ಆಕರ್ಷಕ ಬೆಲೆಯ ಈ ಮಾರುತಿ ಕಾರಿಗೆ ಭಾರೀ ಡಿಮ್ಯಾಂಡ್: ಇದೀಗ ಭರ್ಜರಿ ಡಿಸ್ಕೌಂಟ್
ಜನಪ್ರಿಯ ಮತು ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿಯ ತನ್ನ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅನ್ನು ಬಲೆನೊ ಕಾರನ್ನು ಹೊಸ ನವೀಕರಣಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಭಾರತದಲ್ಲಿ ಭರ್ಜರಿ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.
ನೆಕ್ಸಾ ಮತ್ತು ಅರೆನಾ ಶ್ರೇಣಿಯನ್ನು ಒಳಗೊಂಡಂತೆ ಕೆಲವು ಮಾರುತಿ ಸುಜುಕಿ ಡೀಲರ್‌ಶಿಪ್‌ಗಳು ಈ ವರ್ಷದ ಹಬ್ಬದ ಸೀಸನ್‌ಗೆ ಮುಂಚಿತವಾಗಿ ತಮ್ಮ ಕಾರುಗಳ ಮೇಲೆ ಭಾರಿ ರಿಯಾಯಿತಿಗಳನ್ನು ನೀಡುತ್ತಿವೆ. ಈ ಪ್ರಯೋಜನಗಳು ನಗದು ರಿಯಾಯಿತಿಗಳು, ವಿನಿಮಯ ಬೋನಸ್‌ಗಳು ಮತ್ತು ಸ್ಕ್ರ್ಯಾಪೇಜ್ ಬೋನಸ್‌ಗಳ ರೂಪದಲ್ಲಿ ಲಭ್ಯವಿದೆ. ಮಾರುತಿ ಸುಜುಕಿ ಬಲೆನೊ ಕಾರಿನ ಮೇಲೆಯು ಭರ್ಜರಿ ರಿಯಾಯಿತಿಗಳು ಲಭ್ಯವಿದೆ.

ಮಾರುತಿ ಬಲೆನೊ ಪೆಟ್ರೋಲ್ ಮಾದರಿಯ ಮೇಲೆ ರೂ.20,000 ನಗದು ರಿಯಾಯಿತಿಯನ್ನು ನೀಡುತ್ತಿದೆ. ಇದರ ಜೊತೆ ರೂ. 20,000 ಎಕ್ಸ್‌ಚೇಂಜ್ ಬೋನಸ್ ಮತ್ತು ಸ್ಕ್ರ್ಯಾಪೇಜ್ ಬೋನಸ್ ರೂ.5,000 ಅನ್ನು ನೀಡುತ್ತದೆ. CNG ಆವೃತ್ತಿಗಳ ಮೇಲಿನ ರೂ.10,000 ನಗದು ರಿಯಾಯಿತಿಯನ್ನು ಒಳಗೊಂಡಿದ್ದು, ಇದರೊಂದಿಗೆ ರೂ. 25,000 ಕ್ಸ್‌ಚೇಂಜ್ ಬೋನಸ್ ಮತ್ತು ಸ್ಕ್ರ್ಯಾಪೇಜ್ ಬೋನಸ್ ರೂ. 5,000 ಅನ್ನು ನೀಡಿದೆ.
ಮಾರುತಿ ಸುಜುಕಿ ಬಲೆನೊ ಕಾರಿನ ಮುಂಭಾಗ ನೆಕ್ಸಾವೆವ್ ಹನಿಕೊಂಬ್ ಗ್ರಿಲ್, ಫ್ಲಾಟರ್ ಕ್ಲಾಮ್‌ಶೆಲ್ ಬಾನೆಟ್ ಮತ್ತು ಪರಿಷ್ಕೃತ ಮುಂಭಾಗದ ಬಂಪರ್ ಜೊತೆಗೆ ದೊಡ್ಡ ಫಾಗ್ ಲ್ಯಾಂಪ್ ಹೌಸಿಂಗ್‌ಗಳನ್ನು ಹೊಂದಿದೆ. ಈ ಕಾರಿನಲ್ಲಿ ಸೈಡ್ ಪ್ರೊಫೈಲ್ ಹಿಂದಿನ ಮಾದರಿಯಂತೆಯೇ ಕಂಡರೂ ಕ್ರೋಮ್ ಸ್ಟ್ರಿಪ್ ಅನ್ನು ಹೊರತುಪಡಿಸಿ ಈಗ ಕೆಳಗಿನ ವಿಂಡೋ ಲೈನ್‌ನಿಂದ ಹಿಂದಿನ ಕ್ವಾರ್ಟರ್ ಗ್ಲಾಸ್‌ಗೆ ಚಲಿಸುವಂತೆ ವಿನ್ಯಾಸಗೊಳಿಸಿದೆ.
ಈ ಮಾರುತಿ ಬಲೆನೊ ಕಾರಿನ ಹಿಂಭಾಗದಲ್ಲಿ ಟೈಲ್‌ಗೇಟ್ ವಿನ್ಯಾಸ, ಹೊಸ ಸಿ-ಆಕಾರದ ಎಲ್‌ಇಡಿ ಟೈಲ್-ಲೈಟ್‌ಗಳು ಮತ್ತು ರಿಪ್ರೊಫೈಲ್ಡ್ ರಿಯರ್ ಬಂಪರ್ ಅನ್ನು ಹೊಂದಿದೆ. ಇನ್ನು ಸ್ಟ್ಯಾಂಡರ್ಡ್ ಬಲೆನೊ ಕಾರು ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರಾಂಡ್ಯೂರ್ ಗ್ರೇ, ಸೆಲೆಸ್ಟಿಯಲ್ ಬ್ಲೂ, ಓಪ್ಯುಲೆಂಟ್ ರೆಡ್ ಮತ್ತು ಲಕ್ಸ್ ಬೀಜ್ ಎನ್ನುವ ಆರು ಬಣ್ಣಗಳ ಆಯ್ಕೆಯನ್ನು ನೀಡಿದೆ.
ಮಾರುತಿ ಸುಜುಕಿ ಕಂಪನಿಯು ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಹೆಚ್ಚಿನ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿದೆ, ಸುರಕ್ಷತೆಗಾಗಿ ಏರ್‌ಬ್ಯಾಗ್ ಸೌಲಭ್ಯದ ಜೊತೆಗೆ ಹೊಸ ಬಲೆನೊದಲ್ಲಿ ಹೊಸ ಸುರಕ್ಷತಾ ವೈಶಿಷ್ಟ್ಯಗಳಲ್ಲಿ ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್, ಎಬಿಎಸ್, ಕೀ ಲೆಸ್ ಎಂಟ್ರಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಇಎಸ್‌ಪಿ ಮತ್ತು ಇಬಿಡಿ ಸಹ ಸೇರ್ಪಡೆಯಾಗಲಿದ್ದು, ಸುಜುಕಿ ಕಾರ್ ಕನೆಕ್ಟ್ ತಂತ್ರಜ್ಞಾನದಲ್ಲೂ ಸಹ ಸುಧಾರಿತ ಫೀಚರ್ಸ್ ಗಳನ್ನು ಹೊಂದಿವೆ.
ಇದರ ಜೊತೆಗೆ ತುರ್ತುಸೇವೆಗಳಿಗಾಗಿ ಸುಧಾರಿತ ಟೆಲಿಮ್ಯಾಟಿಕ್ಸ್ ಪರಿಹಾರಗಳನ್ನು ಒಳಗೊಂಡಿರಲಿದ್ದು, ಸುಜುಕಿ ಕಾರ್ ಕನೆಕ್ಟ್ ಫೀಚರ್ಸ್‍ಗಳನ್ನು ಸ್ಮಾರ್ಟ್‌ಫೋನ್ ಅಪ್ಲಿಕೇಷನ್ ಮೂಲಕ ಇಂಧನ ಲಭ್ಯತೆ, ಸಾಗಬಹುದಾದ ದೂರ, ಓಡೋಮೀಟರ್, ಕಾರ್ ಡಯಾಗ್ನೋಸಿಸ್, ಒಳಗೊಂಡಂತೆ ವಿವಿಧ ಮಾಹಿತಿಗಳ ಸಂಪೂರ್ಣ ಡೇಟಾ ಪಡೆದುಕೊಳ್ಳಬಹುದು. ಕನೆಕ್ಟೆಡ್ ಕಾರ್ ಟೆಕ್ ಫೀಚರ್ಸ್ ಜೊತೆಗೆ ಮಾರುತಿ ಕಂಪನಿಯು ಹೊಸ ಬಲೆನೊದಲ್ಲಿ 9-ಇಂಚಿನ ಡಿಜಿಟಲ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, 360 ಡಿಗ್ರಿ ವ್ಯೂ ಕ್ಯಾಮೆರಾ ಹೊಂದಿದೆ.
ಗಮನಾರ್ಹವಾಗಿ, ಬಲೆನೊವನ್ನು ಸಿಗ್ಮಾ, ಡೆಲ್ಟಾ, ಝೀಟಾ ಮತ್ತು ಆಲ್ಫಾ ಎಂಬ ನಾಲ್ಕು ರೂಪಾಂತರಗಳಲ್ಲಿಲಭ್ಯವಿದೆ. ವರದಿಗಳ ಪ್ರಕಾರ, ಪ್ರಸ್ತುತ, ಮಾರುತಿ ಸುಜುಕಿ ಬಲೆನೊಹ್ಯಾಚ್‌ಬ್ಯಾಕ್ ಕಾರಿನ ಬುಕಿಂಗ್ ದಿನದಿಂದ ಒಂದರಿಂದ ಮೂರು ವಾರಗಳವರೆಗೆ ಕಾಯುವ ಅವಧಿಯನ್ನು ಹೊಂದಿದೆ. ಇದು ದೆಹಲಿ ನಗರದಲ್ಲಿ ಮಾಡಿದ ಬುಕಿಂಗ್‌ಗಳಿಗೆ ಅನ್ವಯಿಸುತ್ತದೆ ಮತ್ತು ಡೀಲರ್‌ಶಿಪ್, ರೂಪಾಂತರ, ಬಣ್ಣ ಮತ್ತು ಇತರ ಅಂಶಗಳನ್ನು ಅವಲಂಬಿಸಿ ಬದಲಾಗುತ್ತದೆ.
ಈ ಮಾರುತಿ ಹ್ಯಾಚ್‌ಬ್ಯಾಕ್ ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 89 bhp ಮತ್ತು 113 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು AMT ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇನ್ನು ಬಲೆನೊ ಸಿಎನ್‌ಜಿ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ಲಭ್ಯವಿದೆ.
ಸಿಎನ್‌ಜಿ ಮಾದರಿಯು 76 bhp ಮತ್ತು 98.5 Nm ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಬಲೆನೊ ಸಿಎನ್‌ಜಿ ಬೂಟ್‌ನಲ್ಲಿ 55-ಲೀಟರ್ ಸಿಎನ್‌ಜಿ ಟ್ಯಾಂಕ್ ಅನ್ನು ಪಡೆಯುತ್ತದೆ. ಇದರರ್ಥ ಅದರ ಪೆಟ್ರೋಲ್-ಕೌಂಟರ್‌ಪಾರ್ಟ್‌ಗೆ ಹೋಲಿಸಿದರೆ ಬೂಟ್ ಸಾಮರ್ಥ್ಯವು ಕಡಿಮೆಯಾಗಿದ ಬಲೆನೊ ಸಿಎನ್‌ಜಿಯು 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ಲಭ್ಯವಿದ.


Click it and Unblock the Notifications