ಭರಪೂರ ವೈಶಿಷ್ಟ್ಯಗಳೊಂದಿಗೆ ಒಳ್ಳೆ ಮೈಲೇಜ್ ನೀಡುವ ಮಾರುತಿ ಸುಜುಕಿ ಸಿಯಾಜ್ ಬಿಡುಗಡೆ
ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿರುವ ಮಾರುತಿ ಸುಜುಕಿಯ ಕಾರುಗಳು, ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಪ್ರತಿಯೊಬ್ಬ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಾರೆ. ಇದೀಗ, ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯ ಬಹುನಿರೀಕ್ಷಿತ 'ಸಿಯಾಜ್' ಸೆಡಾನ್ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಯಾಗಿದೆ.
ಈ ಹೊಚ್ಚ ಹೊಸ ಸಿಯಾಜ್ ಟಾಪ್ ಎಂಡ್ ಮ್ಯಾನುವಲ್ ಆಲ್ಫಾ ವೇರಿಯಂಟ್ ರೂ.11.15 ಲಕ್ಷ ಬೆಲೆಯಲ್ಲಿ ದೊರೆತರೆ, ಆಟೋಮೆಟಿಕ್ ವೇರಿಯಂಟ್ ರೂ.12.35 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗಲಿದೆ. ಆಸಕ್ತ ಗ್ರಾಹಕರು, ಸಮೀಪದ ನೆಕ್ಸಾ (Nexa) ಶೋರೂಂಗೆ ಭೇಟಿ ನೀಡುವ ಮೂಲಕ ಖರೀದಿ ಮಾಡಬಹುದು. ನೂತನ ಸಿಯಾಜ್ ಸುತ್ತಳತೆಯ ಬಗ್ಗೆ ಹೇಳುವುದಾದರೆ, ಇದು 4,490 ಎಂಎಂ ಉದ್ದ, 1,730 ಎಂಎಂ ಅಗಲ, 1,480 ಎಂಎಂ ಎತ್ತರ ಹಾಗೂ 2,650 ಎಂಎಂ ವೀಲ್‌ಬೇಸ್ ಹೊಂದಿದೆ.

ಮಾರುತಿ ಸುಜುಕಿ ಸಿಯಾಜ್ ಕಾರಿನಲ್ಲಿ ಏನಿದೆ ಹೊಸದು:
ಈ ಕಾರು ಮೂರು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಅವುಗಳೆಂದರೆ, ಪರ್ಲ್ ಮೆಟಾಲಿಕ್ ಒಪ್ಯುಲೆಂಟ್ ರೆಡ್ ಜೊತೆಗೆ ಬ್ಲಾಕ್ ರೂಫ್, ಪರ್ಲ್ ಮೆಟಾಲಿಕ್ ಗ್ರ್ಯಾಂಡಿಯರ್ ಗ್ರೇ ಜೊತೆಗೆ ಬ್ಲಾಕ್ ರೂಫ್ ಹಾಗೂ ಡಿಗ್ನಿಟಿ ಬ್ರೌನ್ ಜೊತೆಗೆ ಬ್ಲಾಕ್ ರೂಫ್. ಇಷ್ಟೇ ಅಲ್ಲದೆ, ಸಿಯಾಜ್ ಸಾಕಷ್ಟು ನೂತನ ಸುರಕ್ಷತಾ ವೈಶಿಷ್ಟ್ಯಗಳನ್ನು ಸಹ ಪಡೆದುಕೊಂಡಿದೆ. ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್, ಎರಡು ಏರ್‌ಬ್ಯಾಗ್ಸ್, ಚೈಲ್ಡ್ ಸೀಟ್ ಆಂಕಾರೇಜ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.
ನೂತನ ಮಾರುತಿ ಸುಜುಕಿ ಸಿಯಾಜ್ ಸೆಡಾನ್ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ, ಇದು 1.5-ಲೀಟರ್ ಫೋರ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 6,000 rpm 104.6 PS ಗರಿಷ್ಠ ಪವರ್ ಹಾಗೂ 4,400 rpmನಲ್ಲಿ 138 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮ್ಯಾನುವಲ್ ಟ್ರಾನ್ಸ್ಮಿಷನ್ ಆಯ್ಕೆಯಲ್ಲಿ 20.65 kmpl ಮೈಲೇಜ್ ನೀಡಲಿದ್ದು, ಆಟೋಮೆಟಿಕ್ ಟ್ರಾನ್ಸ್ಮಿಷನ್ ಆಯ್ಕೆಯಲ್ಲಿ 20.04 kmpl ಇಂಧನ ದಕ್ಷತೆಯನ್ನು ಹೊಂದಿದೆ.
ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ನ ಮಾರ್ಕೆಟಿಂಗ್ ಮತ್ತು ಸೇಲ್ಸ್ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಶಶಾಂಕ್ ಶ್ರೀವಾಸ್ತವ ಹೊಸ ಕಾರಿನ ಬಿಡುಗಡೆ ಬಗ್ಗೆ ಮಾತನಾಡಿದ್ದಾರೆ. 'ಮೂರು ಹೊಸ ಡ್ಯುಯಲ್-ಟೋನ್ ಬಣ್ಣ ಆಯ್ಕೆ ಹಾಗೂ ಹೆಚ್ಚುವರಿ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಸಿಯಾಜ್ ಸೆಡಾನ್ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಸಂತೋಷ ತಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಗ್ರಾಹಕರು, ಈ ಕಾರನ್ನು ಖರೀದಿಸುತ್ತಾರೆ ಎಂಬ ನಂಬಿಕೆ ಹೊಂದಿದ್ದೇವೆ. ಕಳೆದ ಎಂಟು ವರ್ಷದಿಂದ ಸಿಯಾಜ್ ಭಾರತದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ' ಎಂದು ಹೇಳಿದ್ದಾರೆ.
ಸದ್ಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗಲಿರುವ ಮಾರುತಿ ಸುಜುಕಿ ಸಿಯಾಜ್ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಇದು 7 ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಆಟೋಮೆಟಿಕ್ ಎಲ್‌ಇಡಿ ಹೆಡ್‌ಲೈಟ್ಸ್, ಪುಶ್ ಬಟನ್ ಸ್ಟಾರ್ಟ್, ಕೀಲೆಸ್ ಎಂಟ್ರಿ, ಕ್ರೂಸ್ ಕಂಟ್ರೋಲ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದುವ ಮೂಲಕ ಸಾಕಷ್ಟು ಗ್ರಾಹಕರನ್ನು ಆಕರ್ಷಿಸುತ್ತಿದೆ ಎಂದು ಹೇಳಿದರೆ, ತಪ್ಪಾಗುವುದಿಲ್ಲ.
2014ರಲ್ಲಿ ಭಾರತದ ಮಾರುಕಟ್ಟೆಯಲ್ಲಿ ಲಾಂಚ್ ಆದ ಮಾರುತಿ ಸುಜುಕಿಯ ಸಿಯಾಜ್ ಸೆಡಾನ್, ಫೋಕ್ಸ್‌ವ್ಯಾಗನ್ ವರ್ಟಸ್, ಸ್ಕೋಡಾ ಸ್ಲಾವಿಯಾ, ಹ್ಯುಂಡೈ ವೆರ್ನಾ ಹಾಗೂ ಹೋಂಡಾ ಸಿಟಿ ಕಾರುಗಳಿಗೆ ಭಾರೀ ಪೈಪೋಟಿ ನೀಡಲಿದೆ. ಸಾಕಷ್ಟು ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಈ ಕಾರು ಗ್ರಾಹಕರಿಗೆ ಖರೀದಿಗೆ ಸಿಗಲಿದೆ. ಬೆಲೆಯು ಕೂಡ ಕೈಗೆಟುಕುವಂತಿದ್ದು, ಬಹುತೇರನ್ನು ಸೆಳೆಯಲಿದೆ. ವಿತರಣೆಗಳು ಆರಂಭವಾದ ಮೇಲೆ ಸಿಯಾಜ್ ಯಾವ ರೀತಿಯಲ್ಲಿ ಕಮಲ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications