Maruti Grand Vitara: ಬೆಲೆ ಏರಿಕೆ ಪಡೆದುಕೊಂಡ ಭಾರೀ ಬೇಡಿಕೆಯಿಂದ ಮಾರಾಟವಾಗುತ್ತಿರುವ ಈ ಮಾರುತಿ ಎಸ್‍ಯುವಿ

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (MSIL) ನೆಕ್ಸಾ ಪ್ರೀಮಿಯಂ ಡೀಲರ್‌ಶಿಪ್‌ಗಳ ಮೂಲಕ ಮಾರಾಟವಾಗುವ ಎಲ್ಲಾ ಮಾದರಿಗಳ ಬೆಲೆಗಳನ್ನು ಹೆಚ್ಚಿಸಿದೆ. ಇದರಿಂದ ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆಗೊಂಡ ಮಿಡ್ ಸೈಜ್ ಎಸ್‍ಯುವಿಯಯಾದ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಬೆಲೆ ಏರಿಕೆಯನ್ನು ಪಡೆದುಕೊಂಡಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ಬೇಸ್ ಸಿಗ್ಮಾ 1.5 MT ಬೆಲೆಯು ರೂ,25,000 ಮತ್ತು ಡೆಲ್ಟಾ 1.5 MT ಬೆಲೆ ರೂ.20,000 ವರೆಗೆ ಹೆಚ್ಚಿಸಲಾಗಿದ್ದು, ಇದೀಗ ಈ ರೂಪಾಂತರಗಳ ಬೆಲೆಯು ಕ್ರಮವಾಗಿ ರೂ,10.70 ಲಕ್ಷ ಮತ್ತು ರೂ.12.10 ಲಕ್ಷ ವಾಗಿದೆ. ಇನ್ನು Zeta, Alpha ಮತ್ತು Alpha 4WD ರೂಪಾಂತರಗಳ ಬೆಲೆಯು ರೂ.2,000 ವರೆಗೆ ಹೆಚ್ಚಿಸಲಾಗಿದೆ.

Maruti Suzuki Grand Vitara

ಇನ್ನು ಗ್ರ್ಯಾಂಡ್ ವಿಟಾರಾ ಎಸ್‍ಯುವಿಯ ಡೆಲ್ಟಾ 1.5 ಎಟಿ ಬೆಲೆ ರೂ.20,000 ಆದರೆ ಝೀಟಾ ಮತ್ತು ಆಲ್ಫಾ ಎಟಿ ಟ್ರಿಮ್‌ಗಳ ಬೆಲೆ ರೂ.2,000 ಗಳವರೆಗೆ ಏರಿಕೆ ಮಾಡಲಾಗಿದೆ. ಡೆಲ್ಟಾ 1.5 MT ರೂಪಾಂತರದ ಬೆಲೆಯು ರೂ.20,000 ಆದರೆ Zeta 1.5 MT ಬೆಲೆ ಏರಿಕೆಯನ್ನು ರೂ.2,000 ವರೆಗೆ ಬೆಲೆ ಏರಿಕೆಯನ್ನು ಪಡೆದುಕೊಂಡಿದೆ. ಇನ್ನು ಗ್ರ್ಯಾಂಡ್ ವಿಟಾರಾದ ಸ್ಟ್ರಾಂಗ್ ಹೈಬ್ರಿಡ್ ರೂಪಾಂತರಗಳ ಬೆಲೆಯು ರೂ.30,000.ವರೆಗೆ ಬೆಲೆ ಏರಿಕೆ ಪಡೆದುಕೊಂಡಿದೆ.

ಮಾರುತಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು 4,345 ಎಂಎಂ ಉದ್ದ, 1,795 ಎಂಎಂ ಅಗಲ ಮತ್ತು 1,645 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್‌ಬೇಸ್ ಹೊಂದಿದೆ. ಇದು ಹೈರೈಡರ್‌ನೊಂದಿಗೆ ಕೆಲವು ಬಾಹ್ಯ ವಿಶೇಷಣಗಳನ್ನು ಹಂಚಿಕೊಂಡದೆ. ಹೈರೈಡರ್‌ನಿಂದ ಗ್ರಾಂಡ್ ವಿಟಾರಾ ದೊಡ್ಡ ವ್ಯತ್ಯಾಸವೆಂದರೆ ಅದರ ಮುಂಭಾಗದ ವಿನ್ಯಾಸ. ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟವಾಗುವ ಸುಜುಕಿ ಎಸ್-ಕ್ರಾಸ್‌ ಮಾದರಿಗೆ ಹೋಲುತ್ತಿದೆ.

Maruti Suzuki Grand Vitara

ಈ ಗ್ರ್ಯಾಂಡ್ ವಿಟಾರಾ ವಿಟಾರಾ ಎಸ್‍ಯುವಿಯನ್ನು ಹೊಸ ಹಲವು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಮೊದಲಿನಿಂದ ಅಭಿವೃದ್ಧಿಪಡಿಸಲಾಗಿದೆ. ಈ ಹೊಸ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಎಸ್‍ಯುವಿಯು ಎರಡು ಪವರ್‌ಟ್ರೇನ್ ಆಯ್ಕೆಗಳಲ್ಲಿ ಲಭ್ಯವಿದೆ. ಈ ಎಸ್‍ಯುವಿಯು 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು 1.5-ಲೀಟರ್ TNGA ಪೆಟ್ರೋಲ್ ಮೋಟರ್ ಸ್ಟ್ರಾಂಗ್-ಹೈಬ್ರಿಡ್ ಸಿಸ್ಟಂ ಅನ್ನು ಒಳಗೊಂಡಿದೆ.

ಇದರಲ್ಲಿ 1.5-ಲೀಟರ್ K15C ಪೆಟ್ರೋಲ್ ಎಂಜಿನ್ ಮೈಲ್ಡ್-ಹೈಬ್ರಿಡ್ ಸಿಸ್ಟಂ 102 ಬಿಹೆಚ್‍ಪಿ ಪವರ್ ಮತ್ತು 137 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಯುನಿಟ್ ಅನ್ನು ನೀಡಿದೆ. ಇನ್ನು ಈ ಎಸ್‍ಯುವಿಯ ಎಡಬ್ಲ್ಯೂಡಿ ಸಿಸ್ಟಂ ಅನ್ನು ಮ್ಯಾನುವಲ್ ರೂಪಾಂತರಗಳೊಂದಿಗೆ ಮಾತ್ರ ನೀಡಲಾಗುತ್ತದೆ.

Maruti Suzuki Grand Vitara

ಇಂಟೆಲಿಜೆಂಟ್ ಎಲೆಕ್ಟ್ರಿಕ್ ಹೈಬ್ರಿಡ್ ಸಿಸ್ಟಮ್ ಎಂದೂ ಕರೆಯಲ್ಪಡುವ ಸ್ಟ್ರಾಂಗ್-ಹೈಬ್ರಿಡ್ ಆವೃತ್ತಿಯು ಐಸಿಇ ಯುನಿಟ್ ಮೂಲಕ ಸಂಯೋಜಿತವಾಗಿ 115 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದನ್ನು ಇ-ಸಿವಿಟಿ ಯೊಂದಿಗೆ ಮಾತ್ರ ಜೋಡಿಸಲಾಗಿದೆ. ಈ ಪವರ್‌ಟ್ರೇನ್‌ಗಾಗಿ 27.97 ಕಿ.ಮೀ ಮೈಲೇಜ್ ಅನ್ನು ಒದಗಿಸುತ್ತದೆ. ಈ ಗ್ರ್ಯಾಂಡ್ ವಿಟಾರಾ 5-ಸೀಟರ್ ಎಸ್‍ಯುವಿಯು 45-ಲೀಟರ್ ಸಾಮರ್ಥ್ಯದ ಫ್ಯೂಯಲ್ ಟ್ಯಾಂಕ್ ಹೊಂದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಸ್ಕೋಡಾ ಕುಶಾಕ್ ಮತ್ತು ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿಗಳೊಂದಿಗೆ ಪೈಪೋಟಿ ನೀಡುತ್ತದೆ, ಈ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ. ಈ ಎಸ್‍ಯುವಿಯನ್ನು ಟೊಯೊಟಾ ಕಂಪನಿಯೊಂದಿಗೆ ಜಂಟಿಯಾಗಿ ಅಭಿವೃದ್ಧಿಪಡಿಸಲಾಗಿದೆ ಮತ್ತು ಮಾರುತಿ ಸುಜುಕಿ ಕಂಪನಿಯು ಈ ಎಸ್‌ಯುವಿಯನ್ನು ಹಲವು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ರಫ್ತು ಮಾಡಲು ಪ್ರಾರಂಭಿಸಿದ್ದಾರೆ.

Article Published On: Tuesday, April 4, 2023, 19:04 [IST]
English summary
Maruti suzuki grand vitara suv prices hiked details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+