Mahindra: ಹಬ್ಬ ಬಂತು.. ಮಹೀಂದ್ರಾದಿಂದ ಬೃಹತ್ ಘೋಷಣೆ

ದೇಶದ ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಮಹೀಂದ್ರಾ (Mahindra) ಜನಪ್ರಿಯತೆ ಗಳಿಸಿದೆ. ಈ ಅಕ್ಟೋಬರ್ (2023) ತಿಂಗಳು ಎಕ್ಸ್‌ಯುವಿ300, ಎಕ್ಸ್‌ಯುವಿ400, ಬೊಲೆರೋ, ಬೊಲೆರೋ ನಿಯೋ ಹಾಗೂ ಮರಾಜೊ ಕಾರಿನ ಮೇಲೆ ರೂ.1.25 ಲಕ್ಷದವರೆಗೆ ರಿಯಾಯಿತಿ ಘೋಷಿಸಿದೆ. ಆದರೆ, ಎಕ್ಸ್‌ಯುವಿ 700, ಸ್ಕಾರ್ಪಿಯೋ-ಎನ್, ಥಾರ್ ಮೇಲೆ ಯಾವುದೇ ಡಿಸ್ಕೌಂಟ್ ನೀಡಿಲ್ಲ.

ಮಹೀಂದ್ರಾದ ಜನಪ್ರಿಯ ಮಾದರಿಯಾದ ಎಕ್ಸ್‌ಯುವಿ300 ನಗದು ರಿಯಾಯಿತಿ ಸೇರಿದಂತೆ ಒಟ್ಟು ರೂ.90,000 ವರೆಗೆ ಡಿಸ್ಕೌಂಟ್ ಆಫರ್ ಒಳಗೊಂಡಿದೆ. ಈ ಕಾರು, ರೂ.7.99 ಲಕ್ಷದಿಂದ ರೂ.14.76 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದು, 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್, TGDI 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದೆ. 6-ಸ್ವೀಡ್ ಮ್ಯಾನುವಲ್/ ಎಎಂಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ.

Mahindra: ಹಬ್ಬ ಬಂತು.. ಮಹೀಂದ್ರಾದಿಂದ ಬೃಹತ್ ಘೋಷಣೆ

ಐದು ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರುವ ಈ ಕಾರು, 20.1 kmpl ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸಿಂಗಲ್-ಪೇನ್ ಸನ್‌ರೂಫ್, ಕ್ರೂಸ್ ಕಂಟ್ರೋಲ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆ ದೃಷ್ಟಿಯಿಂದ 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಂ), ಆಲ್-ವೀಲ್ ಡಿಸ್ಕ್ ಬ್ರೇಕ್‌ ಅನ್ನು ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ400 ಎಲೆಕ್ಟ್ರಿಕ್ ಕಾರು, ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಗರಿಷ್ಠ ರೂ.1.25 ಲಕ್ಷದವರೆಗೆ ನಗದು ರಿಯಾಯಿತಿಯನ್ನು ಒಳಗೊಂಡಿದೆ. ಈ ಕಾರು, ರೂ.15.99 ಲಕ್ಷದಿಂದ ರೂ.19.39 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದು, 34.5 kWh ಹಾಗೂ 39.4 kWh ಬ್ಯಾಟರಿ ಪ್ಯಾಕ್ ಹೊಂದಿದೆ.

Mahindra: ಹಬ್ಬ ಬಂತು.. ಮಹೀಂದ್ರಾದಿಂದ ಬೃಹತ್ ಘೋಷಣೆ

ಇವುಗಳಲ್ಲಿ ತಕ್ಕಂತೆ 375 km ರಿಂದ 456 km ರೇಂಜ್ ಕೊಡುತ್ತದೆ. ಈ ಕಾರು, ಫನ್, ಫಾಸ್ಟ್ ಮತ್ತು ಫಿಯರ್‌ಲೆಸ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಪಡೆದಿದ್ದು, 7.0 -ಇಂಚಿನ ಟಚ್‌ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕನೆಕ್ಟೆಡ್ ಕಾರ್ ಟೆಕ್ನಲಾಜಿ, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ಸ್, ಆಕರ್ಷಕ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಅಕ್ಟೋಬರ್ ತಿಂಗಳು, ಮಹೀಂದ್ರಾ ಮರಾಜೊ (Mahindra Marazzo) ರೂ.73,300 ವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಮರಾಜೊ ರೂ.14.12 ಲಕ್ಷದಿಂದ ರೂ.16.48 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಗ್ರಾಹಕರಿಗೆ ದೊರೆಯುತ್ತದೆ. 1.5-ಲೀಟರ್ ಡೀಸೆಲ್ ಎಂಜಿನ್, 6 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಜೊತೆಗೆ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ಫೀಚರ್ಸ್ ಪಡೆದಿದೆ.

ಮಹೀಂದ್ರಾ ಬೊಲೆರೋ (Mahindra Bolero) ರೂ.70,000 ರವರೆಗೆ ಡಿಸ್ಕೌಂಟ್ ಆಫರ್ ಹೊಂದಿದೆ. ಈ ಕಾರು, ರೂ.9.79 ಲಕ್ಷದಿಂದ ರೂ.10.80 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 1.5-ಲೀಟರ್ ಡೀಸೆಲ್ ಎಂಜಿನ್, 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. 16.0 kmpl ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮ್ಯಾನುಯಲ್ ಎಸಿ ಸೇರಿದಂತೆ ವಿವಿಧ ಫೀಚರ್ಸ್ ಒಳಗೊಂಡಿದೆ.

ಮಹೀಂದ್ರಾ ಬೊಲೆರೋ ನಿಯೋ (Mahindra Bolero Neo) ರೂ.50,000 ವರೆಗೆ ರಿಯಾಯಿತಿ ಪಡೆದಿದೆ. ಬೊಲೆರೋ ನಿಯೋ ರೂ.9.63 ಲಕ್ಷದಿಂದ ರೂ.12.14 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ. ಇನ್ನು, ಮುಂಬರುವ ದಸರಾ ಹಬ್ಬದ ಹಿನ್ನೆಲೆ, ಮಹೀಂದ್ರಾ ಇಷ್ಟೊಂದು ದೊಡ್ಡಮಟ್ಟದಲ್ಲಿ ರಿಯಾಯಿತಿ ನೀಡಿದೆ ಎಂದು ಹೇಳಲಾಗಿದೆ. ಈ ಡಿಸ್ಕೌಂಟ್ ಆಫರ್ ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಡೀಲರ್ ಶಿಪ್ ಸಂಪರ್ಕಿಸಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, October 9, 2023, 12:34 [IST]
English summary
Mahindra this car get discount of up to rs 1 25 lakh
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+