Independence Day: ಕೈಗೆಟುಕುವ ಬೆಲೆಯ ಪವರ್ ಫುಲ್ 'ಮೇಡ್ ಇನ್ ಇಂಡಿಯಾ' ಕಾರುಗಳು

ದೇಶೀಯ ಕಾರು ಮಾರುಕಟ್ಟೆಯಲ್ಲಿ ಪವರ್ ಫುಲ್ 'ಮೇಡ್ ಇನ್ ಇಂಡಿಯಾ' ಕಾರುಗಳು ಅಬ್ಬರಿಸುತ್ತಿವೆ. ಅವು ಕೈಗೆಟುಕುವ ಬೆಲೆ, ಆಕರ್ಷಕ ವೈಶಿಷ್ಟ್ಯದೊಂದಿಗೆ ಖರೀದಿಗೆ ದೊರೆಯುವುರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತವೆ. ರೂ.15 ಲಕ್ಷ ದರಕ್ಕೆ ಸಿಗುವ ಪ್ರಮುಖ ಕಂಪನಿ ಕಾರುಗಳು ಇಲ್ಲಿವೆ. ಆ ಬಗ್ಗೆ ತಿಳಿಯೋಣ ಬನ್ನಿ.

ಮೊದಲಿಗೆ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿ ಬಗ್ಗೆ ಮಾತನಾಡೋಣ. ಇದು, ರೂ.13.05 - ರೂ.24.51 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಸುಮಾರು, 12 - 13 ತಿಂಗಳು ಕಾಯುವಿಕೆ ಅವಧಿಯನ್ನು ಹೊಂದಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ.

Independence Day: ಕೈಗೆಟುಕುವ ಬೆಲೆಯ ಪವರ್ ಫುಲ್ ಮೇಡ್ ಇನ್ ಇಂಡಿಯಾ ಕಾರುಗಳು

ಇದರ, 2.2 ಲೀಟರ್ ಡೀಸೆಲ್ ಎಂಜಿನ್, 132 PS ಗರಿಷ್ಠ ಪವರ್ ಹಾಗೂ 300 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿವೆ. 2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್. 203 PS ಪವರ್ ಹಾಗೂ 380 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಕಾರು, 6 ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಮಹೀಂದ್ರಾ ಸ್ಕಾರ್ಪಿಯೋ ಎನ್ ಪಡೆದಿರುವ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಇದು, 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್ ಒಳಗೊಂಡಂತೆ ಅತ್ಯಾಧುನಿಕ ಫೀಚರ್ಸ್ ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದಲ್ಲೂ ಅತ್ಯುತ್ತಮವಾಗಿದ್ದು, 6 ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

Independence Day: ಕೈಗೆಟುಕುವ ಬೆಲೆಯ ಪವರ್ ಫುಲ್ ಮೇಡ್ ಇನ್ ಇಂಡಿಯಾ ಕಾರುಗಳು

ಭಾರತದ ಮಾರುಕಟ್ಟೆಯಲ್ಲಿ ಮಹೀಂದ್ರಾ XUV700 ರೂ.14.01 ಲಕ್ಷದಿಂದ ರೂ.26.18 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. ಇದು ಎರಡು ಎಂಜಿನ್ ಆಯ್ಕೆಯನ್ನು ಹೊಂದಿದೆ. 2.0 ಲೀಟರ್ 4 ಸಿಲಿಂಡರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್, 200 hp ಗರಿಷ್ಠ ಪವರ್, 380 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಮತ್ತೊಂದು, 2.2 ಲೀಟರ್ 4 ಸಿಲಿಂಡರ್ ಟರ್ಬೊಚಾರ್ಜ್ಡ್ ಡೀಸೆಲ್ ಎಂಜಿನ್, 155 hp ಪವರ್, 360 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6 ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್ ರೂಫ್, ಡ್ಯೂಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, 6 ವೇ ಪವರ್ಡ್ ಡ್ರೈವರ್ ಸೀಟ್, 12 ಸ್ವೀಕರ್ ಒಳಗೊಂಡಂತೆ ಹಲವು ಫೀಚರ್ಸ್ ಪಡೆದಿದೆ.

Independence Day: ಕೈಗೆಟುಕುವ ಬೆಲೆಯ ಪವರ್ ಫುಲ್ ಮೇಡ್ ಇನ್ ಇಂಡಿಯಾ ಕಾರುಗಳು

ಈ ಮಹೀಂದ್ರಾ XUV700, ಜಿಪ್, ಜ್ಯಾಪ್, ಜೂಮ್ ಹಾಗೂ ಕಸ್ಟಮ್ ಎಂಬ ಡ್ರೈವ್ ಮೋಡ್ ಹೊಂದಿದ್ದು, ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ISOFIX ಆಂಕರ್ಸ್, TPMS ( ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ಸೇಫ್ಟಿ ವೈಶಿಷ್ಟ್ಯಗಳನ್ನು ಹೊಂದಿದೆ.

'ಕಿಯಾ' ವಿದೇಶಿ ಕಂಪನಿಯಾಗಿದ್ದರೂ ದೇಶದಲ್ಲಿಯೇ ಕಾರುಗಳನ್ನು ತಯಾರಿಸಿ, ಮಾರಾಟ ಮಾಡುತ್ತದೆ. ಅದರಲ್ಲಿ ಸೆಲ್ಟೋಸ್ ಪ್ರಮುಖವಾಗಿದ್ದು, ರೂ.10.90 ಲಕ್ಷ ಆರಂಭಿಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 17.0 - 20.7 kmpl ಮೈಲೇಜ್ ನೀಡುತ್ತದೆ. 10.25 - ಇಂಚಿನ ಡಿಸ್ಪ್ಲೇ, ಡ್ಯುಯಲ್ - ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಹುಂಡೈ ಕ್ರೆಟಾ ಕೂಡ ಕೈಗೆಟುಕುವ ಬೆಲೆಯನ್ನು ಪಡೆದಿದ್ದು, ರೂ.10.87 ಲಕ್ಷದಿಂದ (ಎಕ್ಸ್ ಶೋರೂಂ) ದರಗಳು ಶುರುವಾಗಲಿದೆ. ಐದು ಆಸನ ಆಯ್ಕೆ ವ್ಯವಸ್ಥೆಯೊಂದಿರುವ ಈ ಕಾರು, ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. 16.8 kmpl ಮೈಲೇಜ್ ನೀಡುತ್ತದೆ. 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಮಹೀಂದ್ರಾ ಥಾರ್, ಪ್ರಮುಖ ಆಫ್ ರೋಡ್ ಎಸ್‌ಯುವಿಯಾಗಿದ್ದು, ರೂ.10.54 ಲಕ್ಷದಿಂದ ರೂ.16.78 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 15.2 kmpl ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಸ್ಕೋಡಾ ಕುಶಾಕ್ ರೂ.11.59 - 19.69 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದು, 1 ಲೀಟರ್ 3 ಸಿಲಿಂಡರ್ ಪೆಟ್ರೋಲ್ ಎಂಜಿನ್, 1.5 ಲೀಟರ್ ಫೋರ್ ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 18.09 - 19.76 kmpl ಮೈಲೇಜ್ ನೀಡುತ್ತದೆ. FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.

Article Published On: Monday, August 14, 2023, 13:29 [IST]
English summary
Independence day made in india powerful cars rs 15 lakh details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+