Mahindra: ಭಾರತದ ಮಣ್ಣಿನ ತಾಕತ್ ಅಂದ್ರೆ ಇದೆ ಅಲ್ವಾ, ಮಹೀಂದ್ರಾ ಸ್ಕಾರ್ಪಿಯೋ, ಥಾರ್ ಯಶಸ್ಸಿನ ನಾಗಾಲೋಟ!
ಭಾರತದ ವಿಶ್ವಾಸಾರ್ಹ ವಾಹನ ತಯಾರಿಕ ಕಂಪನಿಯಾಗಿ ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್ (M&M Ltd.) ಜನಪ್ರಿಯತೆ ಗಳಿಸಿದೆ. ಇದೀಗ, ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಗೊಂಡಿದ್ದು, ಕಂಪನಿಯು ಭರ್ಜರಿಯಾಗಿ ಯಶಸ್ಸು ಸಾಧಿಸಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಮಹೀಂದ್ರಾ (Mahindra) ಕಂಪನಿಯು ಈ ಆಗಸ್ಟ್ (2023) ತಿಂಗಳಲ್ಲಿ ಒಟ್ಟು 70,350 ಯುನಿಟ್ ವಾಹನಗಳನ್ನು ಮಾರಾಟ ಮಾಡಿ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೇ ವರ್ಷದಿಂದ ವರ್ಷಕ್ಕೆ ಶೇಕಡ 19% ಪ್ರಗತಿ ಸಾಧಿಸಿದೆ. ಇವುಗಳಲ್ಲಿ ದೇಶೀಯ ಹಾಗೂ ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ವೆಹಿಕಲ್ಸ್ ಕೂಡ ಸೇರ್ಪಡೆಯಾಗಿವೆ ಎಂಬುದು ಗಮನಿಸಬೇಕಾದ ಅಂಶವಾಗಿದೆ.

ಅದರಲ್ಲಿಯೂ ಯುಟಿಲಿಟಿ ವೆಹಿಕಲ್ ಸೆಗ್ಮೆಂಟ್ ನಲ್ಲಿ ಕಂಪನಿಯು ಉತ್ತಮ ಪ್ರಗತಿ ಸಾಧಿಸಿದ್ದು, ಭಾರತದ ಮಾರುಕಟ್ಟೆಯಲ್ಲಿಯೇ 37,270 ಯುನಿಟ್ ಎಸ್‌ಯುವಿಗಳನ್ನು ಸೇಲ್ ಮಾಡಿದೆ. ವಿದೇಶಕ್ಕೆ ರಪ್ಪು ಮಾಡಿರುವುದು ಸೇರಿದಂತೆ ಒಟ್ಟು 38,164 ಯುನಿಟ್ ವಾಹನಗಳನ್ನು ಮಾರಿದೆ. ಮಹೀಂದ್ರಾ, ದೇಶೀಯ ವಾಣಿಜ್ಯ ವಾಹನ (Commercial Vehicles) ಮಾರಾಟದಲ್ಲೂ ಒಳ್ಳೆಯ ಬೆಳವಣಿಗೆ ಸಾಧಿಸಿದ್ದು, 23,613 ಯುನಿಟ್ ಸೇಲ್ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹೀಂದ್ರಾ ಆಟೋಮೋಟಿವ್ ವಿಭಾಗದ ಅಧ್ಯಕ್ಷ ವೀಜಯ್ ನಕ್ರಾ ಅವರು, 'ನಾವು ಈ ತಿಂಗಳು ಮತ್ತೊಂದು ದಾಖಲೆಗೆ ಸಾಕ್ಷಿಯಾಗಲು ಉತ್ಸುಕರಾಗಿದ್ದೇವೆ. ಭಾರತದ ಎಸ್‌ಯುವಿ ಮಾರುಕಟ್ಟೆಯಲ್ಲಿ 37,270 ಯುನಿಟ್ ಕಾರುಗಳನ್ನು ಮಾರಾಟ ಮಾಡಿ, ಶೇಕಡ 26% ಬೆಳವಣಿಗೆ ಸಾಧಿಸಿದ್ದೇವೆ. ಒಟ್ಟಾರೆ ಮಾರಾಟದಲ್ಲೂ ಉತ್ತಮ ಪ್ರಗತಿ ಕಂಡಿದ್ದೇವೆ. ಎಂದು ಹೇಳಿದ್ದಾರೆ.

ಮಹೀಂದ್ರಾ ಕಂಪನಿ ಈ ಮಟ್ಟದಲ್ಲಿ ಬೆಳವಣಿಗೆ ಕಾಣಲು ಅದರ ಬಲವಾದ ಎಸ್‌ಯುವಿ ಲೈನ್-ಅಪ್ ಕಾರಣವಾಗಿದ್ದು, ಕಂಪನಿಯು ಸ್ಕಾರ್ಪಿಯೋ ಎನ್, ಸ್ಕಾರ್ಪಿಯೋ ಕ್ಲಾಸಿಕ್, ಥಾರ್ ಹಾಗೂ XUV700ನ್ನು (ಆಗಸ್ಟ್ 32,270 ಯುನಿಟ್) ಪ್ರಮುಖವಾಗಿ ಮಾರಾಟ ಮಾಡುತ್ತದೆ. ಮೊದಲಿಗೆ ಸ್ಕಾರ್ಪಿಯೋ ಎನ್ ಬಗ್ಗೆ ತಿಳಿಯೋಣ. ಈ ಕಾರು, ರೂ.13.05 ಲಕ್ಷದಿಂದ ರೂ.24.51 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.
ಇದು, ಝಡ್2, ಝಡ್4, ಝಡ್6, ಝಡ್8 ರೂಪಾಂತರ ಹಾಗೂ ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಜೊತೆಗೆ, 2.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 2.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಪಡೆದಿದ್ದು, 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಸ್ಕಾರ್ಪಿಯೋ ಕ್ಲಾಸಿಕ್ ರೂ.13 ಲಕ್ಷದಿಂದ ರೂ.16.81 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಈ ಎಸ್‌ಯುವಿ, 2.2 - ಲೀಟರ್ mHawk ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರ ಹೊಂದಿದ್ದು, 132 PS ಗರಿಷ್ಠ ಪವರ್ ಮತ್ತು 300 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. 6 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.
ಮಹೀಂದ್ರಾ ಥಾರ್, ಪ್ರಮುಖ ಆಫ್-ರೋಡ್ ಎಸ್‌ಯುವಿಯಾಗಿ ಗುರುತಿಸಿಕೊಂಡಿದ್ದು, ರೂ.10.54 ಲಕ್ಷದಿಂದ ರೂ.16.78 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಎಂಜಿನ್ ಗೆ ಅನುಗುಣವಾಗಿ 15.2 kmpl ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮ್ಯಾನ್ಯುವಲ್ ಎಸಿ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಕಂಪನಿ 5 ಡೋರ್ ಥಾರ್ ಅಭಿವೃದ್ಧಿಪಡಿಸುತ್ತಿದೆ.
ಸದ್ಯ, ಭಾರತದ ಮಾರುಕಟ್ಟೆಯಲ್ಲಿ XUV700 ಎಸ್‌ಯುವಿ, ರೂ.14.01 ಲಕ್ಷದಿಂದ ರೂ.26.18 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಇದು, ಶಕ್ತಿಯುತ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, ಟ್ವಿನ್ ಡಿಜಿಟಲ್ ಸ್ಕ್ರೀನ್ಸ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications