Mahindra Thar: 5-ಡೋರ್ ಮಹೀಂದ್ರಾ ಥಾರ್‌ನಲ್ಲಿ ಸನ್‌ರೂಫ್ ಪಕ್ಕಾ!, ಇದು ಬಿಟ್ಟರೆ ಮತ್ತೇನಿದೆ ಹೊಸತು?
ದೇಶದಲ್ಲಿ ಮಹೀಂದ್ರಾ ಥಾರ್ (Mahindra Thar) ಜನಪ್ರಿಯ ಆಫ್ - ರೋಡ್ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ಸದ್ಯ, 3-ಡೋರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಕಂಪನಿಯು ಪ್ರತಿಸ್ಪರ್ಧಿಗಳಿಗೆ ಪೈಪೋಟಿ ನೀಡಲು 5-ಡೋರ್ ಮಹೀಂದ್ರಾ ಥಾರ್ ಅಭಿವೃದ್ಧಿಪಡಿಸುತ್ತಿದ್ದು, ಈಗಾಗಲೇ ಹಲವು ಬಾರಿ ಪ್ರಾಯೋಗಿಕ ಸಂಚಾರ ನಡೆಸುವಾಗ ಕಂಡುಬಂದಿದೆ.
ಸದ್ಯ, ನೂತನ 5-ಡೋರ್ ಮಹೀಂದ್ರಾ ಥಾರ್ ಮತ್ತೊಮ್ಮೆ ಪರೀಕ್ಷಾರ್ಥ ಓಡಾಟ ನಡೆಸುವ ಕ್ಯಾಮೆರಾ ಕಣ್ಣಿಗೆ ಬಿದಿದ್ದು, ಆ ಸ್ಪೈ ಚಿತ್ರಗಳು ಇಂಟರ್ನೆಟ್ ನಲ್ಲಿ ಸೋರಿಕೆಯಾಗಿವೆ. ಈ ಫೋಟೋಗಳನ್ನು ಗಮನಿಸಿದಾಗ ಮುಂಬರಲಿರುವ ಹೊಸ ಎಸ್‌ಯುವಿ, ವಿನ್ಯಾಸ ಹಾಗೂ ವೈಶಿಷ್ಟ್ಯದಲ್ಲಿ ಹಲವು ಬದಲಾವಣೆಯನ್ನು ಪಡೆದಿರುವುದನ್ನು ನೋಡಬಹುದು. ಪ್ರಮುಖವಾಗಿ, ಸನ್‌ರೂಫ್, ರೂಫ್-ಮೌಂಟೆಡ್ ಸ್ಪೀಕರ್ ಹೊಂದಿರುವುದನ್ನು ಕಾಣಬಹುದು.

ಈ ಹಿಂದಿನ 5-ಡೋರ್ ಮಹೀಂದ್ರಾ ಥಾರ್ ಸ್ಪೈ ಫೋಟೋಗಳನ್ನು ಗಮನಿಸಿದರೆ, ಮುಂಭಾಗ ನವೀನ ಗ್ರಿಲ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್, ಹೊಸ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಹಿಂಭಾಗದ ವಿನ್ಯಾಸದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿವೆ. ಜೊತೆಗೆ ಅಲಾಯ್ ವೀಲ್ಸ್, ಪಿಲ್ಲರ್ - ಮೌಂಟೆಡ್ ರೇರ್ ಡೋರ್ ಹ್ಯಾಂಡಲ್‌ನ್ನು ಪಡೆದಿದೆ.
ಹೊಸ 5-ಡೋರ್ ಮಹೀಂದ್ರಾ ಥಾರ್ ಎಂಜಿನ್ ಬಗ್ಗೆ ಎಲ್ಲಿಯೂ ಮಾಹಿತಿ ಲಭ್ಯವಿಲ್ಲ. ಆದರೆ, ಮೂಲಗಳ ಪ್ರಕಾರ, ಇದು 2.0 ಲೀಟರ್ ಪೆಟ್ರೋಲ್ ಹಾಗೂ 2.2 ಲೀಟರ್ ಡೀಸೆಲ್ ಎಂಜಿನ್, 6-ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಲಿದೆ. ಬೆಲೆ ವಿಚಾರವಾಗಿ ಹೇಳುವುದಾದರೆ, ರೂ.15.00 - 16.00 ಲಕ್ಷ ಬೆಲೆಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

ನೂತನ 5-ಡೋರ್ ಮಹೀಂದ್ರಾ ಥಾರ್ ಕೊಂಚ ದೊಡ್ಡದಾದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹೊಂದಿರಲಿದೆ. ಆ ಕುರಿತ ಸ್ಪೈ ಚಿತ್ರಗಳು ಸಹ ಕಂಡುಬಂದಿದ್ದವು. ಥಾರ್, ಬಹುತೇಕ 10 ಇಂಚಿನ ಟಚ್‌ಸ್ಕ್ರೀನ್ ಪಡೆದಿರಬಹುದು. ಇದರೊಟ್ಟಿಗೆ, ಫೋರ್-ಸ್ಪೋಕ್ ಸ್ಟೀರಿಂಗ್ ವೀಲ್, ಸರ್ಕ್ಯುಲರ್ ಎಸಿ ವೆಂಟ್ಸ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ಸ್, ಫ್ರಂಟ್ ಆರ್ಮ್‌ರೆಸ್ಟ್ ಸೇರಿದಂತೆ ವಿವಿಧ ಫೀಚರ್ಸ್ ಒಳಗೊಂಡಿರಲಿದೆ.
ಪ್ರಸ್ತುತ, ಭಾರತದ ಮಾರುಕಟ್ಟೆಯಲ್ಲಿ ಮಹೀಂದ್ರಾ ಥಾರ್, ರೂ.10.98 ಲಕ್ಷದಿಂದ ರೂ.16.94 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 1.5 ಲೀಟರ್ ಡೀಸೆಲ್, 2.2 - ಲೀಟರ್ ಡೀಸೆಲ್ ಹಾಗೂ 2.0 - ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 6 - ಸ್ವೀಡ್ ಮ್ಯಾನುವಲ್, 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಲಭ್ಯವಿದೆ.
ಮಹೀಂದ್ರಾ ಥಾರ್ 4WD (ಫೋರ್ ವೀಲ್ ಡ್ರೈವ್), RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ. 15.2 kmpl ಮೈಲೇಜ್ ನೀಡುತ್ತದೆ. ಎವರೆಸ್ಟ್ ವೈಟ್, ಅಕ್ವಾಮರೀನ್, ರೆಡ್ ರೇಜ್, ನಪೋಲಿ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕ್ರೂಸ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತೆ ದೃಷ್ಟಿಯಿಂದ ಥಾರ್ ಅತ್ಯುತ್ತಮವಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಡಿಸೆಂಟ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸರ್‌ನ್ನು ಒಳಗೊಂಡಿದೆ. ಇದಕ್ಕೆ ಫೋರ್ಸ್ ಗೂರ್ಖಾ ಮತ್ತು ಮಾರುತಿ ಸುಜುಕಿ ಜಿಮ್ನಿ ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಮಹೀಂದ್ರಾ ಥಾರ್ ಎಸ್‌ಯುವಿಯ ಕೆಲವು ರೂಪಾಂತರಗಳು ಈಗಲೂ 70 ವಾರಗಳವರೆಗೆ ಕಾಯುವಿಕೆ ಅವಧಿಯನ್ನು ಹೊಂದಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








