Maruti Suzuki: ಗ್ರಾಹಕರಿಗೆ ಶಾಕ್ ಕೊಟ್ಟ ಮಾರುತಿ ಸುಜುಕಿ, ಕಾರಣವೇನು?

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಖ್ಯಾತಿ ಗಳಿಸಿದ್ದು, ಅದರ ಕಾರುಗಳು ಆಕರ್ಷಕ ವೈಶಿಷ್ಟ್ಯ, ವಿನ್ಯಾಸ ಹಾಗೂ ಕೈಗೆಟುಕುವ ಬೆಲೆಯನ್ನು ಹೊಂದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಈಗ ಕಂಪನಿಯು ದರ ಹೆಚ್ಚಳಗೊಳಿಸುವುದಾಗಿ ಘೋಷಿಸುವ ಮೂಲಕ ತನ್ನ ಗ್ರಾಹಕರಿಗೆ ಆಘಾತ ನೀಡಿದೆ.

ಮಾರುತಿ ಸುಜುಕಿ ತನ್ನ ಕಾರು ಮಾದರಿಗಳ ಬೆಲೆಯನ್ನು ಜನವರಿ 2024 (January 2024) ಏರಿಕೆ ಮಾಡುವುದಾಗಿ ಸೋಮವಾರ ತಿಳಿಸಿದೆ. ಈ ಬಗ್ಗೆ ಬಿಎಸ್‌ಇ ಫೈಲಿಂಗ್ ವೇಳೆಯಲ್ಲಿ ಕಂಪನಿ ಮಾಹಿತಿ ನೀಡಿದೆ. ಉತ್ಪದನಾ ವೆಚ್ಚದಲ್ಲಿನ ಹೆಚ್ಚಳದಿಂದ ದರ ಏರಿಕೆಗೆ ಕಂಪನಿ ಮುಂದಾಗಿದೆ ಎನ್ನಲಾಗಿದೆ. ಈ ಬೆಲೆ ಹೆಚ್ಚಳ ಎಷ್ಟು ಪ್ರಮಾಣದಲ್ಲಿರಲಿದೆ ಎಂಬುದರ ಕುರಿತು ಸದ್ಯಕ್ಕೆ ವಿವರಗಳು ಲಭ್ಯವಾಗಿಲ್ಲ.

Maruti Suzuki: ಗ್ರಾಹಕರಿಗೆ ಶಾಕ್ ಕೊಟ್ಟ ಮಾರುತಿ ಸುಜುಕಿ, ಕಾರಣವೇನು?

ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎಂಟ್ರಿ - ಲೆವೆಲ್ ಹ್ಯಾಚ್‌ಬ್ಯಾಕ್ ಆಲ್ಟೊದಿಂದ ಇನ್ವಿಕ್ಟೋ ಎಂಪಿವಿ ತನಕ ವಿವಿಧ ಕಾರು ಮಾದರಿಗಳನ್ನು ಮಾರಾಟ ಮಾಡುತ್ತದೆ. ಅದರಲ್ಲಿ ವ್ಯಾಗನ್ ಆರ್, ಸ್ವಿಫ್ಟ್, ಡಿಸೈರ್, ಸೆಲರಿಯೊ, ಇಕೋ ವ್ಯಾನ್, ಬಲೆನೊ, ಫ್ರಾಂಕ್ಸ್, ಗ್ರ್ಯಾಂಡ್ ವಿಟಾರಾಗಳು ಸೇರಿವೆ. ಇವು ಕನಿಷ್ಠ ರೂ.3.54 ಲಕ್ಷದಿಂದ ಗರಿಷ್ಠ ರೂ.28.52 ಲಕ್ಷವರೆಗೆ (ಎಕ್ಸ್ ಶೋರೂಂ ದೆಹಲಿ) ಬೆಲೆಯನ್ನು ಹೊಂದಿವೆ.

ಈ ಹಿಂದೆ, ಮಾರುತಿ ಸುಜುಕಿ ಇದೇ ವರ್ಷದ ಏಪ್ರಿಲ್ 1ರಂದು ತನ್ನ ಎಲ್ಲಾ ಕಾರು ಮಾದರಿಗಳ ಬೆಲೆಯನ್ನು ಏರಿಕೆ ಮಾಡಿತ್ತು. ಅಲ್ಲದೆ, ಟಾಟಾ ಮೋಟಾರ್ಸ್ (Tata Motors) ಕೂಡ ಸೋಮವಾರ ತನ್ನ ಪ್ರಯಾಣಿಕ ಮತ್ತು ಎಲೆಕ್ಟ್ರಿಕ್ ವಾಹನಗಳ ಬೆಲೆಯನ್ನು ಜನವರಿ 2024ರಲ್ಲಿ ಹೆಚ್ಚಿಸುವುದಕ್ಕೆ ಚಿಂತನೆ ನಡೆಸುವುದಾಗಿ ಹೇಳಿದೆ ಎಂದು ವರದಿಯಾಗಿದೆ.

Maruti Suzuki: ಗ್ರಾಹಕರಿಗೆ ಶಾಕ್ ಕೊಟ್ಟ ಮಾರುತಿ ಸುಜುಕಿ, ಕಾರಣವೇನು?

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಮಾರಾಟಗೊಳಿಸುವ ಪ್ರಮುಖ ಮಾದರಿಗಳ ಬಗ್ಗೆ ಒಂದಷ್ಟು ತಿಳಿಯೋಣ. ಕಂಪನಿಯ ಎಂಟ್ರಿ ಲೆವೆಲ್ ಮಾದರಿಯಾಗಿರುವ ಆಲ್ಟೊಕೆ10 (Alto K10) ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯಲ್ಲಿ ದೊರೆಯಲಿದ್ದು, 24.39 - 24.9 kmpl ಮೈಲೇಜ್ ನೀಡುತ್ತದೆ.

ಮಾರುತಿ ಸುಜುಕಿ ಬಲೆನೊ (Maruti Suzuki Baleno), ರೂ.6.61 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ದೊರೆಯುತ್ತದೆ. ಇದು ಕೂಡ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದ್ದು, 22.35 - 22.94 kmpl ಮೈಲೇಜ್ ನೀಡುತ್ತದೆ. 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Maruti Suzuki: ಗ್ರಾಹಕರಿಗೆ ಶಾಕ್ ಕೊಟ್ಟ ಮಾರುತಿ ಸುಜುಕಿ, ಕಾರಣವೇನು?

ಮಾರುತಿ ಸುಜುಕಿ ಜಿಮ್ನಿ (Maruti Suzuki Jimny), ರೂ.12.74 ಲಕ್ಷದಿಂದ ರೂ.15.05 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ದೊರೆಯುವ ಈ ಎಸ್‌ಯುವಿ, 16.39 - 16.94 kmpl ಮೈಲೇಜ್ ನೀಡುತ್ತದೆ. 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ಫೀಚರ್ಸ್ ಹೊಂದಿದೆ.

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto), ರೂ.24.82 ಲಕ್ಷದಿಂದ ರೂ.28.42 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ದೊರೆಯುವ ಈ ಎಂಪಿವಿ, 7, 8 ಆಸನ ಆಯ್ಕೆಯಲ್ಲಿ ಸಿಗಲಿದೆ. 10.1 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, November 28, 2023, 9:24 [IST]
English summary
Maruti suzuki hike prices of its cars from january 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+