Maruti Suzuki: ಮಾರುತಿ ಸುಜುಕಿಯ ಈ ಜನಪ್ರಿಯ ಕಾರಿಗೆ ಭಾರೀ ರಿಯಾಯಿತಿ, 30 km ಮೈಲೇಜ್.. 6 ಲಕ್ಷ ಬೆಲೆ
ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಸಂಸ್ಥೆಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಬಲೆನೊ (Baleno) ಈ ವರ್ಷಾಂತ್ಯದಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದುಕೊಂಡಿದ್ದು, ಡಿಸೆಂಬರ್ 31 ರವರೆಗೆ ರಿಯಾಯಿತಿ ಸೌಲಭ್ಯಗಳು ಲಭ್ಯವಿರಲಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಾರುತಿ ಸುಜುಕಿ ಬಲೆನೊ (Maruti Suzuki Baleno) ಮ್ಯಾನುವಲ್ ಹಾಗೂ ಆಟೋಮೆಟಿಕ್ ರೂಪಾಂತರಗಳು ರೂ.42,000 ರಿಯಾಯಿತಿ ಪ್ರಯೋಜನವನ್ನು ಹೊಂದಿವೆ. ಇದರಲ್ಲಿ ರೂ.25,000 ವರೆಗೆ ನಗದು ರಿಯಾಯಿತಿ (Cash Discount), ರೂ.15,000 ವರೆಗೆ ವಿನಿಮಯ ಬೋನಸ್ (Exchange Bonuses) ಹಾಗೂ ರೂ.2,000 ರವರೆಗೆ ಕಾರ್ಪೊರೇಟ್ ಡಿಸ್ಕೌಂಟ್ (Corporate Discount) ಅನ್ನು ಒಳಗೊಂಡಿದೆ.

ಗರಿಷ್ಠ ಮೈಲೇಜ್ ನೀಡುವ ಸಿಎನ್‌ಜಿ ರೂಪಾಂತರ ರೂ.20,000 ವರೆಗೆ ನಗದು ರಿಯಾಯಿತಿಯನ್ನು ಮಾತ್ರ ಪಡೆದಿದೆ. ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸುವ ಬಲೆನೊ, ರೂ.6.61 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಜೊತೆಗೆ ಸಿಗ್ಮಾ, ಡೆಲ್ಟಾ, ಜಿಟಾ, ಆಲ್ಪಾ ರೂಪಾಂತರ ಹಾಗೂ ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡಿಯರ್ ಗ್ರೇ ಸೇರಿದಂತೆ 7 ಬಣ್ಣಗಳೊಂದಿಗೆ ಸಿಗುತ್ತದೆ.
ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್ ಎರಡು ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2 - ಲೀಟರ್ ಪೆಟ್ರೋಲ್ ಎಂಜಿನ್, 90 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದ್ದು, 5 - ಸ್ವೀಡ್ ಮ್ಯಾನುವಲ್, 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

ಸಿಎನ್‌ಜಿ ರೂಪಾಂತರವು ಇದೇ ಎಂಜಿನ್ ಪಡೆದಿದೆ. ಆದರೆ, 77.49 PS ಪವರ್ ಮತ್ತು 98.5 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದ್ದು, 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಮಾತ್ರ ದೊರೆಯುತ್ತದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ, ಪೆಟ್ರೋಲ್ ರೂಪಾಂತರ 22.35 - 22.94 kmpl, ಸಿಎನ್‌ಜಿ ವೇರಿಯೆಂಟ್ 30.61 km/kg ಇಂಧನ ದಕ್ಷತೆಯನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಬಲೆನೊ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, 4 ಸ್ಪೀಕರ್ ಹೊಂದಿರುವ ಸೌಂಡ್ ಸಿಸ್ಟಮ್, ಹೆಡ್ಸ್ - ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ಫೀಚರ್ಸ್ ಇವೆ.

ಸುರಕ್ಷತೆ ದೃಷ್ಟಿಯಿಂದ ಈ ಕಾರು ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ - ಹೋಲ್ಡ್ ಅಸಿಸ್ಟ್, 3 - ಪಾಯಿಂಟ್ ಸೀಟ್‌ಬೆಲ್ಟ್. ISOFIX ಆಂಕಾರೇಜ್, ರೇರ್ ಪಾರ್ಕಿಂಗ್ ಸೇನಾರ್ಸ್, 360 - ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications