631 ಕಿ.ಮೀ ರೇಂಜ್‌ನ ಹ್ಯುಂಡೈ ಎಲೆಕ್ಟ್ರಿಕ್ ಕಾರಿಗೆ ಭಾರೀ ಡಿಮ್ಯಾಂಡ್: ಮಾರಾಟದಲ್ಲಿ ಹೊಸ ದಾಖಲೆ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದೆ. ಹ್ಯುಂಡೈ Ioniq 5 ಕೊರಿಯನ್ ಕಾರು ತಯಾರಕರಿಂದ ಭಾರತದಲ್ಲಿ ಬಿಡುಗಡೆಯಾದ ಎರಡನೇ ಎಲೆಕ್ಟ್ರಿಕ್ ಕಾರು ಆಗಿದೆ. ಇದು ಪ್ರೀಮಿಯಂ ಎಲೆಕ್ಟ್ರಿಕ್ ಕಾರು.
ಹ್ಯುಂಡೈ Ioniq 5 (Hyundai Ioniq 5) ಎಲೆಕ್ಟ್ರಿಕ್ ಕಾರಿಗೆ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಹ್ಯುಂಡೈ Ioniq 5 ಎಲೆಕ್ಟ್ರಿಕ್ ಕ್ರಾಸ್‌ಒವರ್ ಹೊಸ ಮೈಲಿಗಲ್ಲು ಸಾಧಿಸಿದೆ. ಹ್ಯುಂಡೈ ಕಂಪನಿಯು ತನ್ನ ಈ Ioniq 5 ಎಲೆಕ್ಟ್ರಿಕ್ ಕಾರಿನ 1,000 ಯುನಿಟ್ ಗಳನ್ನು ಮಾರಾಟ ಮಾಡಿದೆ. ಪ್ರೀಮಿಯಂ ಮಾದರಿಯಾದರೂ 500 ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಕೋನಾ ಎಲೆಕ್ಟ್ರಿಕ್ ನಂತರ ಭಾರತದಲ್ಲಿ ಹ್ಯುಂಡೈ ಕಂಪನಿಯ Ioniq 5 ಎರಡನೇ ಎಲೆಕ್ಟ್ರಿಕ್ ಮಾದರಿಯಾಗಿದೆ.

ಹ್ಯುಂಡೈ Ioniq 5 ಎಲೆಕ್ಟ್ರಿಕ್ ಕಾರಿನ ಬೆಲೆಯು ರೂ.45.95 ಲಕ್ಷವಾಗಿದೆ.ಈ ಹ್ಯುಂಡೈ Ioniq 5 ಎಲೆಕ್ಟ್ರಿಕ್ ಎಸ್‍ಯುವಿ ಹ್ಯುಂಡೈ ಮೋಟಾರ್ ಗ್ರೂಪ್‌ನ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (E-GMP) ಅನ್ನು ಆಧರಿಸಿದೆ. ಇದು ಕಿಯಾ EV6 ಎಲೆಕ್ಟ್ರಿಕ್ ಕಾರಿಗೂ ಸಹ ಆಧಾರವಾಗಿದೆ. ಹ್ಯುಂಡೈ Ioniq 5 (Hyundai Ioniq 5) ಎಲೆಕ್ಟ್ರಿಕ್ ಎಸ್‍ಯುವಿ 4,635 ಎಂಎಂ ಉದ್ದ, 1,890 ಎಂಎಂ ಅಗಲ ಮತ್ತು 1,625 ಎಂಎಂ ಎತ್ತರವಿದೆವನ್ನು ಹೊಂದಿದೆ.
ಇನ್ನು ಈ ಎಲೆಕ್ಟ್ರಿಕ್ ಎಸ್‍ಯುವಿ 3,000mm ವೀಲ್‌ಬೇಸ್ ಅನ್ನು ಹೊಂದಿದೆ. ಈ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಮಾದರಿಯು ಆಗಿದ್ದು, ಹೊರಭಾಗದಲ್ಲಿ ಭವಿಷ್ಯದ ವಿನ್ಯಾಸವನ್ನು ಹೊಂದಿದೆ. ಇದು ಪಿಕ್ಸಲೇಟೆಡ್ LED ಟೈಲ್-ಲೈಟ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಗಳೊಂದಿಗೆ ಡ್ಯುಯಲ್ LED ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ.

ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಡ್ಯುಯಲ್ ಫ್ಲೋಟಿಂಗ್ ಸ್ಕ್ರೀನ್ ಮತ್ತು 2-ಸ್ಪೋಕ್ ಸ್ಟೀರಿಂಗ್ ವೀಲ್‌ನೊಂದಿಗೆ ಆಕರ್ಷಕ ಒಳಾಂಗಣದೊಂದಿಗೆ ಬರುತ್ತದೆ. ಈ ಕಾರಿನಲ್ಲಿ 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನೀಡಲಾಗಿದೆ. ಈ ಹ್ಯುಂಡೈ ಕಾರಿನಲ್ಲಿ ಡ್ರೈವರ್ ಡಿಸ್‌ಪ್ಲೇಗಳು, 360 ಡಿಗ್ರಿ ಕ್ಯಾಮೆರಾ, ಪನೋರಮಿಕ್ ಸನ್‌ರೂಫ್, V2L ಮತ್ತು ಇತರವುಗಳೊಂದಿಗೆ ಸುಸಜ್ಜಿತವಾಗಿರುತ್ತದೆ.
ಈ ಹೊಸ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜನ್ಸಿ ಬ್ರೇಕಿಂಗ ಅನ್ನು ಹೊಂದಿದೆ. ಇದರೊಂದಿಗೆ ಲೇನ್ ಕೀಪ್ ಮತ್ತು ಡಿಪಾರ್ಚರ್ ಏಡ್ ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸಿಸ್ಟಮ್‌ನಂತಹ ಫೀಚರ್ಸ್ ಗಳೊಂದಿಗೆ ADAS (ಅಡ್ವಾನ್ಸ್ಡ್ ಡ್ರೈವರ ಅಸಿಸ್ಟ್ ಸಿಸ್ಟಂ) ನೊಂದಿಗೆ ಬರುತ್ತದೆ. ಈ ಹೊಸ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನಲ್ಲಿ 72.6kWh ಬ್ಯಾಟರಿ ಪ್ಯಾಕ್ ಅನ್ನು ಒಳಗೊಂಡಿದೆ.

ಇದು ಸಿಂಗಲ್ ಚಾರ್ಜ್‌ನಲ್ಲಿ ARAI- ಪ್ರಕಾರ, 631 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಈ ಎಲೆಕ್ಟ್ರಿಕ್ ಮೋಟರ್ 217 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕ್ರಾಸ್ಒವರ್ RWD (ರೇರ್-ವ್ಹೀಲ್ ಡ್ರೈವ್) ಸಿಸ್ಟಂ ಅನ್ನು ಒಳಗೊಂಡಿದೆ.
ಚಾರ್ಜಿಂಗ್ ವಿಷಯದಲ್ಲಿ, ಹ್ಯುಂಡೈ Ioniq 5 ಎಲೆಕ್ಟ್ರಿಕ್ ಕ್ರಾಸ್ಒವರ್ 350kW DC ಫಾಸ್ಟ್ ಚಾರ್ಜರ್ ಬಳಸಿ ಚಾರ್ಜ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಹ್ಯುಂಡೈ Ioniq ಎಲೆಕ್ಟ್ರಿಕ್ ಕಾರು 5 ಕೇವಲ 18 ನಿಮಿಷಗಳಲ್ಲಿ 10% ರಿಂದ 80% ವರೆಗೆ ಚಾರ್ಜ್ ಮಾಡಲು ಸಾಧ್ಯವಾಗುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications