Mahindra Scorpio: ನಟರಿಂದ ಸಾಮಾನ್ಯರವರೆಗೆ ಮಹೀಂದ್ರಾ ಸ್ಕಾರ್ಪಿಯೋ ಎಲ್ಲರ ನೆಚ್ಚಿನ ಕಾರು.. ಇದೇ ಸಾಕ್ಷಿ!
ದೇಶದಲ್ಲಿ ದೊಡ್ಡ ನಟರಿಂದ ಹಿಡಿದು ಸಾಮಾನ್ಯವರೆಗೆ ನಿಮ್ಮ ಮೆಚ್ಚಿನ ಕಾರು ಯಾವುದೆಂದು ಕೇಳಿದರೆ ತಕ್ಷಣ ಬರುವ ಒಂದೇ ಉತ್ತರ ಮಹೀಂದ್ರಾ ಸ್ಕಾರ್ಪಿಯೋ ಎಂದು. ಅಷ್ಟರಮಟ್ಟಿಗೆ ಈ ಕಾರು ಜನಪ್ರಿಯತೆ ಗಳಿಸಿದೆ. ಕೊಂಚ ತಡವಾಗಿ ಸೆಪ್ಟೆಂಬರ್ (2002) ತಿಂಗಳ ಸ್ಕಾರ್ಪಿಯೋ ಮಾರಾಟ ವರದಿ ಪ್ರಕಟಗೊಂಡಿದ್ದು, ಭರ್ಜರಿಯಾಗಿ ಸೇಲ್ ಆಗಿದೆ.
ಕಳೆದ ತಿಂಗಳು ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) 'ಎನ್' ಹಾಗೂ 'ಕ್ಲಾಸಿಕ್' ರೂಪಾಂತರಗಳು ಭರ್ಜರಿಯಾಗಿ ಮಾರಾಟವಾಗಿದ್ದು, 11,846 ಯುನಿಟ್ ಸೇಲ್ ಆಗಿವೆ. 2022ರ ಇದೇ ಅವಧಿಗೆ ಹೋಲಿಸಿದರೇ (9,536 ಯುನಿಟ್) ವರ್ಷದಿಂದ ವರ್ಷಕ್ಕೆ (Y-o-Y) ಶೇಕಡ 24.22% ಪ್ರಗತಿ ಸಾಧಿಸಿದೆ. ಇತ್ತೀಚೆಗೆ, ಮಹೀಂದ್ರಾ ಕಂಪನಿ ಸ್ಕಾರ್ಪಿಯೋ ಮಾರಾಟದಲ್ಲಿ 9 ಲಕ್ಷ ಮಾರಾಟ ಮೈಲಿಗಲ್ಲನ್ನು ಮುಟ್ಟಿತ್ತು.

ಮಹೀಂದ್ರಾ ಸ್ಕಾರ್ಪಿಯೋ ಎನ್ ಎಸ್‌ಯುವಿ ರೂ.13.26 ಲಕ್ಷದಿಂದ ರೂ.24.54 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಝಡ್2, ಝಡ್4, ಝಡ್6 ಹಾಗೂ ಝಡ್8 ರೂಪಾಂತರ ಹಾಗೂ ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಪೋಲಿ ಬ್ಲಾಕ್ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ದೊರೆಯುತ್ತದೆ. 6 ಹಾಗೂ 7 ಆಸನದೊಂದಿಗೆ ಸಿಗುತ್ತದೆ.
ಸ್ಕಾರ್ಪಿಯೋ ಎನ್ ಪವರ್‌ಟ್ರೇನ್ ಬಗ್ಗೆ ಮಾತನಾಡುವುದಾದರೆ, ಇದು 2.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 2.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ನೊಂದಿಗೆ ದೊರೆಯುತ್ತದೆ. 6 ಸ್ವೀಡ್ ಆಟೋಮೆಟಿಕ್/ 6 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. 2WD (ಟೂ ವೀಲ್ ಡ್ರೈವ್), 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.
ಈ ಕಾರು, 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡ್ಯುಯಲ್ - ಝೋನ್ ಕ್ಲೈಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಫ್ರಂಟ್, ರೇರ್ ಕ್ಯಾಮೆರಾ, ವೈರ್‌ಲೆಸ್ ಫೋನ್ ಚಾರ್ಜಿಂಗ್, 6 - ವೇ ಪವರ್ಡ್ ಡ್ರೈವರ್ ಸೀಟ್, ಸಿಂಗಲ್ - ಪೇನ್ ಸನ್‌ರೂಫ್ ಮತ್ತು ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತೆಯ ದೃಷ್ಟಿಯಿಂದ ಮಹೀಂದ್ರಾ ಸ್ಕಾರ್ಪಿಯೋ ಎನ್ ಎಸ್‌ಯುವಿಗೆ ಸರಿ ಸಾಟಿಯೇ ಇಲ್ಲ. ಗ್ಲೋಬಲ್ ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್ ಪಡೆದಿದೆ. 6 ಏರ್‌ಬ್ಯಾಗ್ಸ್, ABS (ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಅಸಿಸ್ಟ್ ಕಂಟ್ರೋಲ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಒಳಗೊಂಡಿದೆ.
ದೇಶೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic), ರೂ.13.25 ಲಕ್ಷದಿಂದ ರೂ.17.06 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಎಸ್ ಹಾಗೂ ಎಸ್11 ರೂಪಾಂತರದ ಆಯ್ಕೆಯಲ್ಲಿ ಸಿಗಲಿದ್ದು, 2.2 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 6 - ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ.
7 ಹಾಗೂ 9 ಆಸನ ವ್ಯವಸ್ಥೆಯನ್ನು ಹೊಂದಿರುವ ಈ ಕಾರು, 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಪ್ರೊಜೆಕ್ಟರ್ ಹೆಡ್‌ಲೈಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್ ಒಳಗೊಂಡಂತೆ ವಿವಿಧ ಫೀಚರ್ಸ್ ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications