Maruti Fronx: ವಿದೇಶದಲ್ಲಿ ಜನಪ್ರಿಯ ಮಾರುತಿ ಸುಜುಕಿ ಫ್ರಾಂಕ್ಸ್ ಬಿಡುಗಡೆ, ಭಾರತಕ್ಕಿಂತ ಹಲವುಪಟ್ಟು ಬೆಲೆ ಜಾಸ್ತಿ!

ಭಾರತದಲ್ಲಿ ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಖ್ಯಾತಿಗಳಿಸಿದೆ. ಅದರ ಕಾರುಗಳು, ಆಕರ್ಷಕ ವೈಶಿಷ್ಟ್ಯ, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಪ್ರತಿಯೊಬ್ಬ ಗ್ರಾಹಕರನ್ನು ತನ್ನತ್ತ ಸೆಳೆಯುತ್ತವೆ. ಅದರಲ್ಲೂ ಫ್ರಾಂಕ್ಸ್ ಎಸ್‌ಯುವಿಗೆ ಪ್ರತ್ಯೇಕ ಅಭಿಮಾನಿ ಬಳಗವಿದ್ದು, ಇದೀಗ ವಿದೇಶದಲ್ಲಿ ಬಿಡುಗಡೆಗೊಂಡಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ದಕ್ಷಿಣ ಆಫ್ರಿಕಾಕ್ಕೆ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದೆ. 2.79 ಲಕ್ಷ ರಾಂಡ್‌ (ಆಫ್ರಿಕಾ ಕರೆನ್ಸಿ) ಆರಂಭಿಕ ಬೆಲೆಯಲ್ಲಿ ಲಾಂಚ್ ಆಗಿದೆ. ಭಾರತೀಯ ರೂಪಾಯಿಗೆ ಹೋಲಿಸಿದರೆ, ರೂ.12.20 ಲಕ್ಷವಾಗುತ್ತದೆ. ಅಲ್ಲಿ ಈ ಕಾರನ್ನು ಸುಜುಕಿ ಬ್ಯಾಡ್ಜಿಂಗ್ ಅಡಿಯಲ್ಲಿ ಮಾರಾಟ ಮಾಡಲಾಗುತ್ತದೆ. ಕಂಪನಿಯು ಆಫ್ರಿಕಾದಲ್ಲಿ ಲಾಂಚ್ ಮಾಡಿರುವ ಮೊದಲ ಮಾದರಿ ಇದಾಗಿದ್ದು, ಆ ಬಳಿಕ, XL6, 5 ಡೋರ್ ಜಿಮ್ನಿಯನ್ನು ಬಿಡುಗಡೆಗೊಳಿಸಲಾಗುತ್ತದೆ.

Maruti Fronx: ವಿದೇಶದಲ್ಲಿ ಜನಪ್ರಿಯ ಮಾರುತಿ ಸುಜುಕಿ ಫ್ರಾಂಕ್ಸ್ ಬಿಡುಗಡೆ, ಭಾರತಕ್ಕಿಂತ ಹಲವುಪಟ್ಟು ಬೆಲೆ ಜಾಸ್ತಿ!

ದಕ್ಷಿಣ ಆಫ್ರಿಕಾದಲ್ಲಿ ಫ್ರಾಂಕ್ಸ್ ಎಸ್‌ಯುವಿ GL ಹಾಗೂ GLX ರೂಪಾಂತರ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಇವು ಒಂದೇ ಎಂಜಿನ್ ಆಯ್ಕೆಯನ್ನು ಹೊಂದಿರಲಿವೆ. 1.5 - ಲೀಟರ್ ಪೆಟ್ರೋಲ್ ಎಂಜಿನ್ 103 bhp ಗರಿಷ್ಠ ಪವರ್ ಹಾಗೂ 138 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದ್ದು, 5 ಸ್ವೀಡ್ ಮ್ಯಾನುವಲ್ ಅಥವಾ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಸಿಗಲಿವೆ.

ಈ ಫ್ರಾಂಕ್ಸ್ ಎಸ್‌ಯುವಿ ವಿನ್ಯಾಸ ಬಗ್ಗೆ ಮಾತನಾಡುವುದಾದರೆ, ಭಾರತದಲ್ಲಿ ಸಿಗುವ ಕಾರಿನಂತೆ ಡಿಸೈನ್ ಹೊಂದಿದೆ. ಪ್ರಮುಖವಾಗಿ ಆಕರ್ಷಕ, ಎಲ್‌ಇಡಿ ಹೆಡ್‌ಲೈಟ್ಸ್, 16 - ಇಂಚಿನ ಅಲಾಯ್ ವೀಲ್ಸ್, ಜೊತೆಗೆ ಆರು ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. ವೈಶಿಷ್ಟ್ಯದ ವಿಚಾರವಾಗಿ ಹೇಳುವುದಾದರೆ, ದಕ್ಷಿಣ ಆಫ್ರಿಕಾದಲ್ಲಿ ದೊರೆಯುವ ಫ್ರಾಂಕ್ಸ್ ರೂಪಾಂತರಗಳು 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಯನ್ನು ಹೊಂದಿವೆ. GLX ವೆರಿಯೆಂಟ್ಸ್ ಹೆಚ್ಚುವರಿಯಾಗಿ ಕೀಲೆಸ್ ಎಂಟ್ರಿಯನ್ನು ಪಡೆದಿದೆ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ರೂ.7.46 ಲಕ್ಷದಿಂದ ರೂ.13.13 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಐದು ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರುವ ಈ ಕಾರು, ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್ ಸೇರಿದಂತೆ 5 ರೂಪಾಂತರಗಳಲ್ಲಿ ದೊರೆಯಲಿದೆ. ಜೊತೆಗೆ 3 ಡ್ಯುಯಲ್ ಟೋನ್ ಮತ್ತು 7 ಮೊನೊಟೋನ್ ಬಣ್ಣಗಳೊಂದಿಗೆ ಸಿಗುತ್ತದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದರ 1 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 100 PS ಗರಿಷ್ಠ ಪವರ್ ಹಾಗೂ 148 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.2 - ಲೀಟರ್ ಡುಯೆಲ್ಜೆಟ್ ಪೆಟ್ರೋಲ್ ಎಂಜಿನ್, 90 PS ಪವರ್ ಮತ್ತು 113 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಮ್ಯಾನುವಲ್, ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

ಸಿಎನ್‌ಜಿ ಕಿಟ್ ಪಡೆದಿರುವ ಫ್ರಾಂಕ್ಸ್ ಎಸ್‌ಯುವಿ, 1.2 - ಲೀಟರ್ ಸಾಮರ್ಥ್ಯದ ಎಂಜಿನ್ ಹೊಂದಿದ್ದು, 77.5 PS ಗರಿಷ್ಠ ಪವರ್ ಹಾಗೂ 98.5 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ. 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಖರೀದಿಗೆ ದೊರೆಯಲಿದ್ದು, ಪೆಟ್ರೋಲ್ ಹಾಗೂ ಸಿಎನ್‌ಜಿ ರೂಪಾಂತರಗಳಿಗೆ ಅನುಗುಣವಾಗಿ 22.89 ರಿಂದ 28.51 ಕಿಲೋಮೀಟರ್ ವರೆಗೆ ಮೈಲೇಜ್ ನೀಡುತ್ತದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಯುವ ಗ್ರಾಹಕರನ್ನು ಆಕರ್ಷಿಸುವ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಮುಖ್ಯವಾಗಿ 9.0 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಅರ್ಕಾಮಿಸ್ ಸೌಂಡ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೈಮೇಟ್ ಕಂಟ್ರೋಲ್, ಚಾರ್ಜರ್‌ ಅನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದಲ್ಲೂ ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ಫೀಚರ್ಸ್ ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Article Published On: Wednesday, August 16, 2023, 18:06 [IST]
English summary
Maruti suzuki fronx suv launched south africa details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+