ಭರ್ಜರಿ ಸಿಹಿಸುದ್ದಿ: ಮಹೀಂದ್ರಾ ಥಾರ್ 4X4 ಎಸ್‍ಯುವಿ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಮಹೀಂದ್ರಾ ಥಾರ್ (Mahindra Thar) ಎಸ್‍ಯುವಿಯು ಬಹಳ ವರ್ಷಗಳಿಂದ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಆಫ್-ರೋಡರ್ ಎಸ್‍ಯುವಿಯಾಗಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿರುವ ಪ್ರಸ್ತುತ ಜನರೇಷನ್ ಮಹೀಂದ್ರಾ ಥಾರ್ ಮಾದರಿಯು ಬಹುಬೇಡಿಯೊಂದಿಗೆ ಮಾರಾಟವಾಗುತ್ತಿದೆ. ಇದರಿಂದ ಬೇಡಿಕೆ ಹೆಚ್ಚಾಗಿರುವುದರಿಂದ ಮಹೀಂದ್ರಾ ಥಾರ್ ಕಾಯುವ ಅವಧಿಯು ಕೂಡ ಹೆಚ್ಚಾಗುತ್ತಿದೆ.

ಮಹೀಂದ್ರಾ ಕಂಪನಿಯು ಈ ಏಪ್ರಿಲ್ ತಿಂಗಳಿನಲ್ಲಿ ಥಾರ್ 4X4 ಎಸ್‍ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್ ಅನ್ನು ನೀಡುತ್ತಿದೆ. ಖರೀದಿದಾರರು ಥಾರ್ 4WD (ಫೋರ್-ವೀಲ್ ಡ್ರೈವ್) ಪೆಟ್ರೋಲ್ ಮತ್ತು ಡೀಸೆಲ್ ರೂಪಾಂತರಗಳ ಮೇಲೆ ರೂ.40,000 ವರೆಗೆ ನಗದು ರಿಯಾಯಿತಿಯನ್ನು ಘೋಷಿಸಿದೆ. ಈ ಎಸ್‍ಯುವಿಯ ಮಾದರಿಯ ಸರಣಿಯು ಎರಡು ಟ್ರಿಮ್‌ಗಳಲ್ಲಿ ಬರುತ್ತದೆ. ಅವುಗಳೆಂದರೆ, AX (O) ಮತ್ತು LX ಆಗಿದೆ.

Mahindra Thar

ಇದು ಮೂರು ಪವರ್‌ಟ್ರೇನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು RWD ಜೊತೆಗೆ 1.5 ಲೀಟರ್ ಡೀಸೆಲ್, MT ಮತ್ತು AT ಗೇರ್‌ಬಾಕ್ಸ್‌ಗಳೊಂದಿಗೆ 2.2 ಲೀಟರ್ ಡೀಸೆಲ್ ಮತ್ತು ಕೇವಲ 4WD ಸಿಸ್ಟಂ ಮತ್ತು 2.0 ಲೀಟರ್ ಪೆಟ್ರೋಲ್ ಜೊತೆಗೆ MT ಮತ್ತು AT ಟ್ರಾನ್ಸ್‌ಮಿಷನ್‌ಗಳು ಮತ್ತು 4WD ಮತ್ತು RWD ಆಯ್ಕೆಗಳನ್ನು ನೀಡಲಾಗಿದೆ.

ಥಾರ್ ಎಸ್‍ಯುವಿಯ 1.5 ಲೀಟರ್ ಡೀಸೆಲ್ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ, ಇದರಲ್ಲಿ ಮೊದಲಿಗೆ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.

Mahindra Thar

ಈ ಮಹೀಂದ್ರಾ ಥಾರ್ 4X4 ಆವೃತ್ತಿಯು ಎಲೆಕ್ಟ್ರಾನಿಕ್ ಬ್ರೇಕ್ ಲಾಕಿಂಗ್ ಡಿಫರೆನ್ಷಿಯಲ್‌ನೊಂದಿಗೆ ಬರುತ್ತದೆ ಅದು ಲೋ ಟ್ರ್ಯಾಕ್ಷನ್ ರಸ್ತೆಗಳಲ್ಲಿ ಉತ್ತಮ ಟ್ರ್ಯಾಕ್ಷನ್ ಅನ್ನು ಹೊಂದಿರುತ್ತದೆ. ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ. ಅದಕ್ಕಾಗಿಯೇ ವಾಹನ ಉತ್ಸಾಹಿಗಳು ಒಂದನ್ನು ಖರೀದಿಸಲು ನಿರಂತರವಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ.

ಇನ್ನು ಪ್ರಮುಖವಾಗಿ ಈ ಥಾರ್ ಎಸ್‍ಯುವಿಯ ಸುರಕ್ಷತೆಯ ವಿಷಯ ಹೇಳುವುದಾದರೆ, ಇದು ಅತ್ಯುತ್ತಮ ಸುರಕ್ಷತೆಯನ್ನು ಹೊಂದಿದೆ. ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಈ ಥಾರ್ ಎಸ್‍ಯುವಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿದೆ. ಈ ಎಸ್‍ಯುವಿಯ ವೈಟಿಂಗ್ ಪಿರೇಡ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದೆ.

Mahindra Thar

ಈ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಎಸ್‍ಯುವಿಯ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಈ ಥಾರ್ ಎಸ್‍ಯುವಿ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಒಳಗೊಂಡಿದೆ. ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಇನ್ನು ಈ ಎಸ್‍ಯುವಿಯಲ್ಲಿ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ.ಇದರೊಂದಿಗೆ ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್ ಮತ್ತು ರಿಯರ್ ವ್ಯೂ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಥಾರ್ ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಆಯ್ಕೆಯನ್ನು ನೀಡಿರುವುದರಿಂದ ಬೇಡಿಕೆ ಹೆಚ್ಚಾಗಿದೆ.

Article Published On: Thursday, April 6, 2023, 16:45 [IST]
English summary
Mahindra thar 4x4 available discount in april 2023 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+