Maruti Suzuki: ಗಣಪತಿ ಹಬ್ಬಕ್ಕೆ ಸಿಹಿಸುದ್ದಿ.. ಮಾರುತಿ ಸುಜುಕಿ ಮಾಡಿಬಿಡ್ತು ದೊಡ್ಡ ಘೋಷಣೆ
ದೇಶದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಜನಪ್ರಿಯತೆ ಗಳಿಸಿದೆ. ನೆಕ್ಸಾ (Nexa) ಡೀಲರ್ ಮೂಲಕ ಮಾರಾಟ ಮಾಡುವ ವಿವಿಧ ಮಾದರಿಗಳ ಮೇಲೆ ಈ ಸೆಪ್ಟೆಂಬರ್ ತಿಂಗಳು (2023) ಭರ್ಜರಿ ರಿಯಾಯಿತಿ ಘೋಷಿಸಿದೆ. ಆದರೆ, ಜಿಮ್ನಿ, ಫ್ರಾಂಕ್ಸ್ ಮತ್ತು ಗ್ರ್ಯಾಂಡ್ ವಿಟಾರಾಗಳಿಗೆ ಡಿಸ್ಕೌಂಟ್ ಲಭ್ಯವಿಲ್ಲ.
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಈ ತಿಂಗಳು ದೊಡ್ಡಮಟ್ಟದ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ವಿವಿಧ ಮಾದರಿಗಳು ರೂ.65,000 ಡಿಸ್ಕೌಂಟ್ ಆಫರ್ ಹೊಂದಿವೆ. ಆದರೆ, ಎಎಂಟಿ ರೂಪಾಂತರ ಅದಕ್ಕಿಂತ ಕಮ್ಮಿ ರಿಯಾಯಿತಿ ಪ್ರಯೋಜನ ಹೊಂದಿದ್ದು, ರೂ.55,000 ಅಷ್ಟೇ ಪಡೆದುಕೊಂಡಿದೆ. ಇಗ್ನಿಸ್ ವೇರಿಯೆಂಟ್ ಅನ್ವಯ ರೂ.5.84 ಲಕ್ಷದಿಂದ ರೂ.8.16 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ಈ ಕಾರು, 1.2 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 83 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 - ಸ್ವೀಡ್ ಮ್ಯಾನುವಲ್ ಅಥವಾ 5 - ಸ್ವೀಡ್ ಆಟೋಮೆಟಿಕ್ (AMT) ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, ರೂಪಾಂತರಗಳಿಗೆ ಅನುಗುಣವಾಗಿ 20.89 kmpl ಮೈಲೇಜ್ ನೀಡುತ್ತದೆ.
ನೆಕ್ಸಾ ಬ್ಲೂ, ಲ್ಯೂಸೆಂಟ್ ಆರೆಂಜ್, ಸಿಲ್ಕಿ ಸಿಲ್ವರ್, ಟರ್ಕೋಯಿಸ್ ಬ್ಲೂ, ಗ್ಲಿಸ್ಟೆನಿಂಗ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುವ ಇಗ್ನಿಸ್, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಪ್ರೊಜೆಕ್ಟರ್ ಹೆಡ್‌ಲೈಟ್ಸ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಏರ್ ಬಾಗ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಮಾರುತಿ ಸುಜುಕಿ ಕಂಪನಿಯ ಮತ್ತೊಂದು ಸಿಯಾಜ್ (Ciaz) ಕಾರು ಸಹ ಭರ್ಜರಿ ಡಿಸ್ಕೌಂಟ್ ಆಫರ್ ಒಳಗೊಂಡಿದೆ. ರೂ.48,000 ರಿಯಾಯಿತಿಯನ್ನು ಪಡೆದಿದೆ. ಸಿಯಾಜ್ ಕಾರು, ರೂ.9.30 ಲಕ್ಷದಿಂದ ರೂ.12.29 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗ್ಮಾ, ಡೆಲ್ಟಾ, ಝೀಟಾ ಮತ್ತು ಆಲ್ಫಾ ಎಂಬ ರೂಪಾಂತರ ಆಯ್ಕೆಯಲ್ಲಿ ಲಭ್ಯವಿದೆ. 20.04 - 20.65 kmpl ಮೈಲೇಜ್ ನೀಡುತ್ತದೆ.
ಇದರ, 1.5 ಲೀಟರ್ ಪೆಟ್ರೋಲ್ ಎಂಜಿನ್ 105 PS ಪವರ್ ಮತ್ತು 138 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 - ಸ್ವೀಡ್ ಮ್ಯಾನುವಲ್, 4 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಡುಯೆಲ್ ಫ್ರಂಟ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಕಂಪನಿಯ ಮತ್ತೊಂದು ಜನಪ್ರಿಯ ಕಾರು, ಬಲೆನೊ ರೂ.35,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಈ ಕಾರು, ರೂ.6.61 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. ಇದು, ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 22.35 kmpl ರಿಂದ 30.61km/kg ಮೈಲೇಜ್ ನೀಡುತ್ತದೆ.
ನೆಕ್ಸಾ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಒಪ್ಯುಲೆಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಈ ಕಾರು ಗ್ರಾಹಕರಿಗೆ ಸಿಗುತ್ತದೆ. 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಅರ್ಕಾಮಿಸ್ ಸೌಂಡ್ ಸಿಸ್ಟಮ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ, ನಿಮಗೆ ತಿಳಿದಿರಲಿ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಿದ್ದು, ಹೆಚ್ಚಿನ ಮಾಹಿತಿಗೆ ಸ್ಥಳೀಯ ಡೀಲರ್ ಶಿಪ್ ಸಂಪರ್ಕಿಸಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications