Mahindra: ವಿಜಯದಶಮಿ.. ಮಹೀಂದ್ರಾ ಸ್ಕಾರ್ಪಿಯೋ ಗ್ರಾಹಕರಿಗೆ ಪ್ರಮುಖ ಮಾಹಿತಿ

ಭಾರತದ ಜನಪ್ರಿಯ ಎಸ್‌ಯುವಿಯಾಗಿ ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ದಶಕಗಳಿಂದ ಮನೆಮಾತಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದೆ. ಈ ವಿಜಯದಶಮಿಗೆ ಹೊಚ್ಚ ಹೊಸ ಸ್ಕಾರ್ಪಿಯೋ ಕಾರನ್ನು ನಿಮ್ಮ ಮನೆಗೆ ತರಲು ಯೋಜಿಸಿದ್ದರೆ ಇಲ್ಲಿದೆ ಸಿಹಿಸುದ್ದಿ.

ಸದ್ಯ, ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಹಾಗೂ ಸ್ಕಾರ್ಪಿಯೋ ಕ್ಲಾಸಿಕ್ (Scorpio Classic) ಕಾಯುವಿಕೆ ಅವಧಿ ಗಣನೀಯವಾಗಿ ಇಳಿಕೆಯಾಗಿದೆ. ಈ ಹಿಂದೆ, ಹೆಚ್ಚಿನ ಸಂಖ್ಯೆಯ ಖರೀದಿದಾರರೂ ಸ್ಕಾರ್ಪಿಯೋ ಎಸ್‌ಯುವಿಗಳನ್ನು ಬುಕ್ಕಿಂಗ್ ಮಾಡಿದ್ದರಿಂದ ಆಗಸ್ಟ್ ತಿಂಗಳಲ್ಲಿ ಕಂಪನಿಯು 1.17 ಲಕ್ಷ ಆರ್ಡರ್ ಬಾಕಿ ಉಳಿಸಿಕೊಂಡಿತ್ತು.

Mahindra: ವಿಜಯದಶಮಿ.. ಮಹೀಂದ್ರಾ ಸ್ಕಾರ್ಪಿಯೋ ಗ್ರಾಹಕರಿಗೆ ಪ್ರಮುಖ ಮಾಹಿತಿ

ಈ ಅಕ್ಟೋಬರ್ ತಿಂಗಳು, ಮಹೀಂದ್ರಾ ಸ್ಕಾರ್ಪಿಯೋ ಎನ್ ಝಡ್2 (Z2) ರೂಪಾಂತರ ಸಾಕಷ್ಟು ಕಡಿಮೆ ಕಾಯುವಿಕೆ ಅವಧಿ ಹೊಂದಿದ್ದು, 4 - 5 ತಿಂಗಳಲ್ಲಿ ವಿತರಣೆಯಾಗುತ್ತದೆ. ಇಎಸ್‌ಪಿ (ESP) ವೇರಿಯೆಂಟ್ ಹೆಚ್ಚಿನ ಬೇಡಿಕೆ ಹೊಂದಿರುವುದರಿಂದ ನೀವು ಇವತ್ತು ಬುಕ್ಕಿಂಗ್ ಮಾಡಿದರೂ ಡೆಲಿವರಿ ಪಡೆಯಲು 9 ತಿಂಗಳು ಬೇಕಾಗುತ್ತದೆ.

ಇತರೆ ಸ್ಕಾರ್ಪಿಯೋ ಎನ್ ರೂಪಾಂತರಗಳು ಮೇಲಿನವುಗಳಿಗಿಂತ ಕಮ್ಮಿ ಕಾಯುವಿಕೆ ಅವಧಿಯನ್ನು ಒಳಗೊಂಡಿವೆ. ಈಗ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿ ವಿತರಣೆಗೆ ಹಿಡಿಯುವ ಸಮಯದ ಬಗ್ಗೆ ತಿಳಿಯೋಣ. ಈ ಕಾರು, ಎರಡು ರೂಪಾಂತರದ ಆಯ್ಕೆಯಲ್ಲಿ ಸಿಗುತ್ತದೆ. ಅವುಗಳೆಂದರೆ, ಎಸ್ (S) ಹಾಗೂ ಎಸ್11 (S11). ಇವು, ಕೇವಲ 4 ತಿಂಗಳಲ್ಲಿಯೇ ಗ್ರಾಹಕರ ಕೈ ಸೇರುತ್ತವೆ.

Mahindra: ವಿಜಯದಶಮಿ.. ಮಹೀಂದ್ರಾ ಸ್ಕಾರ್ಪಿಯೋ ಗ್ರಾಹಕರಿಗೆ ಪ್ರಮುಖ ಮಾಹಿತಿ

ಭಾರತದ ಮಾರುಕಟ್ಟೆಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N), ರೂ.13.26 ಲಕ್ಷದಿಂದ ರೂ.24.54 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿದಾರರಿಗೆ ದೊರೆಯುತ್ತದೆ. ಈ ಎಸ್‌ಯುವಿ ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಅವುಗಳೆಂದರೆ, 2.0 - ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹಾಗೂ 2.2 - ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್.

ಮಹೀಂದ್ರಾ ಸ್ಕಾರ್ಪಿಯೋ ಎನ್ ರೂಪಾಂತರಗಳಿಗೆ ಅನುಗುಣವಾಗಿ, 6 ಸ್ವೀಡ್ ಆಟೋಮೆಟಿಕ್/ 6 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತಿದೆ. 6 - 7 ಆಸನ ವ್ಯವಸ್ಥೆಯಲ್ಲಿ ಹೊಂದಿದ್ದು, ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಪೋಲಿ ಬ್ಲಾಕ್ ಸೇರಿದಂತೆ 7 ಬಣ್ಣಗಳೊಂದಿಗೆ ದೊರೆಯುತ್ತಿದೆ. 2WD (ಟೂ ವೀಲ್ ಡ್ರೈವ್) ಮತ್ತು 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.

ಮಹೀಂದ್ರಾ ಸ್ಕಾರ್ಪಿಯೋ ಎನ್, 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಿಲ್ - ಅಸಿಸ್ಟ್ ಕಂಟ್ರೋಲ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Scorpio Classic), ಬಗ್ಗೆ ಮಾತನಾಡುವುದಾದರೆ, ಇದು ರೂ.13.25 ಲಕ್ಷದಿಂದ ರೂ.17.06 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. 2.2 - ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 132 PS ಗರಿಷ್ಠ ಪವರ್ ಹಾಗೂ 300 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಒಳಗೊಂಡಿದೆ. 6-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ.

ಈ ಸ್ಕಾರ್ಪಿಯೋ ಕ್ಲಾಸಿಕ್, 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಪ್ರೊಜೆಕ್ಟರ್ ಹೆಡ್‌ಲೈಟ್‌, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ನು, ರಾಜ್ಯದಿಂದ ರಾಜ್ಯಕ್ಕೆ ಈ ಕಾಯುವಿಕೆ ಅವಧಿ ಬೇರೆ - ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಡೀಲರ್ ಶಿಪ್ ಸಂಪರ್ಕಿಸಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, October 19, 2023, 12:57 [IST]
English summary
Mahindra scorpio n scorpio classic suv waiting period drop good news
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+