Mahindra Thar: ಬಿಡುಗಡೆಗೂ ಮುನ್ನವೇ.. ಶಕ್ತಿಯುತ ಮಹೀಂದ್ರಾ ಥಾರ್ 5-ಡೋರ್ ಬೆಂಗಳೂರಿನಲ್ಲಿ ಕಂಡುಬಂತು!

ಮಹೀಂದ್ರಾ ಥಾರ್ (Mahindra Thar) ಜನಪ್ರಿಯ ಆಫ್-ರೋಡ್ ಎಸ್‌ಯುವಿಯಾಗಿದೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ 3 ಡೋರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಕಂಪನಿಯು ಪ್ರತಿಸ್ಪರ್ಧಿಗಳಿಗೆ ಪೈಪೋಟಿ ನೀಡಲು 5-ಡೋರ್ ಥಾರ್ ಅಭಿವೃದ್ಧಿಪಡಿಸುವ ಕಾರ್ಯದಲ್ಲಿ ನಿರತವಾಗಿದ್ದು, ಬೆಂಗಳೂರಿನಲ್ಲಿ ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದೆ.

ನೂತನ ಥಾರ್ 5-ಡೋರ್ ಎಸ್‌ಯುವಿಯನ್ನು ಹಿಂದಿನ ಮಾದರಿಗೆ (3 ಡೋರ್ ಥಾರ್) ಹೋಲಿಸಿದರೇ ನೋಡಲು ಕೊಂಚ ದೊಡ್ಡದಾಗಿರುವಂತೆ ಭಾಸವಾಗುತ್ತದೆ. ಹೊಸ ಥಾರ್, ಆಕರ್ಷಕ ಟೈಲ್ ಲೈಟ್ ಪಡೆದುಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕಂಪನಿಯು ಥಾರ್ 5-ಡೋರ್ ಅನ್ನು ಈ ರೀತಿಯಾಗಿ ಪರೀಕ್ಷಾರ್ಥ ಸಂಚಾರಕ್ಕೆ ಒಳಪಡಿಸುತ್ತಿರುವುದನ್ನು ಗಮನಿಸಿದರೇ, ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಗೊಳಿಸಲು ಸಿದ್ಧವಾಗುತ್ತಿದೆ ಎಂಬುದು ಗೊತ್ತಾಗುತ್ತದೆ.

Mahindra Thar 5-

ಈ ಹಿಂದೆಯೂ ಮಹೀಂದ್ರಾ ಥಾರ್ 5-ಡೋರ್ ಪರೀಕ್ಷಾರ್ಥ ಸಂಚಾರ ನಡೆಸುವಾಗ ಅದರ ಸ್ಪೈ ಚಿತ್ರಗಳು ಇಂಟರ್ನೆಟ್ ನಲ್ಲಿ ಸೋರಿಕೆಯಾಗಿದ್ದವು. ಅದರಲ್ಲಿ ಥಾರ್ ಸಾಕಷ್ಟು ಬದಲಾವಣೆಗಳನ್ನು ಹೊಂದಿರುವುದನ್ನು ಗುರುತಿಸಬಹದು. ಹಳೆಯ ಮಾದರಿಗೆ ಹೋಲಿಸಿದರೆ, ದೊಡ್ಡದಾದ 12.3 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ ಒಳಗೊಂಡಿದೆ. ನವೀನ ಸ್ಟೀರಿಂಗ್ ವೀಲ್ ಪಡೆದಿದೆ. ಈ ಮೂಲಕ ಥಾರ್ 5-ಡೋರ್ ಕ್ಯಾಬಿನ್ ಒಳಭಾಗ ಸಾಕಷ್ಟು ಅತ್ಯಾಧುನಿಕವಾಗಿದೆ.

ಹೊಸ ಥಾರ್ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದುವ ನೀರಿಕ್ಷೆಯಿದೆ. ಮುಖ್ಯವಾಗಿ, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿ, ವೈರ್‌ಲೆಸ್ ಚಾರ್ಜರ್, ಕ್ರೂಸ್ ಕಂಟ್ರೋಲ್, ರೇರ್ ಎಸಿ ವೆಂಟ್ಸ್, ಆಟೋ ಡಿಮ್ಮಿಂಗ್ ಐಆರ್‌ವಿಎಂ, ಆಟೋ ಹೆಡ್‌ಲ್ಯಾಂಪ್ಸ್ ಸೇರಿದಂತೆ ಹತ್ತಾರು ಫೀಚರ್ಸ್ ಪಡೆದಿರಬಹುದು.

Mahindra Thar 5-

ಮಹೀಂದ್ರಾ ಥಾರ್ 5-ಡೋರ್ ಎರಡು ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ದೊರೆಯುವ ಸಾಧ್ಯತೆಯಿದೆ. 2.0 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 150 bhp ಪವರ್, 320 Nm ಪೀಕ್ ಟಾರ್ಕ್ ಉತ್ಪಾದಿಸಬಹುದು. ಮತ್ತೊಂದು, 2.2 - ಲೀಟರ್ ಡೀಸೆಲ್ ಎಂಜಿನ್ 130 bhp ಗರಿಷ್ಠ ಪವರ್ 300 Nm ಪೀಕ್ ಟಾರ್ಕ್ ಹೊರಹಾಕಬಹುದು ಎಂದು ಅಂದಾಜಿಸಲಾಗಿದೆ.

ಈ ಮಹೀಂದ್ರಾ ಥಾರ್ 5-ಡೋರ್ ಎಸ್‌ಯುವಿ ಬೆಲೆ ಎಷ್ಟಿರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಆದರೂ ರೂ.15.00 - 16.00 ಲಕ್ಷ ಬೆಲೆಗೆ ಸಿಗಬಹುದು ಎಂದು ಹೇಳಲಾಗಿದೆ. ಪ್ರಸ್ತುತ, ಭಾರತದ ಮಾರುಕಟ್ಟೆಯಲ್ಲಿ ಮಹೀಂದ್ರಾ ಥಾರ್ 3 ಡೋರ್ ರೂ.10.54 ಲಕ್ಷದಿಂದ ರೂ.16.78 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಪೆಟ್ರೋಲ್, ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ.

ಮಹೀಂದ್ರಾ ಥಾರ್ 3 ಡೋರ್, ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ 15.2 kmpl ಮೈಲೇಜ್ ನೀಡಲಷ್ಟೇ ಶಕ್ತವಾಗಿದೆ. ಈ ಕಾರು, ಎವರೆಸ್ಟ್ ವೈಟ್, ರೆಡ್ ರೇಜ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮ್ಯಾನ್ಯುವಲ್ ಎಸಿ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ ಒಳಗೊಂಡಂತೆ ಹಲವು ಫೀಚರ್ಸ್ ಹೊಂದಿದೆ.

ಇನ್ನು, ಮಹೀಂದ್ರಾ ಪ್ರತಿಸ್ಪರ್ಧಿಗಳಿಗೆ ಪೈಫೋಟಿ ನೀಡಲು ಥಾರ್ 5 - ಡೋರ್ ಅಭಿವೃದ್ಧಿಪಡಿಸುತ್ತಿರುವುದು ಅದರ ಗ್ರಾಹಕರಿಗೆ ಖುಷಿತಂದಿದೆ. ಈಗಾಗಲೇ ಹಲವು ಬಾರಿ ಪರೀಕ್ಷಾರ್ಥ ಸಂಚಾರ ನಡೆಸಿದ್ದು, ಇದನ್ನು ಗಮನಿಸಿದರೆ, ಕೆಲವೇ ದಿನಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು. ಬಹುತೇಕ ದೀಪಾವಳಿ ಹಬ್ಬದ ವೇಳೆಗೆ ಲಾಂಚ್ ಆಗಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, October 5, 2023, 13:25 [IST]
English summary
Mahindra thar 5 door spotted testing on bangalore
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+