Mahindra Bolero: ಗ್ರಾಮೀಣ ಜನರ ಪ್ರೀತಿಯ ಮಹೀಂದ್ರಾ ಬೊಲೆರೊಗೆ ಭಾರೀ ಬೇಡಿಕೆ
ಮಹೀಂದ್ರಾ (Mahindra) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಜನಪ್ರಿಯತೆ ಗಳಿಸಿದೆ. ಅದರ ಕಾರುಗಳು ಆಕರ್ಷಕ ವೈಶಿಷ್ಟ್ಯದೊಂದಿಗೆ ಸುರಕ್ಷತೆಗೆ ಹೆಸರುವಾಸಿಯಾಗಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಸದ್ಯ, ಕಂಪನಿಯ ಪ್ರಮುಖ ಎಸ್‌ಯುವಿಯಾಗಿರುವ ಬೊಲೆರೊಗೂ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಇತ್ತೀಚೆಗೆ, ಮಹೀಂದ್ರಾ ನವೆಂಬರ್ ತಿಂಗಳ ಓಪನ್ ಬುಕ್ಕಿಂಗ್ (Open Booking) ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿತ್ತು. ಕಂಪನಿಯು ದೇಶಾದ್ಯಂತ ಇನ್ನೂ 2.85 ಲಕ್ಷ ಕಾರುಗಳನ್ನು ವಿತರಿಸಬೇಕಾಗಿದೆ. ಅದರಲ್ಲೂ ಮಹೀಂದ್ರಾದ ವಿವಿಧ ಮಾದರಿಗಳು ತಿಂಗಳಿಗೆ 51,000ಕ್ಕೂ ಹೆಚ್ಚಿನ ಆರ್ಡರ್ ಸ್ವೀಕರಿಸುತ್ತಿವೆ. ಇದನ್ನು ಗಮನಿಸಿದಾಗ ಕಂಪನಿಯ ವಾಹನಗಳು ಗ್ರಾಹಕರನ್ನು ಎಷ್ಟರಮಟ್ಟಿಗೆ ಆವರಿಸಿಕೊಂಡಿವೆ ಎಂಬುದು ಸುಲಭವಾಗಿ ಅರ್ಥವಾಗುತ್ತದೆ.

ಈಗ ಮಹೀಂದ್ರಾ ಬೊಲೆರೊ (Mahindra Bolero) ಬಗ್ಗೆ ಮಾತನಾಡೋಣ. ಈ ಎಸ್‌ಯುವಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಹೆಚ್ಚು ಖ್ಯಾತಿಗಳಿಸಿದೆ. ಬೊಲೆರೊ (Bolero) ಹಾಗೂ ಬೊಲೆರೊ ನಿಯೋ (Bolero Neo) ರೂಪಾಂತರಗಳು, ಈ ನವೆಂಬರ್ ತಿಂಗಳು 11,000 ಓಪನ್ ಬುಕ್ಕಿಂಗ್ ಹೊಂದಿದ್ದು, ಪ್ರಸ್ತುತ ಕೂಡ ತಿಂಗಳಿಗೆ ಗ್ರಾಹಕರಿಂದ 9,000 ಆರ್ಡರ್ ಪಡೆಯುತ್ತಿವೆ.
ಭಾರತದ ಮಾರುಕಟ್ಟೆಯಲ್ಲಿ ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo), ರೂ.9.64 ಲಕ್ಷದಿಂದ ರೂ.12.15 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಇದು ಎನ್4, ಎನ್8, ಎನ್10 ಮತ್ತು ಎನ್10(ಒ) ಎಂಬ ನಾಲ್ಕು ರೂಪಾಂತರ ಹಾಗೂ ಏಳು ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ.

ಮಹೀಂದ್ರಾ ಬೊಲೆರೊ ನಿಯೋ 1.5 - ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 100 PS ಗರಿಷ್ಠ ಪವರ್ ಹಾಗೂ 260 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 5 - ಸ್ವೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿ ದೊರೆಯಲಿದ್ದು, ಮೈಲೇಜ್ ವಿಚಾರಕ್ಕೆ ಬರುವುದಾದರೆ 17.29 kmpl ಇಂಧನ ದಕ್ಷತೆಯನ್ನು ಹೊಂದಿದೆ.
ವೈಶಿಷ್ಟ್ಯದ ಕುರಿತು ಹೇಳುವುದಾದರೆ, ಬೊಲೆರೊ ನಿಯೋ ಹೆಚ್ಚು ಅತ್ಯಾಧುನಿಕವಾಗಿದ್ದು, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಸೇರಿದಂತೆ ಹಲವು ಫೀಚರ್ಸ್ ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರಿವರ್ಸ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ISOFIX ಚೈಲ್ಡ್ ಮೌಂಟ್ ಪಡೆದಿದೆ.

ಮಹೀಂದ್ರಾ ಬೊಲೆರೊ (Mahindra Bolero) ರೂ.9.79 ಲಕ್ಷದಿಂದ ರೂ.10.80 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. ಇದು, 1.5 - ಲೀಟರ್ ಡಿಸೇಲ್ ಎಂಜಿನ್ ಪಡೆದಿದ್ದು, 75 PS ಗರಿಷ್ಠ ಪವರ್ ಹಾಗೂ 210 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.
ಈ ಬೊಲೆರೊ 16.0 kmpl ಮೈಲೇಜ್ ನೀಡಲಿದ್ದು, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮ್ಯಾನುವಲ್ ಎಸಿ, USB ಕನೆಕ್ಟಿವಿಟಿ, ಪವರ್ ವಿಂಡೋ ಮತ್ತು ಪವರ್ ಸ್ಟೀರಿಂಗ್ ಒಳಗೊಂಡಂತೆ ವಿವಿಧ ಫೀಚರ್ಸ್ ಹೊಂದಿದೆ. ಸೇಫ್ಟಿ ಸಲುವಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರಿವರ್ಸ್ ಪಾರ್ಕಿಂಗ್ ಸೆನ್ಸರ್ ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications