Mahindra Scorpio: ಹ್ಯುಂಡೈ ಕ್ರೆಟಾ, ಮಾರುತಿ ಗ್ರ್ಯಾಂಡ್ ವಿಟಾರಾ ಹಿಂದಿಕ್ಕಿದ ಸ್ಕಾರ್ಪಿಯೋ, ಇದೇ ಫಸ್ಟ್!
ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಜನಪ್ರಿಯ ಫುಲ್-ಸೈಜ್ ಎಸ್‌ಯುವಿಯಾಗಿದೆ. ಇತ್ತೀಚೆಗೆ, ಅಕ್ಟೋಬರ್ ಮಾರಾಟ ವರದಿ ಪ್ರಕಟಗೊಂಡಿದ್ದು, ಮಿಡಲ್ ಸೈಜ್-ಎಸ್‌ಯುವಿಗಳು ಎಷ್ಟೇ ಖ್ಯಾತಿಗಳಿಸಿದ್ದರೂ ಅವುಗಳನ್ನು ಸ್ಕಾರ್ಪಿಯೋ ಹಿಂದಿಕ್ಕಿದೆ. ಈ ಮೂಲಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಿಂತ ಮುಂದಿದೆ.
ದಸರಾ ಹಬ್ಬದ ಹಿನ್ನೆಲೆ, ಮಹೀಂದ್ರಾ ಸ್ಕಾರ್ಪಿಯೋ ಎನ್ ಹಾಗೂ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿಗಳು ಭರ್ಜರಿಯಾಗಿ ಮಾರಾಟವಾಗಿವೆ. ಅಕ್ಟೋಬರ್ ತಿಂಗಳು (2023) 13,578 ಯುನಿಟ್ ಸೇಲ್ ಆಗಿದ್ದು, ಹೋದ ವರ್ಷಕ್ಕೆ ಹೋಲಿಕೆ ಮಾಡಿದರೆ (7,438 ಯುನಿಟ್) ವರ್ಷದಿಂದ ವರ್ಷದಿಂದ ವರ್ಷಕ್ಕೆ (YoY) ಶೇಕಡ 83% ಲಾಭವಾಗಿದೆ.

ಸ್ಕಾರ್ಪಿಯೋ ನಂತರ ಮಾರಾಟದಲ್ಲಿ ಹ್ಯುಂಡೈ ಕ್ರೆಟಾ (Hyundai Creta) ಇದ್ದು, ಕಳೆದ ತಿಂಗಳು 13,077 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಶೇಕಡ 10% ಬೆಳವಣಿಗೆ ಕಂಡಿದೆ. ಕಿಯಾ ಸೆಲ್ಟೋಸ್ (Kia Seltos) ಕಾರಿನ 12,362 ಯುನಿಟ್ ಸೇಲ್ ಆಗಿದ್ದು, ವರ್ಷದಿಂದ ವರ್ಷಕ್ಕೆ (YoY) ಶೇಕಡ 26% ಪ್ರಗತಿ ಸಾಧಿಸಿದೆ.
ನಂತರದ ಸ್ಥಾನದಲ್ಲಿ ಮಾರುತಿ ಸುಜುಕಿ ಹಾಗೂ ಟೊಯೊಟಾ ಇದ್ದು, ಮಾರುತಿ ಸುಜುಕಿ ಗ್ರಾಂಡ್ ವಿಟಾರಾ (Maruti Suzuki Grand Vitara)ವನ್ನು ಒಟ್ಟು 10,384 ಯುನಿಟ್‌ಗಳನ್ನು ಸೇಲ್ ಮಾಡಲಾಗಿದೆ. ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಕಾರುಗಳು 3,987 ಯುನಿಟ್ ಮಾರಾಟವಾಗಿವೆ. ಪೋಕ್ಸ್‌ವ್ಯಾಗನ್ ಟೈಗುನ್ ಮತ್ತು ಸ್ಕೋಡಾ ಕುಶಾಕ್ ಕಾರುಗಳು ಕ್ರಮವಾಗಿ 2,219 ಯುನಿಟ್ ಮತ್ತು 2,447 ಯುನಿಟ್ ಸೇಲ್ ಆಗಿವೆ.

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಹೀಂದ್ರಾ ಸ್ಕಾರ್ಪಿಯೋ ಎನ್, ರೂ.13.26 ಲಕ್ಷದಿಂದ ರೂ.24.54 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಇದು ಎರಡು ಪವರ್‌ಟ್ರೇನ್ ಆಯ್ಕೆಯನ್ನು ಲಭ್ಯವಿದೆ. ಅವುಗಳೆಂದರೆ 2.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 2.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್. 6-ಸ್ವೀಡ್ ಆಟೋಮೆಟಿಕ್/ 6-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಹೊಂದಿದೆ.
ಮಹೀಂದ್ರಾ ಸ್ಕಾರ್ಪಿಯೋ ಎನ್ ಎಸ್‌ಯುವಿ, ಝಡ್2, ಝಡ್4, ಝಡ್6 ಹಾಗೂ ಝಡ್8 ರೂಪಾಂತರ ಹಾಗೂ ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಪೋಲಿ ಬ್ಲಾಕ್, ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಜೊತೆಗೆ 2WD (ಟೂ ವೀಲ್ ಡ್ರೈವ್), 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿರುವುದು ವಿಶೇಷವಾಗಿದೆ.

ಈ ಕಾರು, ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದ್ದು, ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡ್ಯುಯಲ್ ಝೋನ್ ಕ್ಲೈಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಸೆಮಿ ಡಿಜಿಟಲ್ ಇನ್ಸ್ರುಮೆಂಟಲ್ ಕ್ಲಸ್ಟರ್ ಅನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್ಸ್, ABS (ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಅಸಿಸ್ಟ್ ಕಂಟ್ರೋಲ್ ಒಳಗೊಂಡಿದೆ.
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿ, ರೂ.13.25 ಲಕ್ಷದಿಂದ ರೂ.17.06 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಕೇವಲ 2.2-ಲೀಟರ್ ಡಿಸೇಲ್ ಎಂಜಿನ್ ಆಯ್ಕೆಯನ್ನು ಮಾತ್ರ ಹೊಂದಿದ್ದು, 132 PS ಗರಿಷ್ಠ ಪವರ್ ಹಾಗೂ 300 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. 6-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.
ಈ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿ ಭರ್ಜರಿ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲ್ಇಡಿ DRL, ಪ್ರೊಜೆಕ್ಟರ್ ಹೆಡ್‌ಲೈಟ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿಂದಂತೆ ವಿವಿಧ ಫೀಚರ್ಸ್ ಪಡೆದಿದೆ. ಸ್ಕಾರ್ಪಿಯೋ ಕಾರುಗಳಿಗೆ ಹ್ಯುಂಡೈ ಕ್ರೆಟಾ, ಸ್ಕೋಡಾ ಕುಶಾಕ್, ಎಂಜಿ ಆಸ್ಟರ್, ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಫೋಕ್ಸ್‌ವ್ಯಾಗನ್ ಟೈಗನ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications