ಎವರೆಸ್ಟ್ ವೈಟ್ ಬಣ್ಣದಲ್ಲಿ ಮಿಂಚಲಿದೆ ಮಹೀಂದ್ರಾ ಥಾರ್ 4X4! ಅಧಿಕೃತ ಪೋಸ್ಟ್ ಮಾಯ

ಮಹೀಂದ್ರಾ ಥಾರ್ ಎಸ್‍ಯುವಿಯು ಬಹಳ ವರ್ಷಗಳಿಂದ ಭಾರತದಲ್ಲಿ ಜನಪ್ರಿಯ ಆಫ್-ರೋಡರ್ ಎಸ್‍ಯುವಿಯಾಗಿದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿರುವ ಪ್ರಸ್ತುತ ಜನರೇಷನ್ ಮಹೀಂದ್ರಾ ಥಾರ್ ಮಾದರಿಯು ಬಹುಬೇಡಿಯೊಂದಿಗೆ ದಾಖಲೆ ಮಟ್ಟದಲ್ಲಿ ಮಾರಾಟವಾಗುತ್ತಿದೆ. ಬೇಡಿಕೆ ಹೆಚ್ಚಾಗಿರುವುದರಿಂದ ಮಹೀಂದ್ರಾ ಥಾರ್ ಎಸ್‍ಯುವಿಯ ಕಾಯುವ ಅವಧಿಯು ಕೂಡ ಹೆಚ್ಚಾಗುತ್ತಿದೆ.

ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಥಾರ್‌ 4WD ಎಸ್‍ಯುವಿಗೆ ಹೊಸ ಬಣ್ಣದ ಆಯ್ಕೆಯನ್ನು ನೀಡಿದೆ. ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಥಾರ್ 4WD ಎಸ್ಸ್‍ಯುವಿಯು ಎವರೆಸ್ಟ್ ವೈಟ್ ಬಣ್ಣದ್ ಆಯ್ಕೆಯಲ್ಲಿಯೂ ಲಭ್ಯವಿರುತ್ತದೆ ಎಂದು ಮಹೀಂದ್ರಾ ಕಂಪನಿಯ ಖಚಿತಪಡಿಸಿದೆ. ಎವರೆಸ್ಟ್ ವೈಟ್ ಕಲರ್ ಸ್ಕೀಮ್ ಬಣ್ಣದ ಆಯ್ಕೆಯು ಥಾರ್ ರೇರ್ ವ್ಹೀಲ್ ಡ್ರೈವ್ ಮಾದರಿಗೆ ಮಾತ್ರ ಸೀಮಿತವಾಗಿಲ್ಲ, ಫೋರ್-ವೀಲ್ ಡ್ರೈವ್ ಆವೃತ್ತಿಗೆ ಲಭ್ಯವಿರುತ್ತದೆ ಎಂದು ಮಹೀಂದ್ರಾ ಹೇಳಿದೆ.

ಎವರೆಸ್ಟ್ ವೈಟ್ ಬಣ್ಣದಲ್ಲಿ ಮಿಂಚಲಿದೆ ಮಹೀಂದ್ರಾ ಥಾರ್ 4X4!

ಮಹೀಂದ್ರಾ ಈ ಇನ್‌ಸ್ಟಾಗ್ರಾಮ್ ಪೋಸ್ಟ್ ಅನ್ನು ತಪ್ಪಾಗಿ ಅಪ್‌ಲೋಡ್ ಮಾಡಿದಂತೆ ತೋರುತ್ತಿದೆ, ಅದನ್ನು ಈಗ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗಿದೆ. ಆದರೂ ಇದು ಎವರೆಸ್ಟ್ ವೈಟ್ ಬಣ್ಣದಲ್ಲಿ ಮಹೀಂದ್ರಾ ಥಾರ್ 4X4 ಬರಲಿದೆ ಎಂದು ಸೂಚಿಸುತ್ತದೆ. ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ. ಅದಕ್ಕಾಗಿಯೇ ವಾಹನ ಉತ್ಸಾಹಿಗಳು ಒಂದನ್ನು ಖರೀದಿಸಲು ನಿರಂತರವಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ.

ಇದು ಕೆಲವು ಪ್ರಭಾವಶಾಲಿ ಸ್ಪೆಕ್ಸ್‌ಗಳನ್ನು ಹೊಂದಿದೆ: ಮಹೀಂದ್ರಾ ಥಾರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದು ಎರಡು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಇದರಲ್ಲಿ ಮೊದಲಿಗೆ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಎವರೆಸ್ಟ್ ವೈಟ್ ಬಣ್ಣದಲ್ಲಿ ಮಿಂಚಲಿದೆ ಮಹೀಂದ್ರಾ ಥಾರ್ 4X4!

ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಈ ಥಾರ್ ಎಸ್‍ಯುವಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿದೆ. ಈ ಎಸ್‍ಯುವಿಯ ವೈಟಿಂಗ್ ಪಿರೇಡ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದೆ.

ಈ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಎಸ್‍ಯುವಿಯ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಈ ಥಾರ್ ಎಸ್‍ಯುವಿ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಒಳಗೊಂಡಿದೆ.

ಎವರೆಸ್ಟ್ ವೈಟ್ ಬಣ್ಣದಲ್ಲಿ ಮಿಂಚಲಿದೆ ಮಹೀಂದ್ರಾ ಥಾರ್ 4X4!

ಮಹೀಂದ್ರಾ ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ.

ಇದರೊಂದಿಗೆ ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್ ಮತ್ತು ರಿಯರ್ ವ್ಯೂ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಥಾರ್ ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

Article Published On: Monday, March 13, 2023, 17:46 [IST]
English summary
Mahindra thar 4x4 suv gets everest white shade official post removed details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+