ವಿದೇಶಿ ಕಾರುಗಳ ಅಬ್ಬರ: ಭಾರತದಲ್ಲಿ ಸ್ಥಗಿತಗೊಂಡ ಮಹೀಂದ್ರಾ KUV100 NXT
ಜನಪ್ರಿಯ ಸ್ವದೇಶಿ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಕ್ರಾಸ್-ಹ್ಯಾಚ್‌ಬ್ಯಾಕ್ KUV100 NXT ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಿದೆ. ವರದಿಗಳ ಪ್ರಕಾರ, ಮಹೀಂದ್ರಾ KUV100 NXT ಕಾರಿಗೆ ಆನ್‌ಲೈನ್ ಮತ್ತು ಆಫ್‌ಲೈನ್ ಬುಕಿಂಗ್‌ಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಈ ಕಾರಿನ ಬೇಡಿಕೆ ಕುಸಿದಿತ್ತು.
ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ KUV100 NXT ಎಸ್‍ಯುವಿಯು ಹಳೆಯದಾಗಿದೆ. ಇದರ ಪ್ರತಿಸ್ಪರ್ಧಿಗಳು ಹೆಚ್ಚಿನ ಫೀಚರ್ಸ್ ಗಳನ್ನು ಹೊಂದಿರುವ ಪ್ಯಾಕೇಜ್‌ಗಳನ್ನು ನೀಡಲು ಪ್ರಾರಂಭಿಸಿದ್ದರು. ಇದರಿಂದ ಈ ಮಹೀಂದ್ರಾ ಎಸ್‍ಯುವಿಗೆ ಪ್ರತಿಸ್ಪರ್ಧಿಗಳ ಪೈಪೋಟಿಯನ್ನು ಎದುರಿಸುವಲ್ಲಿ ವಿಫಲವಾಗಿದೆ. ಮಹೀಂದ್ರಾ KUV100 NXT ಮಾದರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸ್ವಿಫ್ಟ್ , ಮಾರುತಿ ಇಗ್ನಿಸ್, ಟಾಟಾ ಪಂಚ್ ಮತ್ತು ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಕಾರುಗಳು ಹೆಚ್ಚು ಪೈಪೋಟಿಯನ್ನು ನೀಡಿತು.

ಈ ಮಹೀಂದ್ರಾ ಕಾರುಗಳ ಪ್ರತಿಸ್ಪರ್ಧಿಗಳು ಕಾಲಕ್ಕೆ ತಕ್ಕಂತೆ ಹೊಸ ನವೀಕರಣಗಳನ್ನು ನಡೆಸಿ ಹೆಚ್ಚಿನ ಗ್ರಾಹಕರನ್ನು ಸೆಳೆದುಕೊಂಡಿತು. ಮಹೀಂದ್ರಾ KUV100 NXT ಎಸ್‍ಯುವಿಯಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 82 ಪಿಎಸ್ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ, ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.
ಈ ಹಿಂದೆ ಮಹೀಂದ್ರಾ KUV100 NXT ಎಸ್‍ಯುವಿಯಲ್ಲಿ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿತ್ತು. ಆದರೆ BS6 ಹಂತದ ಮಾನದಂಡಗಳು ಪ್ರಾರಂಭವಾದಾಗ ಆ ಎಂಜಿನ್ ಅನ್ನು ನಿಲ್ಲಿಸಿದ್ದರು. ಈ ಮಹೀಂದ್ರಾ KUV100 NXT ಎಸ್‍ಯುವಿಯಲ್ಲಿ ನವೀಕರಣಗಳನ್ನು ಪಡೆದುಕೊಳ್ಳದಿದ್ದರೂ ಕೆಲವು ಪ್ರಮುಖ ಫೀಚರ್ಸ್ ಗಳನ್ನು ಒಳಗೊಂಡಿತು. ಈ ಕಾರಿನಲ್ಲಿ ಏಳು-ಇಂಚಿನ ಟಚ್‌ಸ್ಕ್ರೀನ್ ಡಿಸ್ ಪ್ಲೇ, ನಾಲ್ಕು-ಸ್ಪೀಕರ್ ಸೌಂಡ್ ಸಿಸ್ಟಂ ಮತ್ತು ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳನ್ನು ಹೊಂದಿವೆ
ಇದರೊಂದಿಗೆ ಎತ್ತರ-ಹೊಂದಾಣಿಕೆ ಡ್ರೈವರ್ ಸೀಟ್, ಎಲೆಕ್ಟ್ರಿಕಲ್ ಫೋಲ್ಡಬಲ್ ORVM ಗಳು, ಕೂಲ್ಡ್ ಗ್ಲೋವ್‌ಬಾಕ್ಸ್ ಮತ್ತು ಹಿಂಭಾಗದ ಡಿಫಾಗರ್ ಅನ್ನು ಹೊಂದಿತ್ತು. ಇನ್ನು ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ, ಈ ಕಾರಿನಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, EBD ಜೊತೆಗೆ ABS, ಹಿಂಭಾಗದ ಪಾರ್ಕಿಂಗ್ ಸೆನ್ಸರ್, ಆಟೋಮ್ಯಾಟಿಕ್ ಡೋರ್ ಲಾಕ್‌ಗಳು ಮತ್ತು ISOFIX ಚೈಲ್ಡ್ ಸೀಟ್ ಮೌಂಟ್‌ಗಳನ್ನು ನೀಡಿತು.
ಇನ್ನು ಮಹೀಂದ್ರಾ ಕಂಪನಿಯು ಥಾರ್ ಎಸ್‍ಯುವಿಯ ಮಾರಾಟವನ್ನು ಹೆಚ್ಚಿಸಲು ಭರ್ಜರಿ ಡಿಸ್ಕೌಂಟ್ ಅನ್ನು ನೀಡಲಾಗಿದೆ. ಥಾರ್ 4WD (ಫೋರ್-ವೀಲ್ ಡ್ರೈವ್) ಪೆಟ್ರೋಲ್ ಮತ್ತು ಡೀಸೆಲ್ ರೂಪಾಂತರಗಳ ಮೇಲೆ ರೂ.40,000 ವರೆಗೆ ನಗದು ರಿಯಾಯಿತಿಯನ್ನು ಘೋಷಿಸಿದೆ. ಈ ಎಸ್‍ಯುವಿಯ ಮಾದರಿಯ ಸರಣಿಯು ಎರಡು ಟ್ರಿಮ್‌ಗಳಲ್ಲಿ ಬರುತ್ತದೆ. ಅವುಗಳೆಂದರೆ, AX (O) ಮತ್ತು LX ಆಗಿದೆ.
ಇನ್ನು ಈ ಈ ಮಹೀಂದ್ರಾ ಥಾರ್ 4X4 ಆವೃತ್ತಿಯು ಎಲೆಕ್ಟ್ರಾನಿಕ್ ಬ್ರೇಕ್ ಲಾಕಿಂಗ್ ಡಿಫರೆನ್ಷಿಯಲ್‌ನೊಂದಿಗೆ ಬರುತ್ತದೆ ಅದು ಲೋ ಟ್ರ್ಯಾಕ್ಷನ್ ರಸ್ತೆಗಳಲ್ಲಿ ಉತ್ತಮ ಟ್ರ್ಯಾಕ್ಷನ್ ಅನ್ನು ಹೊಂದಿರುತ್ತದೆ. ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ. ಅದಕ್ಕಾಗಿಯೇ ವಾಹನ ಉತ್ಸಾಹಿಗಳು ಒಂದನ್ನು ಖರೀದಿಸಲು ನಿರಂತರವಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ.
ಈ ಪ್ರಸ್ತುತ ಜನರೇಷನ್ ಮಹೀಂದ್ರಾ ಥಾರ್ ಎಸ್‍ಯುವಿಯ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಈ ಥಾರ್ ಎಸ್‍ಯುವಿ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಒಳಗೊಂಡಿದೆ. ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.


Click it and Unblock the Notifications