Mahindra: ಮಹೀಂದ್ರಾ ಸ್ಕಾರ್ಪಿಯೋ ಎನ್ ಸಾರ್ವಕಾಲಿಕ ದಾಖಲೆಯತ್ತ..!
ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಮಹೀಂದ್ರಾ (Mahindra) ಜನಪ್ರಿಯತೆ ಗಳಿಸಿದೆ. ಅದರ ಸ್ಕಾರ್ಪಿಯೋ ಎನ್ (Scorpio N) ಎಸ್‌ಯುವಿಗೆ ಪ್ರತ್ಯೇಕ ಅಭಿಮಾನಿ ಬಳಗವಿದ್ದು, ಕಾಯುವಿಕೆ ಅವಧಿಯಲ್ಲಿ ಸಾರ್ವಕಾಲಿಕ ದಾಖಲೆ ಮಾಡಿದೆ. ನೀವು ಇವತ್ತು ಈ ಕಾರನ್ನು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು ಒಂದು ವರ್ಷದವರೆಗೆ ಕಾಯಲೇಬೇಕು.
ವಿವಿಧ ಮಾಧ್ಯಮಗಳ ಪ್ರಕಾರ, ಮಹೀಂದ್ರಾ ಕಂಪನಿಯು ಸ್ಕಾರ್ಪಿಯೋ ಎನ್ ಎಸ್‌ಯುವಿಯ 1.17 ಲಕ್ಷ ಆರ್ಡರ್‌ಗಳನ್ನು ಬಾಕಿ ಉಳಿಸಿಕೊಂಡಿದೆ. ಸ್ಕಾರ್ಪಿಯೋ ಎನ್ ಪೆಟ್ರೋಲ್ ರೂಪಾಂತರಗಳು 7 ರಿಂದ 8 ತಿಂಗಳು, ಡೀಸೆಲ್ ರೂಪಾಂತರಗಳು 10 ರಿಂದ 12 ತಿಂಗಳು ಕಾಯುವಿಕೆ ಅವಧಿಯನ್ನು ಹೊಂದಿವೆ. ಕಳೆದ ಜುಲೈನಲ್ಲಿ ಕಂಪನಿಯು 10,522 ಯುನಿಟ್ ಸ್ಕಾರ್ಪಿಯೋ ಸರಣಿ ಕಾರುಗಳನ್ನು ಮಾರಾಟ ಮಾಡಿ, ದಾಖಲೆ ನಿರ್ಮಿಸಿತ್ತು.

ಸ್ಕಾರ್ಪಿಯೋ ಎನ್ ಎಸ್‌ಯುವಿ ಹೊಂದಿರುವ ಬೇಡಿಕೆಯನ್ನು ಅರ್ಥ ಮಾಡಿಕೊಂಡಿರುವ ಮಹೀಂದ್ರಾ ಕಂಪನಿಯು, ಪೂರೈಕೆ ಸರಪಳಿ ಸಮಸ್ಯೆಯನ್ನು ಬಗೆಹರಿಸಲು ಸಾಕಷ್ಟು ಶ್ರಮಪಡುತ್ತಿದೆ. ಅದಕ್ಕಾಗಿ ಉತ್ಪಾದನೆಯನ್ನು ಹೆಚ್ಚಿಸಿದೆ ಎಂದು ಕೆಲವೇ ದಿನಗಳ ಹಿಂದೆ ವರದಿಯಾಗಿತ್ತು. ಈ ಎಸ್‌ಯುವಿಯ ಬೇಡಿಕೆ ಎಷ್ಟಿದೆ ಅಂದ್ರೆ, ಪ್ರಸ್ತುತ ತಿಂಗಳಿಗೆ 14,000 ಗ್ರಾಹಕರು ಕಾಯ್ದಿರಿಸುತ್ತಿದ್ದಾರೆ. ಅದು ಮುಂಬರುವ ದಿನಗಳಲ್ಲಿ ಹೆಚ್ಚಾಗುವ ನೀರಿಕ್ಷೆಯಿದೆ.
ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಹೀಂದ್ರಾ ಸ್ಕಾರ್ಪಿಯೋ ಎನ್ ರೂ.13.05 ಲಕ್ಷದಿಂದ 24.52 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಝಡ್2, ಝಡ್4, ಝಡ್6 ಮತ್ತು ಝಡ್8 ರೂಪಾಂತರ ಆಯ್ಕೆಯಲ್ಲಿ ಸಿಗುತ್ತದೆ. ಜೊತೆಗೆ ಆಕರ್ಷಕ ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಪೋಲಿ ಬ್ಲಾಕ್ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ.
ಸ್ಕಾರ್ಪಿಯೋ ಎನ್ ಪವರ್‌ಟ್ರೇನ್ ಬಗ್ಗೆ ಮಾತನಾಡುವುದಾದರೆ, ಇದು, ಎರಡು ಎಂಜಿನ್ ಆಯ್ಕೆಯನ್ನು ಹೊಂದಿದೆ. ಇದರ 2.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 200 bhp ಪವರ್, 380 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6 ಸ್ವೀಡ್ ಆಟೋಮೆಟಿಕ್/ 6 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.
ಇನ್ನೊಂದು, 2.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್, 172 bhp ಗರಿಷ್ಠ ಪವರ್ ಮತ್ತು 370 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 6 ಸ್ವೀಡ್ ಅಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ 2WD (ಟೂ ವೀಲ್ ಡ್ರೈವ್), 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ.
ಸ್ಕಾರ್ಪಿಯೋ ಎನ್ ಹಲವು ವೈಶಿಷ್ಟ್ಯಗಳನ್ನು ಪಡೆಯುವ ಮೂಲಕ ಅತ್ಯಾಧುನಿಕವಾಗಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಸೆಮಿ ಡಿಜಿಟಲ್ ಇನ್ಸ್ರುಮೆಂಟಲ್ ಕ್ಲಸ್ಟರ್, 360 - ಡಿಗ್ರಿ ಕ್ಯಾಮೆರಾ ಸೇರಿದಂತೆ ಹತ್ತಾರು ನವೀನ ಫೀಚರ್ಸ್ ಪಡೆದಿದೆ.
ಸುರಕ್ಷತೆಯ ದೃಷ್ಟಿಯಿಂದ ಮಹೀಂದ್ರಾ ಸ್ಕಾರ್ಪಿಯೋ ಎನ್ ಅತ್ಯುತ್ತಮವಾಗಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ ಉತ್ತಮ ರೇಟಿಂಗ್ ಪಡೆದಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 29.25 ಅಂಕ ಗಳಿಸುವ ಮೂಲಕ 5 ಸ್ಟಾರ್ ರೇಟಿಂಗ್ ಪಡೆದಿದೆ. ಆದರೆ, ಮಕ್ಕಳ ರಕ್ಷಣೆ ವಿಭಾಗದಲ್ಲಿ 3 ಸ್ಟಾರ್ ರೇಟಿಂಗ್ ಗಳಿಸಲಷ್ಟೇ ಶಕ್ತವಾಗಿದೆ. 6 ಏರ್‌ಬ್ಯಾಗ್ಸ್, ABS (ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್) ಸೇಫ್ಟಿ ಫೀಚರ್ಸ್ ಹೊಂದಿದೆ.
ಇದರೊಟ್ಟಿಗೆ, ಹಿಲ್ ಅಸಿಸ್ಟ್ ಕಂಟ್ರೋಲ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಒಳಗೊಂಡಿದೆ. ಇನ್ನು, ಮಹೀಂದ್ರಾ ಸ್ಕಾರ್ಪಿಯೋ ಎನ್ ಪಡೆದಿರುವ ಕಾಯುವಿಕೆ ಅವಧಿಯನ್ನು ಗಮನಿಸಿದಾಗ ಅದು ಎಷ್ಟರಮಟ್ಟಿಗೆ ಬೇಡಿಕೆ ಹೊಂದಿದೆ ಎಂಬುದು ಸುಲಭವಾಗಿ ಗೊತ್ತಾಗುತ್ತದೆ. ಮುಂಬರುವ ದಿನಗಳಲ್ಲಿ ಈ ಕಾರಿಗೆ ಮತ್ತಷ್ಟು ಬೇಡಿಕೆ ಹೆಚ್ಚಾಗಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications