Mahindra: ಮಹೀಂದ್ರಾ ಈ ಕಾರಿಗೆ 4 ಲಕ್ಷ ರೂಪಾಯಿ ರಿಯಾಯಿತಿ, ಈಗ ಬಿಟ್ಟರೆ ಸಿಗುವುದಿಲ್ಲ

ದೇಶದಲ್ಲಿ ಮಹೀಂದ್ರಾ (Mahindra) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಈ ವರ್ಷಾಂತ್ಯದಲ್ಲಿ ಕಂಪನಿಯ ಹಲವು ಡೀಲರ್‌ಶಿಪ್‌ಗಳು ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಣೆ ಮಾಡಿದ್ದು, ಮಹೀಂದ್ರಾದ ಏಕೈಕ ಎಲೆಕ್ಟ್ರಿಕ್ ಕಾರು ಎಕ್ಸ್‌ಯುವಿ400 (XUV400) ರೂ.4 ಲಕ್ಷವರೆಗೆ ಡಿಸ್ಕೌಂಟ್ ಆಫರ್ ಪಡೆದಿದೆ.

ನೀವು ನೂತನ ಮಹೀಂದ್ರಾ ಎಕ್ಸ್‌ಯುವಿ400 (Mahindra XUV400) ಎಸ್‌ಯುವಿ ಖರೀದಿಸಲು ಯೋಚಿಸಿದ್ದರೆ, ಇಸಿ ಹಾಗೂ ಇಎಲ್ ರೂಪಾಂತರಗಳು ಕ್ರಮವಾಗಿ ರೂ.3 ಲಕ್ಷ ಹಾಗೂ 4 ಲಕ್ಷ ನಗದು ರಿಯಾಯಿತಿ ಪ್ರಯೋಜನವನ್ನು ಹೊಂದಿವೆ. ರಾಜ್ಯದಿಂದ ರಾಜ್ಯಕ್ಕೆ ವೇರಿಯಂಟ್, ಡೀಲರ್‌ಶಿಪ್‌, ಸ್ಟಾಕ್ ಆಧರಿಸಿ, ಈ ಡಿಸ್ಕೌಂಟ್ ಆಫರ್ ಬೇರೆ ಇರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Mahindra: ಮಹೀಂದ್ರಾ ಈ ಕಾರಿಗೆ 4 ಲಕ್ಷ ರೂಪಾಯಿ ರಿಯಾಯಿತಿ, ಈಗ ಬಿಟ್ಟರೆ ಸಿಗುವುದಿಲ್ಲ

ಡಿಸೆಂಬರ್ 31ರವರೆಗೆ ಮಾತ್ರ ಈ ರಿಯಾಯಿತಿ ಸೌಲಭ್ಯಗಳು ಸಿಗಲಿದೆ ಎಂದು ವರದಿಯಾಗಿದೆ. ಆ ಬಳಿಕ, ಜನವರಿ (2024)ಯಿಂದ ಮಹೀಂದ್ರಾ, ದೇಶಾದ್ಯಂತ ತನ್ನ ಕಾರುಗಳ ಬೆಲೆಯನ್ನು ಹೆಚ್ಚಿಸಲಿದೆ. ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ400 ರೂ.15.99 ಲಕ್ಷದಿಂದ ರೂ.19.39 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, 5 - ಮೊನೊಟೋನ್, 5 - ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.

ಮಹೀಂದ್ರಾ ಎಕ್ಸ್‌ಯುವಿ400 (Mahindra XUV400) ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಅವುಗಳೆಂದರೆ, 34.5 kWh ಹಾಗೂ 39.4 kWh ಬ್ಯಾಟರಿ ಪ್ಯಾಕ್. ಈ ಕಾರಿನ ಎಲೆಕ್ಟ್ರಿಕ್ ಮೋಟಾರ್ 150 PS ಗರಿಷ್ಠ ಪವರ್ ಹಾಗೂ 310 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

34.5 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿರುವ ಕಾರು, 375 ಕಿ.ಮೀ ಹಾಗೂ 39.4 kWh ಬ್ಯಾಟರಿ ಪ್ಯಾಕ್ ಪಡೆದಿರುವ ಕಾರು, ಸಂಪೂರ್ಣ ಚಾರ್ಜ್ ನಲ್ಲಿ 456 ಕಿಲೋಮೀಟರ್ ಕ್ರಮಿಸುತ್ತದೆ. ಎಕ್ಸ್‌ಯುವಿ400 ಬ್ಯಾಟರಿ ಪ್ಯಾಕ್, 50 kW ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ 0 - 80% ಚಾರ್ಜ್ ಆಗಲು ಕೇವಲ 50 ನಿಮಿಷ ತೆಗೆದುಕೊಳ್ಳುತ್ತದೆ. ಮನೆಯ ವಿದ್ಯುತ್ ಬಳಕೆಯಲ್ಲಿ 13 ಗಂಟೆ ಬೇಕಾಗುತ್ತದೆ.

ಮಹೀಂದ್ರಾ ಎಕ್ಸ್‌ಯುವಿ400 ಎಲೆಕ್ಟ್ರಿಕ್ ಕಾರು, ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ಭರಪೂರ ವೈಶಿಷ್ಟ್ಯಗಳನ್ನು ಹೊಂದಿದೆ. 7 - ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, 60+ ಕನೆಕ್ಟ್ದ್ ಕಾರ್ ಫೀಚರ್ಸ್, ಸಿಂಗಲ್ - ಪೇನ್ ಸನ್‌ರೂಫ್, ಕ್ರೂಸ್ ಕಂಟ್ರೋಲ್, ಪುಶ್ - ಬಟನ್ ಸ್ಟಾರ್ಟ್-ಸ್ಟಾಪ್, ಎಲೆಕ್ಟ್ರಿಕಲಿ ಅಡ್ಜಸ್ಟ್ಏಬಲ್ & ಫೋಲ್ಡ್ಏಬಲ್ ORVM ಅನ್ನು ಪಡೆದಿದೆ.

ಈ ಮಹೀಂದ್ರಾ ಎಕ್ಸ್‌ಯುವಿ400 ಸುರಕ್ಷತೆ ದೃಷ್ಟಿಯಿಂದ ಅತ್ಯಾಧುನಿಕವಾಗಿದ್ದು, 6 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಕಾರ್ನರಿಂಗ್ ಬ್ರೇಕ್ ಕಂಟ್ರೋಲ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ. ಈ ಕಾರಿಗೆ ಟಾಟಾ ನೆಕ್ಸಾನ್ ಇವಿ (Tata Nexon EV) ಪ್ರಬಲ ಪ್ರತಿಸ್ಪರ್ಧಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, December 22, 2023, 12:05 [IST]
English summary
Mahindra xuv400 suv get upto rs 4 lakh discount in december 456 km range
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+