ಪ್ರಮುಖ ಕಾರುಗಳಿಗೆ ಭಾರೀ ರಿಯಾಯಿತಿ ಘೋಷಿಸಿದ ಮಹೀಂದ್ರಾ
ಭಾರತದಾದ್ಯಂತ ಮುಂಬರಲಿರುವ BS6 ಹಂತ 2 ಎಮಿಷನ್ ಮಾನದಂಡಗಳಿಗೆ ಅನುಗುಣವಾಗಿ ಹಲವು ವಾಹನ ತಯಾರಕ ಕಂಪನಿಗಳು ವಾಹನಗಳನ್ನು ಬಿಡುಗಡೆ ಮಾಡುತ್ತಿವೆ. ಇದೀಗ, ಮಹೀಂದ್ರಾ ಥಾರ್ 4X4, ಬೊಲೆರೋ ಹಾಗೂ XUV300 ಎಸ್‍ಯುವಿಗಳ 2022, 2023 (BS6 ಹಂತ 1) ಮಾದರಿಗಳಿಗೆ ಭರ್ಜರಿ ರಿಯಾಯಿತಿಯನ್ನು ನೀಡುತ್ತಿದೆ.
ಎಮಿಷನ್ ಮಾನದಂಡಗಳು ಮಾತ್ರವಲ್ಲದೆ, ವಾಹನ ಮಾರಾಟ ಪ್ರಮಾಣವನ್ನು ವೃದ್ಧಿಸಿಕೊಳ್ಳಲು ಮಹೀಂದ್ರಾ ಈ ರಿಯಾಯಿತಿಯನ್ನು ಘೋಷಣೆ ಮಾಡಿದೆ. ಪ್ರಮುಖ ಎಸ್‍ಯುವಿಯಾಗಿರುವ ಬೊಲೆರೋ ಮೇಲೆ ರೂ.60,000 ವರೆಗೆ ರಿಯಾಯಿತಿಯನ್ನು ನೀಡುತ್ತಿದೆ. ಇದರ ಟಾಪ್ ಎಂಡ್ ರೂಪಾಂತರವಾದ B6 (O) ರೂ.45,000 ನಗದು ರಿಯಾಯಿತಿ ಹಾಗೂ ರೂ.15,000 ಇತರೆ ಡಿಸ್ಕೌಂಟ್ ಹೊಂದಿದೆ. ಬೊಲೆರೋ ರೂ.9.78 ಲಕ್ಷದಿಂದ ರೂ.10.79 ಲಕ್ಷ ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಾಗಲಿದೆ.

ಮಹೀಂದ್ರಾ ಬೊಲೆರೋ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು 1.5-ಲೀಟರ್ ಡಿಸೇಲ್ ಎಂಜಿನ್ ಹೊಂದಿದ್ದು, 75 PS ಪವರ್, 210 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್ ಟ್ರಾನ್ಸ್ಮಿಷನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಹತ್ತು ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. USB ಕನೆಕ್ಟಿವಿಟಿ ಹಾಗೂ ಡಿಜಿಟಲ್ ಇನ್ಸ್ರುಮೆಂಟಲ್ ಕ್ಲಸ್ಟರ್ ಹೊಂದಿದ್ದು, ಸುರಕ್ಷತೆಗಾಗಿ ಡ್ಯೂಯಲ್ ಫ್ರಂಟ್ ಏರ್‌ಬ್ಯಾಗ್ಸ್, ಎಬಿಎಸ್ ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ನ್ನು ಒಳಗೊಂಡಿದೆ.
ಮಹೀಂದ್ರಾದ ಮತ್ತೊಂದು ಬಹು ಬೇಡಿಕೆಯ XUV300 ಎಸ್‍ಯುವಿಯನ್ನು ಬಹುತೇಕ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಾರೆ. ಇದು ಅತ್ಯುತ್ತಮ ಸುರಕ್ಷತೆ ಹೊಂದಿರುವ ಕಾರಾಗಿದ್ದು, ಗ್ಲೋಬಲ್ NCAPಯಿಂದ 5-ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ. ಸದ್ಯ, ಈ ಎಸ್‍ಯುವಿ ರೂ. 32,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಒಳಗೊಂಡಿದೆ. ಇದರ ಟಾಪ್ ಎಂಡ್ ರೂಪಾಂತರ W8 (O) ರೂ.22,000 ಕ್ಯಾಶ್ ಡಿಸ್ಕೌಂಟ್, ರೂ.10,000 ಪರಿಕರ (accessories) ರಿಯಾಯಿತಿಯನ್ನು ಪಡೆದಿದೆ.

ಈ ಎಸ್‍ಯುವಿಯ ಎಂಜಿನ್ ಬಗ್ಗೆ ಹೇಳುವುದಾದರೆ, ಇದು ಮೂರು ಎಂಜಿನ್ ಆಯ್ಕೆಗಳಲ್ಲಿ ಗ್ರಾಹಕರಿಗೆ ಖರೀದಿಗೆ ದೊರೆಯಲಿದೆ. ಅವುಗಳೆಂದರೆ, 1.2 ಲೀಟರ್ ಟರ್ಬೊ ಪೆಟ್ರೋಲ್, 1.5 ಲೀಟರ್ ಡೀಸೆಲ್ ಎಂಜಿನ್ ಹಾಗೂ 1.2-ಲೀಟರ್ TGDI ಟರ್ಬೊ ಪೆಟ್ರೋಲ್ ಎಂಜಿನ್. ಈ ಕಾರು ಐದು ಆಸನಗಳ ಆಯ್ಕೆಯಲ್ಲಿ ಖರೀದಿಗೆ ದೊರೆಯಲಿದ್ದು, 16.5 - 20.1 kmpl ಮೈಲೇಜ್ ನೀಡಲಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಮಹೀಂದ್ರಾ ಥಾರ್ 4X4 ಕೂಡ ಬಹು ಬೇಡಿಕೆಯ ಎಸ್‍ಯುವಿಯಾಗಿದ್ದು, ರೂ.60,000 ವರೆಗೆ ರಿಯಾಯಿತಿ ಪ್ರಯೋಜನ ಹೊಂದಿದೆ. ಇದು ರೂ.9.99 ಲಕ್ಷದಿಂದ ರೂ.16.49 ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 4WD (ಫೋರ್ ವೀಲ್ ಡ್ರೈವ್) ಆವೃತ್ತಿ, 2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2 ಡಿಸೇಲ್ ಎಂಜಿನ್ ಹೊಂದಿದ್ದು, 6 ಸ್ವೀಡ್ ಮ್ಯಾನುವಲ್ ಅಥವಾ ಆಟೊಮೇಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ ಎಂದು ಹೇಳಬಹುದು.

ಥಾರ್ RWD (ರೇರ್ ವೀಲ್ ಡ್ರೈವ್) ಆವೃತ್ತಿಯು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 118 PS ಪವರ್ ಹಾಗೂ 300 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 6 ಸ್ವೀಡ್ ಮ್ಯಾನುವಲ್ ಟ್ರಾಸ್ನ್ಮಿಷನ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯಲಿದ್ದು, 7- ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಹ್ಯಾಲೊಜೆನ್ ಹೆಡ್‌ಲೈಟ್ಸ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ ಸೇರಿದಂತೆ ಹತ್ತು ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ.
ಇನ್ನು, ಮಹೀಂದ್ರಾ ನೀಡಿರುವ ದೊಡ್ಡ ರಿಯಾಯಿತಿಯಿಂದ ಹೆಚ್ಚಿನ ಜನರು, ಈ ಎಸ್‍ಯುವಿಗಳನ್ನು ಖರೀದಿಸಬಹುದು. ಜೊತೆಗೆ ಮಾರಾಟ ಪ್ರಮಾಣವನ್ನು ಸುಧಾರಿಸಿಕೊಳ್ಳಲು ಕಂಪನಿಗೆ ನೆರವಾಗುತ್ತದೆ. ಈಗಾಗಲೇ ಬೊಲೆರೋ ಮಾರಾಟದಲ್ಲಿ ಕೊಂಚ ಹಿನ್ನೆಡೆ ಅನುಭವಿಸಿದ್ದು, ಈ ಮೂಲಕ ಅದು ಹೆಚ್ಚಾಗಲಿದೆ. ಮಹೀಂದ್ರಾ ಮಾತ್ರವಲ್ಲದೆ, ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಸಹ ಭರ್ಜರಿ ರಿಯಾಯಿತಿಯನ್ನು ನೀಡಿವೆ.


Click it and Unblock the Notifications