ಧೂಳೆಬ್ಬಿಸಲು ನವೀಕರಣದೊಂದಿಗೆ ಬಂತು ಮಹೀಂದ್ರಾ XUV300

ಭಾರತದ ಪ್ರಮುಖ ವಾಹನ ತಯಾರಕ ಕಂಪನಿ ಮಹೀಂದ್ರಾ ತಯಾರಿಸುವ ಕಾರುಗಳನ್ನು ಪ್ರತಿಯೊಬ್ಬರು ಇಷ್ಟಪಟ್ಟು ಖರೀದಿಸುತ್ತಾರೆ. ಅವುಗಳ ಕೈಗೆಟುಕುವ ಬೆಲೆ ಹಾಗೂ ಸುರಕ್ಷತಾ ವೈಶಿಷ್ಟ್ಯಗಳು ಹೆಚ್ಚಿನ ಜನರನ್ನು ಆಕರ್ಷಿಸುತ್ತದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದೀಗ, ನವೀಕರಣದೊಂದಿಗೆ ಮಹೀಂದ್ರಾದ ಸಬ್-4 ಮೀಟರ್ ಎಸ್‌ಯುವಿ 'XUV300' ಮಾರುಕಟ್ಟೆಗೆ ಬಂದಿದೆ.

ಮುಂದಿನ ತಿಂಗಳಿಂದ (ಏಪ್ರಿಲ್) ದೇಶಾದ್ಯಂತ ಜಾರಿಯಾಗುತ್ತಿರುವ BS6 ಹಂತ 2 ಎಮಿಷನ್ ಮಾನದಂಡಗಳಿಗೆ ಅನುಗುಣವಾಗಿ ಪವರ್‌ಟ್ರೇನ್‌ ಅಪ್ಡೇಟ್ ನೊಂದಿಗೆ ನೂತನ ಮಹೀಂದ್ರಾ XUV300 ಎಸ್‌ಯುವಿ ಮಾರುಕಟ್ಟೆಯನ್ನು ಪ್ರವೇಶಿಸಿದೆ. ರೂ 8.41 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿದೆ. ಈ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದ್ದು, ಗ್ರಾಹಕರು ಲೈಕ್ ಮಾಡುತ್ತಿದ್ದಾರೆ.

ಧೂಳೆಬ್ಬಿಸಲು ನವೀಕರಣದೊಂದಿಗೆ ಬಂತು ಮಹೀಂದ್ರಾ XUV300

ಹೊಚ್ಚ ಹೊಸ ಮಹೀಂದ್ರಾ XUV300 ಪವರ್‌ಟ್ರೇನ್‌ ಬಗ್ಗೆ ಮಾತನಾಡುವುದಾದರೆ, ಇದು ಎರಡು ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಮೊದಲನೆಯದು 1.2 ಲೀಟರ್ 3 ಸಿಲಿಂಡರ್ ಡೈರೆಕ್ಟ್ ಇಂಜೆಕ್ಷನ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 109 bhp ಗರಿಷ್ಠ ಪವರ್ ಹಾಗೂ 200 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 6 ಸ್ವೀಡ್ ಮ್ಯಾನುವಲ್ ಟ್ರಾಸ್ಮಿಷನ್ ಅಥವಾ 6 ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ.

ಮತ್ತೊಂದು, 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, ಇದು 115 bhp ಗರಿಷ್ಠ ಪವರ್ ಹಾಗೂ 300 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಇದು ಕೂಡ 6 ಸ್ವೀಡ್ ಮ್ಯಾನುವಲ್ ಟ್ರಾಸ್ಮಿಷನ್ ಅಥವಾ 6 ಸ್ವೀಡ್ AMT ಗೇರ್ ಬಾಕ್ಸ್ ಪಡೆದಿದೆ. ಜೊತೆಗೆ ಈ ಮಹೀಂದ್ರಾ XUV300 ಗ್ರಾಹಕರಿಗೆ ಬರೋಬ್ಬರಿ 14 ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಾಗಲಿದೆ ಎಂದು ಹೇಳಬಹುದು.

ಧೂಳೆಬ್ಬಿಸಲು ನವೀಕರಣದೊಂದಿಗೆ ಬಂತು ಮಹೀಂದ್ರಾ XUV300

ನೂತನ ಮಹೀಂದ್ರಾ XUV300 ಎಸ್‌ಯುವಿ ಹತ್ತಾರು ನವೀನ ವೈಶಿಷ್ಟ್ಯಗಳನ್ನು ಪಡೆದಿದ್ದು, ಇದು ಬಹುತೇಕರನ್ನು ಆಕರ್ಷಿಸುತ್ತದೆ. ಎಂದು ಹೇಳಿದರೆ ತಪ್ಪಾಗುವುದಿಲ್ಲ. ಡ್ಯೂಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ದೊಡ್ಡದಾದ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್‌ ಪ್ಲೇ, ಆಂಡ್ರಾಯ್ಡ್ ಆಟೋ, ಸ್ಟೀರಿಂಗ್ ಮೋಡ್ಸ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ಸ್, ಎಲ್‌ಇಡಿ DRLs ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಇಷ್ಟೇ ಅಲ್ಲದೆ, ಈ ಮಹೀಂದ್ರಾ XUV300 ಎಸ್‌ಯುವಿ, ಸುರಕ್ಷತೆಯ ದೃಷ್ಟಿಯಿಂದಲ್ಲೂ ಅತ್ಯುತ್ತಮವಾಗಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ ಗ್ಲೋಬಲ್ NCAPಯಿಂದ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದ್ದು, ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಅವುಗಳೆಂದರೆ, 6 ಏರ್‌ಬ್ಯಾಗ್ಸ್, CBC (ಕಾರ್ನರ್ ಬ್ರೇಕಿಂಗ್ ಕಂಟ್ರೋಲ್), EBD (ಎಲೆಕ್ಟ್ರಾನಿಕ್ ಬ್ರೇಕಿಂಗ್ ಸಿಸ್ಟಮ್) ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್, TC (ಟ್ರಾಕ್ಷನ್ ಕಂಟ್ರೋಲ್)ಯನ್ನು ಪಡೆದಿದೆ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಈ ಮಹೀಂದ್ರಾ XUV300, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್, ಟಾಟಾ ನೆಕ್ಸನ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್, ಮಾರುತಿ ಸುಜುಕಿ ಬ್ರೆಝಾ ಹಾಗೂ ಹೋಂಡಾ WR-Vಗಳಿಗೆ ಭಾರೀ ಪೈಪೋಟಿ ನೀಡಲಿದೆ. ಮುಂಬರುವ ಎಮಿಷನ್ ಮಾನದಂಡಗಳಿಗೆ ಈ ಕಾರನ್ನು ನವೀಕರಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದಲೂ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದ್ದು, ಹೆಚ್ಚಿನ ಗ್ರಾಹಕರು ಇಷ್ಟಪಟ್ಟು ಖರೀದಿಸಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Article Published On: Tuesday, March 7, 2023, 10:17 [IST]
English summary
Mahindra xuv300 updated with new powertrain details kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+