Maruti Baleno: ಆಕರ್ಷಕ ಬೆಲೆಯ ಈ ಕಾರಿನ ಬೆಲೆ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದ ಮಾರುತಿ ಸುಜುಕಿ
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಎಲ್ಲಾ ಪ್ರಯಾಣಿಕ ವಾಹನಗಳ ಮೇಲೆ ಬೆಲೆ ಏರಿಕೆಯನ್ನು ಘೋಷಿಸಿದೆ. ಇದೀಗ ಮಾರುತಿ ಸುಜುಕಿ ಕಂಪನಿಯು ಬೆಲೆ ಹೆಚ್ಚಳದ ಪ್ರಮಾಣವನ್ನು ಬಹಿರಂಗಪಡಿಸಿದ್ದಾರೆ. ಜನಪ್ರಿಯ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಬೆಲೆ ಏರಿಕೆಯನ್ನು ಪಡೆದುಕೊಂಡಿದೆ.
ಮಾರುತಿ ಸುಜುಕಿ ಬಲೆನೊ ರೂ.5,000 ವರೆಗೆ ಬೆಲೆ ಏರಿಕೆಯನ್ನು ಪಡೆದುಕೊಂಡಿದೆ. ಮಾರುತಿ ಬಲೆನೊ ಕಾರಿನ ಸಿಗ್ಮಾ, ಡೆಲ್ಟಾ, ಝೀಟಾ ಮತ್ತು ಆಲ್ಫಾ ರೂಪಾಂತರಗಳಲ್ಲಿ ಲಭ್ಯವಿದೆ. ಈ ಎಲ್ಲಾ ರೂಪಾಂತರಗಳ ಬೆಲೆಯು ರೂ.5,000 ವರೆಗೆ ಏರಿಕೆಯನ್ನು ಪಡೆದಿವೆ. ಮಾರುತಿ ಸುಜುಕಿ ಹ್ಯಾಚ್‌ಬ್ಯಾಕ್ ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 89 bhp ಮತ್ತು 113 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು AMT ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇನ್ನು ಬಲೆನೊ ಸಿಎನ್‌ಜಿ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಲಭ್ಯವಿದೆ. ಸಿಎನ್‌ಜಿ ವರ್ಷನ್ ನಲ್ಲಿ 76 bhp ಮತ್ತು 98.5 Nm ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಬಲೆನೊ ಸಿಎನ್‌ಜಿ ಬೂಟ್‌ನಲ್ಲಿ 55-ಲೀಟರ್ ಸಿಎನ್‌ಜಿ ಟ್ಯಾಂಕ್ ಅನ್ನು ಪಡೆಯುತ್ತದೆ. ಇದರರ್ಥ ಅದರ ಪೆಟ್ರೋಲ್-ಕೌಂಟರ್‌ಪಾರ್ಟ್‌ಗೆ ಹೋಲಿಸಿದರೆ ಬೂಟ್ ಸಾಮರ್ಥ್ಯವು ಕಡಿಮೆಯಾಗಿದೆ.
ಬಲೆನೊ ಸಿಎನ್‌ಜಿಯು 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ಲಭ್ಯವಿದ. ಈ ಕಾರಿನ ಮುಂಭಾಗ ನೆಕ್ಸಾವೆವ್ ಹನಿಕೊಂಬ್ ಗ್ರಿಲ್, ಫ್ಲಾಟರ್ ಕ್ಲಾಮ್‌ಶೆಲ್ ಬಾನೆಟ್ ಮತ್ತು ಪರಿಷ್ಕೃತ ಮುಂಭಾಗದ ಬಂಪರ್ ಜೊತೆಗೆ ದೊಡ್ಡ ಫಾಗ್ ಲ್ಯಾಂಪ್ ಹೌಸಿಂಗ್‌ಗಳನ್ನು ಹೊಂದಿದೆ. ಈ ಮಾರುತಿ ಬಲೆನೊ ಕಾರಿನಲ್ಲಿ ಸೈಡ್ ಪ್ರೊಫೈಲ್ ಹಿಂದಿನ ಮಾದರಿಯಂತೆಯೇ ಕಂಡರೂ ಕ್ರೋಮ್ ಸ್ಟ್ರಿಪ್ ಅನ್ನು ಹೊರತುಪಡಿಸಿ ಈಗ ಕೆಳಗಿನ ವಿಂಡೋ ಲೈನ್‌ನಿಂದ ಹಿಂದಿನ ಕ್ವಾರ್ಟರ್ ಗ್ಲಾಸ್‌ಗೆ ಚಲಿಸುವಂತೆ ವಿನ್ಯಾಸಗೊಳಿಸಲಾಗಿದೆ.

ಇನ್ನು ಈ ಕಾರಿನ ಹಿಂಭಾಗದಲ್ಲಿ ಟೈಲ್‌ಗೇಟ್ ವಿನ್ಯಾಸ, ಹೊಸ ಸಿ-ಆಕಾರದ ಎಲ್‌ಇಡಿ ಟೈಲ್-ಲೈಟ್‌ಗಳು ಮತ್ತು ರಿಪ್ರೊಫೈಲ್ಡ್ ರಿಯರ್ ಬಂಪರ್ ಅನ್ನು ಹೊಂದಿದೆ. ಇನ್ನು ಸ್ಟ್ಯಾಂಡರ್ಡ್ ಬಲೆನೊ ಕಾರು ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರಾಂಡ್ಯೂರ್ ಗ್ರೇ, ಸೆಲೆಸ್ಟಿಯಲ್ ಬ್ಲೂ, ಓಪ್ಯುಲೆಂಟ್ ರೆಡ್ ಮತ್ತು ಲಕ್ಸ್ ಬೀಜ್ ಎನ್ನುವ ಆರು ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಕಂಪನಿಯು ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಹೆಚ್ಚಿನ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿದೆ, ಸುರಕ್ಷತೆಗಾಗಿ ಏರ್‌ಬ್ಯಾಗ್ ಸೌಲಭ್ಯದ ಜೊತೆಗೆ ಹೊಸ ಬಲೆನೊದಲ್ಲಿ ಹೊಸ ಸುರಕ್ಷತಾ ವೈಶಿಷ್ಟ್ಯಗಳಲ್ಲಿ ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್, ಎಬಿಎಸ್, ಕೀ ಲೆಸ್ ಎಂಟ್ರಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಇಎಸ್‌ಪಿ ಮತ್ತು ಇಬಿಡಿ ಸಹ ಸೇರ್ಪಡೆಯಾಗಲಿದ್ದು, ಸುಜುಕಿ ಕಾರ್ ಕನೆಕ್ಟ್ ತಂತ್ರಜ್ಞಾನದಲ್ಲೂ ಸಹ ಸುಧಾರಿತ ವೈಶಿಷ್ಟ್ಯತೆಗಳನ್ನು ಹೊಂದಿದೆ.

ಇದರ ಜೊತೆಗೆ ತುರ್ತುಸೇವೆಗಳಿಗಾಗಿ ಸುಧಾರಿತ ಟೆಲಿಮ್ಯಾಟಿಕ್ಸ್ ಪರಿಹಾರಗಳನ್ನು ಒಳಗೊಂಡಿರಲಿದ್ದು, ಸುಜುಕಿ ಕಾರ್ ಕನೆಕ್ಟ್ ಫೀಚರ್ಸ್‍ಗಳನ್ನು ಸ್ಮಾರ್ಟ್‌ಫೋನ್ ಅಪ್ಲಿಕೇಷನ್ ಮೂಲಕ ಇಂಧನ ಲಭ್ಯತೆ, ಸಾಗಬಹುದಾದ ದೂರ, ಓಡೋಮೀಟರ್, ಕಾರ್ ಡಯಾಗ್ನೋಸಿಸ್, ಒಳಗೊಂಡಂತೆ ವಿವಿಧ ಮಾಹಿತಿಗಳ ಸಂಪೂರ್ಣ ಡೇಟಾ ಪಡೆದುಕೊಳ್ಳಬಹುದು. ಮಾರುತಿ ಸುಜುಕಿ ಬಲೆನೊ ತನ್ನ ವರ್ಗದ ಮೊದಲ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ.
ಇನ್ನು ಕನೆಕ್ಟೆಡ್ ಕಾರ್ ಟೆಕ್ ಫೀಚರ್ಸ್ ಜೊತೆಗೆ ಮಾರುತಿ ಕಂಪನಿಯು ಹೊಸ ಬಲೆನೊದಲ್ಲಿ 9-ಇಂಚಿನ ಡಿಜಿಟಲ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಈ ವಿಭಾಗದ ಮೊದಲ ಫೀಚರ್ಸ್ ಗಳನ್ನು ಸಹ ನೀಡುತ್ತದೆ. ಈ ಮಾರುತಿ ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಐ20, ಟಾಟಾ ಆಲ್ಟ್ರೊಜ್ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications