ಭರ್ಜರಿ ಆಫರ್: ಮಹೀಂದ್ರಾ ಥಾರ್ ಎಸ್‍ಯುವಿ ಮೇಲೆ ರೂ.1 ಲಕ್ಷದವರೆಗೆ ಡಿಸ್ಕೌಂಟ್

ಮಹೀಂದ್ರಾ ಥಾರ್ ಎಸ್‍ಯುವಿಯು ಬಹಳ ವರ್ಷಗಳಿಂದ ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯ ಆಫ್-ರೋಡರ್ ಎಸ್‍ಯುವಿಯಾಗಿದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿರುವ ಪ್ರಸ್ತುತ ಜನರೇಷನ್ ಮಹೀಂದ್ರಾ ಥಾರ್ ಮಾದರಿಯು ಬಹುಬೇಡಿಯೊಂದಿಗೆ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇದರಿಂದ ಬೇಡಿಕೆ ಹೆಚ್ಚಾಗಿರುವುದರಿಂದ ಮಹೀಂದ್ರಾ ಥಾರ್ ಎಸ್‍ಯುವಿಯ ಕಾಯುವ ಅವಧಿಯು ಕೂಡ ಹೆಚ್ಚಾಗುತ್ತಿದೆ.

ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ಎರಡನೇ ತಲೆಮಾರಿನ ಥಾರ್‌ನ ರಿಯರ್-ವೀಲ್ ಡ್ರೈವ್ (RWD) ರೂಪಾಂತರವನ್ನು ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷದ ಪ್ರಾರಂಭಿಕ ಪರಿಚಯಾತ್ಮಕ ಬೆಲೆಯಲ್ಲಿ ಬಿಡುಗಡೆಗೊಳಿಸಿತು. ಇದೀಗ ಮಹೀಂದ್ರಾ ಕಂಪನಿಯು ಕಂಪನಿಯು ಥಾರ್ ಎಸ್‍ಯುವಿಯ 4WD ರೂಪಾಂತರ ಮೇಲೆ ರೂ.1 ಲಕ್ಷದವರೆಗೆ ರಿಯಾಯಿತಿಯೊಂದಿಗೆ ಲಭ್ಯವಿದೆ. ಮಹೀಂದ್ರಾ ಥಾರ್ ಪೆಟ್ರೋಲ್ ಎಟಿ 4ಡಬ್ಲ್ಯೂಡಿ ರೂಪಾಂತರದ ಮೇಲೆ ರೂ.45,000 ನಗದು ರಿಯಾಯಿತಿಯೊಂದಿಗೆ ನೀಡಲಾಗುತ್ತಿದೆ.

ಮಹೀಂದ್ರಾ ಥಾರ್ ಎಸ್‍ಯುವಿ ಮೇಲೆ ರೂ.1 ಲಕ್ಷದವರೆಗೆ ಡಿಸ್ಕೌಂಟ್

ಗ್ರಾಹಕರು ರೂ 45,000 ನಗದು ರಿಯಾಯಿತಿಯನ್ನು ಹೊಂದಲು ಬಯಸದಿದ್ದರೆ ರೂ 60,000 ಮೌಲ್ಯದ ಪರಿಕರಗಳ ಪ್ಯಾಕೇಜ್ ಅನ್ನು ಸಹ ಪಡೆಯಬಹುದು. ಇನ್ನು ವರದಿಗಳ ಪ್ರಕಾರ, ಥಾರ್ ಪೆಟ್ರೋಲ್ ಎಟಿ 4ಡಬ್ಲ್ಯೂಡಿ ರೂಪಾಂತರದ ಮೇಲೆ ರೂ 10,000 ಮೌಲ್ಯದ ಕಾರ್ಪೊರೇಟ್ ಬೋನಸ್‌ಗಳು ಮತ್ತು ರೂ 15,000 ಮೌಲ್ಯದ ವಿನಿಮಯ ಬೋನಸ್‌ಗಳನ್ನು ಸಹ ನೀಡಲಾಗುತ್ತದೆ. ಇನ್ನು ಹೆಚ್ಚುವರಿಯಾಗಿ, ಥಾರ್‌ನ ಈ ಆವೃತ್ತಿಯನ್ನು ವಿಮಾ ಪ್ರಯೋಜನಗಳು ಮತ್ತು ಮೂರು ವರ್ಷಗಳ ನಿರ್ವಹಣೆ ಪ್ಯಾಕೇಜ್‌ನೊಂದಿಗೆ ಸಹ ನೀಡಲಾಗುತ್ತದೆ.

ಈ ಎಲ್ಲಾ ಪ್ರಯೋಜನಗಳು, ಸುಮಾರು 1 ಲಕ್ಷ ರೂ.ಗಳವರೆಗೆ ಮಹೀಂದ್ರಾ ಥಾರ್ ಪೆಟ್ರೋಲ್ AT 4WD ರೂಪಾಂತರದ ಮೇಲೆ ಮಾತ್ರ ನೀಡಲಾಗುತ್ತದೆ, ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ. ಅದಕ್ಕಾಗಿಯೇ ವಾಹನ ಉತ್ಸಾಹಿಗಳು ಒಂದನ್ನು ಖರೀದಿಸಲು ನಿರಂತರವಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಇದು ಕೆಲವು ಪ್ರಭಾವಶಾಲಿ ಸ್ಪೆಕ್ಸ್‌ಗಳನ್ನು ಹೊಂದಿದೆ: ಮಹೀಂದ್ರಾ ಥಾರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದು ಎರಡು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ.

ಇದರಲ್ಲಿ ಮೊದಲಿಗೆ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಈ ಥಾರ್ ಎಸ್‍ಯುವಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿದೆ. ಈ ಎಸ್‍ಯುವಿಯ ವೈಟಿಂಗ್ ಪಿರೇಡ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದೆ. ಈ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಎಸ್‍ಯುವಿಯ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಈ ಥಾರ್ ಎಸ್‍ಯುವಿ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಒಳಗೊಂಡಿದೆ. ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ.

ಇದರೊಂದಿಗೆ ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್ ಮತ್ತು ರಿಯರ್ ವ್ಯೂ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಥಾರ್ ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದೆ.

Article Published On: Tuesday, February 21, 2023, 20:00 [IST]
English summary
Mahindra thar suv with attract discounts details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+