Mahindra Thar: ಸುನಾಮಿ ಎಬ್ಬಿಸಿದ ಮಹೀಂದ್ರಾ ಥಾರ್, ಪ್ರತಿಸ್ಪರ್ಧಿಗಳಿಗೆ ನಡುಕ!
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಮಹೀಂದ್ರಾ (Mahindra) ಜನಪ್ರಿಯತೆಯನ್ನು ಗಳಿಸಿದೆ. ಅದರ, ಆಫ್-ರೋಡ್ ಎಸ್‍ಯುವಿ, ಥಾರ್ (Thar) ಬಗ್ಗೆ ದೇಶೀಯ ಗ್ರಾಹಕರಲ್ಲಿ ಸಖತ್ ಕ್ರೇಜ್ ಇದೆ. ಈ ಎಸ್‍ಯುವಿ ದಿನದಿಂದ ದಿನಕ್ಕೆ ಗರಿಷ್ಠ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ಭಾರೀ ಬೇಡಿಕೆಯನ್ನು ಸೃಷ್ಟಿಸಿಕೊಳ್ಳುತ್ತಿದೆ.
ಸದ್ಯ ದೊರೆತ್ತಿರುವ ಮಾಹಿತಿ ಪ್ರಕಾರ, ಆಗಸ್ಟ್ ತಿಂಗಳ ಆರಂಭದಲ್ಲಿ ಮಹೀಂದ್ರಾ ಕಂಪನಿಯು ಥಾರ್ ಎಸ್‍ಯುವಿಯ 68,000 ಆರ್ಡರ್ ಗಳನ್ನು ಗ್ರಾಹಕರಿಗೆ ಪೂರೈಸಬೇಕಾಗಿದೆ. ಈಗಲೂ 2WD (ಟೂ ವೀಲ್ ಡ್ರೈವ್) ಹಾಗೂ 4WD (ಫೋರ್ ವೀಲ್ ಡ್ರೈವ್) ರೂಪಾಂತರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಕಾಯ್ದಿರಿಸುತ್ತಿದ್ದು, ತಿಂಗಳಿಗೆ ಏನಿಲ್ಲ ಅಂದ್ರೂ 10,000 ಬುಕ್ಕಿಂಗ್ ಪಡೆದುಕೊಳ್ಳುತ್ತಿದೆ. ಇದರಿಂದ ಕೆಲವು ವೇರಿಯೆಂಟ್ಸ್ ಕಾಯುವಿಕೆ ಅವಧಿ, 78 ವಾರಗಳಿಗೆ ತಲುಪಿದೆ.

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಹೀಂದ್ರಾ ಥಾರ್, ರೂ.10.54 ಲಕ್ಷದಿಂದ ರೂ.16.78 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಇದು, ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 15.2 kmpl ಮೈಲೇಜ್ ನೀಡುತ್ತದೆ. ಅಕ್ವಾಮರೀನ್, ಎವರೆಸ್ಟ್ ವೈಟ್, ರೆಡ್ ರೇಜ್, ನಪೋಲಿ ಬ್ಲ್ಯಾಕ್ ಮತ್ತು ಗ್ಯಾಲಕ್ಸಿ ಗ್ರೇ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.
ಮಹೀಂದ್ರಾ ಥಾರ್ ಬೆಲೆಗೆ ತಕ್ಕಂತೆ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಮುಖ್ಯವಾಗಿ, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕ್ರೂಸ್ ಕಂಟ್ರೋಲ್, ಎಲ್‌ಇಡಿ DRLs ಜೊತೆಯಲ್ಲಿ ಹ್ಯಾಲೊಜೆನ್ ಹೆಡ್‌ಲೈಟ್ಸ್, ಮ್ಯಾನ್ಯುವಲ್ ಎಸಿ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಅನ್ನು ಪಡೆಯುವ ಮೂಲಕ ಅತ್ಯಾಧುನಿಕವಾಗಿದೆ ಎಂದು ಹೇಳಿದರೇ ತಪ್ಪಾಗುವುದಿಲ್ಲ.
ಸುರಕ್ಷತೆಯ ದೃಷ್ಟಿಯಿಂದ ಮಹೀಂದ್ರಾ ಥಾರ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಿಲ್ ಡಿಸೆಂಟ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಸೇರಿದಂತೆ ಹಲವು ಫೀಚರ್ಸ್ ಹೊಂದಿದೆ. ಥಾರ್ ಎಸ್‍ಯುವಿಗೆ ಫೋರ್ಸ್ ಗೂರ್ಖಾ ಮತ್ತು ಮಾರುತಿ ಸುಜುಕಿ ಜಿಮ್ನಿ ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಕಂಪನಿಯು ಎಲೆಕ್ಟ್ರಿಕ್ ರೂಪದಲ್ಲಿ ಥಾರ್ ಅಭಿವೃದ್ಧಿಪಡಿಸುವ ಕೆಲಸದಲ್ಲಿ ನಿರತವಾಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ಮಹೀಂದ್ರಾಗೆ ಎಸ್‍ಯುವಿಗಳು ದೊಡ್ಡಮಟ್ಟದ ಆದಾಯವನ್ನು ತಂದುಕೊಡುತ್ತವೆ. ಪ್ರಸ್ತುತ, ಕಂಪನಿಯು 2.81 ಲಕ್ಷ ಆರ್ಡರ್ ಪೂರೈಸಬೇಕಿದ್ದು, ಅದಕ್ಕೆ ಈ ಆರ್ಥಿಕ ವರ್ಷದಲ್ಲಿ ತಯಾರಿಕೆಯನ್ನು ಶೇಕಡ 25% ಹೆಚ್ಚಿದ್ದು, ತಿಂಗಳಿಗೆ 49,000 ಯುನಿಟ್ ಕಾರುಗಳನ್ನು ಉತ್ಪಾದಿಸುತ್ತಿದೆ. ಕಳೆದ ವರ್ಷ, 39,000 ಯುನಿಟ್ ವಾಹನಗಳನ್ನು ತಯಾರಿಸುತ್ತಿತ್ತು. ಈಗಲೂ ಮಹೀಂದ್ರಾ, ತನ್ನ ವಿವಿಧ ಮಾದರಿಗಳಿಗೆ ಮಾಸಿಕ 48,000 ಹೊಸ ಆರ್ಡರ್ ಸ್ವೀಕರಿಸುತ್ತಿದೆ.
ಇದರಿಂದ ಕಂಪನಿಯ ಕಾರುಗಳ ಕಾಯುವಿಕೆ ಅವಧಿಯು 5 - 6 ತಿಂಗಳಿಗೆ ತಲುಪಿದ್ದು, ಕೆಲವು ಮಾದರಿಗಳಿಗೆ ನೀವು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆ ಪಡೆಯಲು ಒಂದೂವರೆ ವರ್ಷ ಕಾಯಬೇಕು. ಅದರಲ್ಲೂ ಮಹೀಂದ್ರಾದ ಸ್ಕಾರ್ಪಿಯೋ ಕ್ಲಾಸಿಕ್ ಮತ್ತು ಸ್ಕಾರ್ಪಿಯೋ ಎನ್ ಎಸ್‍ಯುವಿಗಳಿಗೆ ಭಾರೀ ಬೇಡಿಕೆಯಿದ್ದು, 1.17 ಲಕ್ಷ ಯುನಿಟ್ ಆರ್ಡರ್ ಪೂರೈಸಬೇಕಿದ್ದು, ಪ್ರಸ್ತುತ ತಿಂಗಳಿಗೆ 14,000 ಗ್ರಾಹಕರು ಬುಕ್ಕಿಂಗ್ ಮಾಡುತ್ತಿದ್ದಾರೆ.
ಮಹೀಂದ್ರಾ XUV700 ಕೂಡ ದೊಡ್ಡ ಮಟ್ಟದಲ್ಲಿ ಬೇಡಿಕೆ ಹೊಂದಿದ್ದು, 77,000 ಯುನಿಟ್ ಆರ್ಡರ್ ಬಾಕಿಯಿವೆ. ಈ ಎಸ್‍ಯುವಿ ಮಾಸಿಕ 8,000 ಬುಕ್ಕಿಂಗ್ ಪಡೆಯುತ್ತಿದೆ. ಇದರೊಟ್ಟಿಗೆ ಕಂಪನಿಯು 8,400 ಯುನಿಟ್ ಬೊಲೆರೋವನ್ನು ಗ್ರಾಹಕರಿಗೆ ಪೂರೈಸಬೇಕಾಗಿದೆ. ಇನ್ನು, ಆಫ್-ರೋಡ್ ಎಸ್‍ಯುವಿಯಾಗಿದ್ದರೂ 'ಥಾರ್'ನ್ನು ಈ ಮಟ್ಟಿಗೆ ಗ್ರಾಹಕರು ಸ್ವೀಕರಿಸುತ್ತಾರೆ ಎಂದು ಕಂಪನಿ ಅಂದಾಜಿಸಿರಲಿಲ್ಲ. ಥಾರ್ ಒಂದೇ ಸ್ಕಾರ್ಪಿಯೋ ಸರಣಿ ಕಾರುಗಳ ಅರ್ಧದಷ್ಟು ಬುಕ್ಕಿಂಗ್ ಪಡೆದುಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications