ಬಹುಬೇಡಿಕೆಯ ಸ್ಕಾರ್ಪಿಯೋ ಕ್ಲಾಸಿಕ್ ಗ್ರಾಹಕರಿಗೆ ಶಾಕ್ ಕೊಟ್ಟ ಮಹೀಂದ್ರಾ

ಮಹೀಂದ್ರಾ (Mahindra) ಕಂಪನಿಯ ಗೇಮ್ ಚೇಂಜರ್ ಎಸ್‍ಯುವಿ ಸ್ಕಾರ್ಪಿಯೋ (Scorpio) ಎರಡು ದಶಕಗಳಿಂದ ಬ್ರ್ಯಾಂಡ್‌ನ ಅತ್ಯಂತ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಜನಪ್ರಿಯ ಸ್ವದೇಶಿ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ಕಂಪನಿಯು ಹಳೆಯ ತಲೆಮಾರಿನ ನವೀಕೃತ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಎಸ್‌ಯುವಿ ಮಾದರಿಯನ್ನು ಕಳೆದ ವರ್ಷ ಬಿಡುಗಡೆಗೊಳಿಸಿತ್ತು.

ನವೀಕರಿಸಿದ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿಯು ಗಟ್ಟಿಮುಟ್ಟಾದ ನಿರ್ಮಾಣ, ವಿಶ್ವಾಸಾರ್ಹ ಕಾರ್ಯಕ್ಷಮತೆ ಮತ್ತು ಸಿಗ್ನೇಚರ್ ಬೋಲ್ಡ್ ಲುಕ್‌ನೊಂದಿಗೆ ಎಸ್‍ಯುವಿ ದೇಶದಾದ್ಯಂತ ಗ್ರಾಹಕರನ್ನು ಆಕರ್ಷಿಸುತ್ತಿದೆ. ಇದರ ಜನಪ್ರಿಯತೆಯಿಂದಾಗಿ, ಮೂರನೇ ತಲೆಮಾರಿನ ಮಾದರಿಯ ಆಗಮನದ ಹೊರತಾಗಿಯೂ, ಸ್ಕಾರ್ಪಿಯೊ ಎನ್, ಮಹೀಂದ್ರಾ ಎರಡನೇ ತಲೆಮಾರಿನ ಮಾದರಿಯನ್ನು ಮಾರಾಟದಲ್ಲಿ ಇರಿಸಿದೆ. ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ ಈ ಮಾದರಿಗೆ ಸ್ಕಾರ್ಪಿಯೊ ಕ್ಲಾಸಿಕ್ ಎಂದು ಮರುನಾಮಕರಣ ಮಾಡಿದರು.

Mahindra Scorpio Classic

ಸ್ಕಾರ್ಪಿಯೋ ಕ್ಲಾಸಿಕ್ ರಿಫ್ರೆಶ್ ಲುಕ್ ಮತ್ತು ಪವರ್‌ಟ್ರೇನ್ ಅಪ್‌ಗ್ರೇಡ್‌ಗಳು ಎಸ್‌ಯುವಿಯ ಮಾರಾಟಕ್ಕೆ ಒಲವು ತೋರುತ್ತಿವೆ. ಇದೀಗ ಮಹೀಂದ್ರಾ ಕಂಪನಿಯು ಸದ್ದಿಲ್ಲದೇ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿಯ ಬೆಲೆಯನ್ನು ಹೆಚ್ಚಿಸಿದೆ. ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿಯ ಬೆಲೆಯು ರೂ.25 ಸಾವಿರವರೆಗೂ ಹೆಚ್ಚಿಸಿದೆ. ಇದೀಗ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿಯ ಪ್ರಾರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.13.25 ಲಕ್ಷವಾಗಿದೆ.

ಈ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿಯು S ಮತ್ತು S11 ಎಂಬ ಎರಡು ರೂಪಾಂತರಘಲ್ಲಿ ಲಭ್ಯವಿದೆ, ಈ ಎಸ್‍ಯುವಿಯ S ಎಂಬ ಮೂಲ ರೂಪಾಂತರವು ಎರಡು ಆಸನ ಸಂರಚನೆಗಳನ್ನು ಹೊಂದಿದೆ. ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿಯ ಟಾಪ್ ವೆರಿಯೆಂಟ್ S11 ಆಗಿದೆ. ನವೀಕೃತ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಎಸ್‍ಯುವಿ ಕೇವಲ ಎರಡು ವೆರಿಯೆಂಟ್‌ಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ.

Mahindra Scorpio Classic

ಹಳೆಯ ಸ್ಕಾರ್ಪಿಯೋ ಮಾದರಿಯಲ್ಲಿನ ಕೆಲವು ಫೀಚರ್ಸ್‌ಗಳೊಂದಿಗೆ ವಿನ್ಯಾಸದಲ್ಲಿ ತುಸು ಹೊಸ ಬದಲಾವಣೆ ತರಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಕೆಲವು ಪ್ರೀಮಿಯಂ ಫೀಚರ್ಸ್ ಸಹ ಹೊಂದಿದೆ. ಸ್ಕಾರ್ಪಿಯೋ-ಎನ್ ಮಾದರಿಗಿಂತ ಇದು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಸ್ಕಾರ್ಪಿಯೋ-ಎನ್ ಮಾದರಿಯು ಸಂಪೂರ್ಣವಾಗಿ ಹೊಸ ಮಾದರಿಯಾಗಿದ್ದರೆ ಸ್ಕಾರ್ಪಿಯೋ-ಕ್ಲಾಸಿಕ್ ಮಾದರಿಯು ಈ ಹಿಂದಿನ ತಲೆಮಾರಿನ ಫೀಚರ್ಸ್ ಗಳೊಂದಿಗೆ ಕೆಲವು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿತು.

ಈ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯ ಮುಂಭಾಗದ ಡಿಸೈನ್ ಮತ್ತು ಕ್ಯಾಬಿನ್ ಒಳಾಂಗಣದಲ್ಲಿ ಕೂಡ ಕೆಲವು ಪ್ರಮುಖ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಹೊಸ ಬದಲಾವಣೆಯ ನಂತರ ನವೀಕರಿಸಿದ ಮಾದರಿಯು ಹಳೆಯ ಮಾದರಿಯ ವಿನ್ಯಾಸವನ್ನೇ ನೆನಪಿಸುತ್ತದೆ. ಈ ಸ್ಕಾರ್ಪಿಯೋ ಕ್ಲಾಸಿಕ್ ಮಾದರಿಯು ಹೊಸದಾಗಿ 2.2 ಲೀಟರ್ ಎಂಹ್ವಾಕ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಇದರಲ್ಲಿ ಸ್ಕಾರ್ಪಿಯೋ-ಎನ್ ಮಾದರಿಯಲ್ಲಿ ಪೆಟ್ರೋಲ್ ಎಂಜಿನ್, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿಲ್ಲ. ಹೊಸ ಎಸ್‍ಯುವಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ. ಇದು 132 ಬಿಎಚ್‌ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ಹಳೆಯ ಮಾದರಿಯಲ್ಲಿನ ಎಂಜಿನ್‌ಗಿಂತಲೂ 55 ಕೆ.ಜಿ ಕಡಿಮೆ ತೂಕ ಹೊಂದಿದೆ.

ಇದರೊಂದಿಗೆ ಹೊಸ ಮಾದರಿಯು ಈ ಹಿಂದಿನಂತೆ ಹೊರನೋಟ ಹೊಂದಿದ್ದರು ಕೆಲವು ಹೊಸ ಫೀಚರ್ಸ್‌ಗಳು ಕಾರಿನ ನೋಟಕ್ಕೆ ಪ್ರಿಮಿಯಂ ಮೆರಗು ನೀಡಲಿದ್ದು, ಮರುವಿನ್ಯಾಸಗೊಳಿಸಲಾದ ಸಿಕ್ಸ್ ಸ್ಲಾಟ್ ಫ್ರಂಟ್ ಗ್ರಿಲ್ ಮತ್ತು ಬಂಪರ್ ಜೊತೆ ಹೊಸ ಲೊಗೊ ಸಾಕಷ್ಟು ಆಕರ್ಷಕವಾಗಿದೆ. ಮುಖ್ಯವಾಗಿ ಹೊಸ ಎಸ್‍ಯುವಿಯಲ್ಲಿ ಈ ಬಾರಿ ಎಲ್ಇಡಿ ಐಬೋ ಜೊತೆಗೆ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ನೀಡಲಾಗಿದ್ದು, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ ಸೇರಿದಂತೆ ಪ್ರಮುಖ ಬದಲಾವಣೆಗಳನ್ನು ಹೊಂದಿದೆ.

ಕ್ಲಾಸಿಕ್ ಮುಂಭಾಗದಲ್ಲಿ ಮತ್ತಷ್ಟು ಬದಲಾವಣೆಗಾಗಿ ಫಾಗ್ ಲ್ಯಾಂಪ್ ಹೌಸಿಂಗ್ ಸಹ ಬದಲಾವಣೆಗೊಳಿಸಲಾಗಿದೆ. ಇನ್ನು ಡೈಮಂಡ್ ಕಟ್ ಹೊಂದಿರುವ 17 ಇಂಚಿನ ಅಲಾಯ್ ವ್ಹೀಲ್, ಡ್ಯುಯಲ್ ಟೋನ್ ಕ್ಲಾಡಿಂಗ್, ಹಿಂಬದಿಯಲ್ಲಿ ಸಿಗ್ನಿಚೆರ್ ಟವರ್ ವಿನ್ಯಾಸದ ಎಲ್‌ಇಡಿ ಟೈಲ್ ಲ್ಯಾಂಪ್ ನೀಡಲಾಗಿದೆ. ಈ ಎಸ್‍ಯುವಿಯಲ್ಲಿ ವುಡ್ ಟ್ರಿಮ್ ಹೊಂದಿರುವ ಸುಧಾರಿತ ಡ್ಯಾಶ್‌ಬೋರ್ಡ್‌, 9 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟೀರಿಂಗ್ ವ್ಹೀಲ್, ಬ್ಲ್ಯಾಕ್ ಮತ್ತು ಬ್ರಿಝ್ ಇಂಟಿರಿಯರ್ ಹೊಂದಿದೆ.

Article Published On: Thursday, September 21, 2023, 13:37 [IST]
English summary
Mahindra scorpio classic suv gets price hike details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+