಕಾರಿಗೆ ಮಾರುತಿ ಸುಜುಕಿ ಸ್ವಿಫ್ಟ್ ಮತ್ತು ರೆನಾಲ್ಟ್ ಟ್ರೈಬರ್‌ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, December 23, 2023, 12:36 [IST]
English summary
Hyundai grand i10 nios car get upto rs 48000 discount december 5 lakh price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+