Maruti Suzuki: ಮಾರುತಿ ಸುಜುಕಿಯ ಈ ಜನಪ್ರಿಯ ಕಾರಿಗೆ ಭಾರೀ ಬೇಡಿಕೆ.. ವಿತರಣೆಗೆ ತಿಂಗಳುಗಟ್ಟಲೇ ಕಾಯುತ್ತಾರೆ!
ಭಾರತದಲ್ಲಿ ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ವಾಹನ ತಯಾಕರ ಕಂಪನಿಯಾಗಿ ಜನಪ್ರಿಯತೆ ಗಳಿಸಿದೆ. ಅದರ ಕಾರುಗಳು ಆಕರ್ಷಕ ವೈಶಿಷ್ಟ್ಯ, ವಿನ್ಯಾಸ ಹಾಗೂ ಕೈಗೆಟುಕುವ ಬೆಲೆಯೊಂದಿಗೆ ಖರೀದಿಗೆ ದೊರೆಯುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಾರೆ. ಇದೀಗ, ಅದರ ಎರ್ಟಿಗಾ (Ertiga) ಬಗ್ಗೆ ಮಹತ್ವದ ಮಾಹಿತಿ ಲಭ್ಯವಾಗಿದೆ.
ಮಾರುತಿ ಸುಜುಕಿ ದೇಶೀಯ ಮಾರುಕಟ್ಟೆಯಲ್ಲಿ ನವೀಕರಿಸಿದ ಎರ್ಟಿಗಾ ಎಂಪಿವಿಯನ್ನು ಕಳೆದ ವರ್ಷದ ಮಾರ್ಚ್ 15ರಂದು LXi ಹಾಗೂ VXi ಸೇರಿದಂತೆ ನಾಲ್ಕು ರೂಪಾಂತರಗಳ ಆಯ್ಕೆಯಲ್ಲಿ ಬಿಡುಗಡೆಗೊಳಿಸಿತ್ತು. ಅಂದಿನಿಂದಲೇ ದೊಡ್ಡ ಮಟ್ಟದ ಬೇಡಿಕೆಯನ್ನು ಈ ಕಾರು ಪಡೆದುಕೊಂಡಿತು. ಇದು, ಏಳು ಆಸನ ಆಯ್ಕೆಯೊಂದಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಬಹುತೇಕರು, ತಮ್ಮ ಕುಟುಂಬದ ವಾಹನವಾಗಿ ಈ ಕಾರನ್ನೇ ಆಯ್ದುಕೊಳ್ಳುತ್ತಿದ್ದಾರೆ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಎರ್ಟಿಗಾ ರೂ.8.64 ಲಕ್ಷದಿಂದ ರೂ.13.08 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರಯುತ್ತದೆ. ನೀವು ಈ ಎಂಪಿವಿಯನ್ನು ಇವತ್ತು ಬುಕ್ಕಿಂಗ್ ಮಾಡಿದರೂ ವಿತರಣೆಗೆ 40 - 90 ವಾರಗಳು (ದೆಹಲಿ) ಕಾಯಬೇಕು. ಬಣ್ಣ, ರೂಪಾಂತರಗಳನ್ನು ಆಧರಿಸಿ, ರಾಜ್ಯದಿಂದ ರಾಜ್ಯಕ್ಕೆ ಈ ಅವಧಿ ಬೇರೆಯಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಸಮೀಪದ ಡೀಲರ್‌ಶಿಪ್ ಸಂಪರ್ಕಿಸಿರಿ.
ಮಾರುತಿ ಸುಜುಕಿ ಎರ್ಟಿಗಾ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದರೆ, ಇದು ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ, 1.5 ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 103 PS ಗರಿಷ್ಠ ಪವರ್ ಹಾಗೂ137 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. 5 ಸ್ವೀಡ್ ಮ್ಯಾನುವಲ್/ 6 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯಲಿದೆ.
ಸಿಎನ್‌ಜಿ ಕಿಟ್ ಪಡೆದಿರುವ ಕಾರು, ಕೊಂಚ ಕಡಿಮೆ ಪವರ್ ಹೊರ ಹಾಕಲಿದ್ದು, ಕೇವಲ 88 PS ಪವರ್ ಮತ್ತು 121.5 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಮೈಲೇಜ್ ವಿಷಯದಲ್ಲೂ ಎರ್ಟಿಗಾ ಅತ್ಯುತ್ತಮವಾಗಿದ್ದು, ರೂಪಾಂತರಗಳಿಗೆ ಅನುಗುಣವಾಗಿ 20.51 kmpl ರಿಂದ 26.11 kmpl ಇಂಧನ ದಕ್ಷತೆಯನ್ನು ಹೊಂದಿದೆ.
ಮಾರುತಿ ಸುಜುಕಿ ಎರ್ಟಿಗಾ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಮುಖ್ಯವಾಗಿ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಟರ್ನ್ ಬೈ ಟರ್ನ್ ನ್ಯಾವಿಗೇಶನ್, ಪ್ಯಾಡಲ್ ಶಿಫ್ಟರ್ಸ್, ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲೈಟ್ ಮತ್ತು ಆಟೋ ಎಸಿ ಸೇರಿದಂತೆ ಸಾಕಷ್ಟು ನವೀನ ಫೀಚರ್ಸ್ ಪಡೆದಿದೆ. ಇವು ಗ್ರಾಹಕರಿಗೆ ಖಂಡಿತ ಇಷ್ಟವಾಗುತ್ತದೆ.
ಸುರಕ್ಷತೆಯ ದೃಷ್ಟಿಯಿಂದ ಕೂಡ ಮಾರುತಿ ಸುಜುಕಿ ಎರ್ಟಿಗಾ ಅತ್ಯುತ್ತಮವಾಗಿದ್ದು, ಬಹುತೇಕ ರೂಪಾಂತರಗಳು 4 ಏರ್‌ಬ್ಯಾಗ್ಸ್ ಹೊಂದಿವೆ. ಇದರೊಟ್ಟಿಗೆ EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೆನ್ಸರ್ಸ್, ISOFIX ಚೈಲ್ಡ್ ಸೀಟ್ ಆಂಕಾರೇಜ್ಸ್, ಹಿಲ್ ಹೋಲ್ಡ್ ಒಳಗೊಂಡಂತೆ ಹಲವು ಸೇಫ್ಟಿ ಫೀಚರ್ಸ್ ಪಡೆದಿದೆ.
ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಆಬರ್ನ್ ರೆಡ್, ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆರ್ಕ್ಟಿಕ್ ವೈಟ್, ಪರ್ಲ್ ಮೆಟಾಲಿಕ್ ಡಿಗ್ನಿಟಿ ಬ್ರೌನ್, ಪ್ರೈಮ್ ಆಕ್ಸ್‌ಫರ್ಡ್ ಬ್ಲೂ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಕಾರಿಗೆ ಟೊಯೊಟಾ ಇನ್ನೋವಾ ಕ್ರಿಸ್ಟಾ, ಕಿಯಾ ಕ್ಯಾರೆನ್ಸ್ ಮತ್ತು ಮಹೀಂದ್ರಾ ಮರಾಜ್ಜೊ ಪ್ರಬಲ ಪ್ರತಿಸ್ಪರ್ಧಿಯಾಗಿದ್ದು, ಅತ್ಯಾಧುನಿಕವಾಗಿರುವುರಿಂದ ವಿತರಣೆಗೆ ಎಷ್ಟೇ ತಿಂಗಳು ಆದರೂ ಗ್ರಾಹಕರು ತಾಳ್ಮೆಯಿಂದ ಕಾಯುತ್ತಾರೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications