Maruti FRONX: ಮಾರಾಟದಲ್ಲಿ ಧೂಳೆಬ್ಬಿಸುತ್ತಿದೆ 'ಮೈಲೇಜ್‌ ಗುರು' ಮಾರುತಿ ಸುಜುಕಿ ಫ್ರಾಂಕ್ಸ್, ನಂಬರ್ 1 ಶತಸಿದ್ದ..!

ಭಾರತದ ಮಾರುಕಟ್ಟೆಯಲ್ಲಿ ಕಳೆದ ತಿಂಗಳು ಬಿಡುಗಡೆಯಾದ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಸಖತ್ ಕ್ರೇಜ್ ಹುಟ್ಟುಹಾಕಿದೆ. ಇದೀಗ, ಏಪ್ರಿಲ್ ತಿಂಗಳ ಮಾರಾಟದಲ್ಲಿ ಉತ್ತಮ ಸಾಧನೆ ಮಾಡಿದ್ದು, ಕೆಲವರು ಅತಿಹೆಚ್ಚು ಮಾರಾಟವಾಗುವ ಎಸ್‌ಯುವಿ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಂದರೂ ಅಚ್ಚರಿ ಇಲ್ಲ ಎಂದು ವಿಶ್ಲೇಷಿಸುತ್ತಿದ್ದಾರೆ.

ಬಲೆನೊ ಆಧಾರಿತ ಈ ಎಸ್‌ಯುವಿಯನ್ನು ಮಾರುತಿ ಸುಜುಕಿ, ಬರೋಬ್ಬರಿ 8,784 ಯುನಿಟ್ ಮಾರಾಟ ಮಾಡಿದ್ದು, ಈ ಮೂಲಕ ದೇಶೀಯ ಮಾರುಕಟ್ಟೆಯಲ್ಲಿ ಲಾಂಚ್ ಆದ ತಿಂಗಳಲ್ಲಿಯೇ ಸೇಲ್ ನಲ್ಲಿ ಎಂಟನೇ ಸ್ಥಾನಕ್ಕೆ ಜಿಗಿದಿದೆ. ಎಂದಿನಂತೆ ನೆಕ್ಸಾನ್ ಎಸ್‌ಯುವಿ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದು, ಏಪ್ರಿಲ್ ತಿಂಗಳಲ್ಲಿ ಟಾಟಾ ಕಂಪನಿಯು ಒಟ್ಟು 15,002 ಯುನಿಟ್ ಮಾರಿದೆ. ಸೆಲ್ಟೋಸ್ ಕಡೆಯ ಸ್ಥಾನದಲ್ಲಿ ಇದ್ದು, ಕಿಯಾ ಕಂಪನಿ 7,213 ಯುನಿಟ್ ಸೇಲ್ ಮಾಡಿದೆ.

Maruti FRONX: ಮಾರಾಟದದಲ್ಲಿ ಧೂಳೆಬ್ಬಿಸುತ್ತಿದೆ ಮೈಲೇಜ್‌ ಗುರು ಮಾರುತಿ ಸುಜುಕಿ ಫ್ರಾಂಕ್ಸ್, ನಂಬರ್ 1 ಶತಸಿದ್ದ..!

ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮಾರುತಿ ಸುಜುಕಿ ಕಂಪನಿ ಹೊಚ್ಚ ಹೊಸ ಫ್ರಾಂಕ್ಸ್ ಎಸ್‌ಯುವಿಯನ್ನು ಪ್ರದರ್ಶಿಸಿತ್ತು. ಅಂದಿನಿಂದಲೇ ಸಾಕಷ್ಟು ನೀರಿಕ್ಷೆ ಹುಟ್ಟುಹಾಕಿದ್ದ ಈ ಕಾರು, ದೊಡ್ಡಮಟ್ಟದಲ್ಲಿ ಬೇಡಿಕೆ ಪಡೆದುಕೊಂಡಿತ್ತು. ಇದರ ಎಂಟ್ರಿ ಲೆವೆಲ್ ಮಾದರಿ, ರೂ.7.46 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದ್ದು, ಆಸಕ್ತ ಗ್ರಾಹಕರು, ನೆಕ್ಸಾ ಡೀಲರ್ ಶಿಪ್ ಮೂಲಕ ಖರೀದಿಸಬಹುದು.

ಈ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಎರಡು ಎಂಜಿನ್ ಆಯ್ಕೆಯಲ್ಲಿ ಭಾರತದ ಮಾರುಕಟ್ಟೆಯಲ್ಲಿ ಸಿಗಲಿದೆ. 1.2 ಲೀಟರ್ ಕೆ ಸೀರಿಯಸ್ ಡುಯೆಲ್ ಜೆಟ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 89.7 PS ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಟ್ರಾನ್ಸ್ಮಿಷನ್ ಗೇರ್ ಬಾಕ್ಸ್ ಆಯ್ಕೆ ಪಡೆದಿದೆ.

ಮತ್ತೊಂದು, 1.0 ಲೀಟರ್ ಕೆ ಸೀರಿಯಸ್ ಟರ್ಬೋ ಬೂಸ್ಟರ್ ಜೆಟ್ ಪೆಟ್ರೋಲ್ ಎಂಜಿನ್, 100 PS ಪವರ್ ಹಾಗೂ 147.6 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 5 ಸ್ವೀಡ್ ಮ್ಯಾನುವಲ್ ಹಾಗೂ 6 ಸ್ವೀಡ್ ಆಟೋಮೆಟಿಕ್ ಟ್ರಾನ್ಸ್ಮಿಷನ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಮೈಲೇಜ್ ವಿಚಾರಕ್ಕೆ ಬಂದರೆ, ರೂಪಾಂತರಗಳಿಗೆ ಅನುಗುಣವಾಗಿ 20.01 km/l ನಿಂದ 22.89 km/l ಮೈಲೇಜ್ ನೀಡಲಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿಯ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಪ್ರಮುಖವಾಗಿ 9 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಹೆಡ್ಸ್ ಅಪ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತೆಯ ದೃಷ್ಟಿಯಿಂದ ಫ್ರಾಂಕ್ಸ್ ಎಸ್‌ಯುವಿ, 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), 3 ಪಾಯಿಂಟ್ ELR ಸೀಟ್‌ಬೆಲ್ಟ್ಸ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಝೀಟಾ ಮತ್ತು ಆಲ್ಫಾ ಎಂಬ 5 ರೂಪಾಂತರಗಳು ಹಾಗೂ 10 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಈ ಕಾರು, ಖರೀದಿಗೆ ಸಿಗಲಿದೆ.

ಇನ್ನು, ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಲಾಂಚ್ ಆದ ಏಪ್ರಿಲ್ ತಿಂಗಳಲ್ಲಿಯೇ ಸೇಲ್ ನಲ್ಲಿ ಎಂಟನೇ ಸ್ಥಾನಕ್ಕೆ ಏರಿದ್ದು, ಕೆಲವೇ ತಿಂಗಳಲ್ಲಿ ಮೊದಲ ಸ್ಥಾನಕ್ಕೆ ಬಂದರೂ ಅಚ್ಚರಿ ಇಲ್ಲ. ಈಗಾಗಲೇ ತನ್ನ ಮೈಲೇಜ್ ನಿಂದಲೇ ಫ್ರಾಂಕ್ಸ್ ಎಸ್‌ಯುವಿ ಹೆಚ್ಚಿನ ಖ್ಯಾತಿ ಗಳಿಸಿದ್ದು, ಈ ಮೇ ತಿಂಗಳಲ್ಲಿಯೂ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

Article Published On: Thursday, May 11, 2023, 18:53 [IST]
English summary
Maruti suzuki fronx suv sales in april details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+