Maruti Suzuki Ignis: 5 ಲಕ್ಷದ ಮಾರುತಿ ಸುಜುಕಿ ಇಗ್ನಿಸ್ಗೆ ರೂ.65,000 ರಿಯಾಯಿತಿ.. 20 Km ಮೈಲೇಜ್
ಮಾರುತಿ ಸುಜುಕಿ (Maruti Suzuki) ಇಗ್ನಿಸ್ ಒಳಗೊಂಡು ವಿವಿಧ ಮಾದರಿಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಣೆ ಮಾಡಿದೆ. ಇದು ನಗದು ರಿಯಾಯಿತಿ, ವಿನಿಮಯ ಬೋನಸ್ ಹಾಗೂ ಕಾರ್ಪೊರೇಟ್ ಡಿಸ್ಕೌಂಟ್ ಅನ್ನು ಒಳಗೊಂಡಿದೆ. ಆ ಬಗ್ಗೆ ಸಂಪೂರ್ಣ ವಿವರವನ್ನು ತಿಳಿಯೋಣ ಬನ್ನಿ.
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಒಟ್ಟು ರೂ.65,000 ರವರೆಗೆ ರಿಯಾಯಿತಿಯನ್ನು ಹೊಂದಿದೆ. ಅದರಲ್ಲಿ ರೂ.40,000 ನಗದು ರಿಯಾಯಿತಿ (Cash discount), ರೂ.15,000 ವಿನಿಮಯ ಬೋನಸ್ (Exchange bonus) ಮತ್ತು ರೂ.10,000 ಕಾರ್ಪೊರೇಟ್ ರಿಯಾಯಿತಿ (Corporate discount) ಅನ್ನು ಪಡೆದಿದೆ. ಈ ಡಿಸ್ಕೌಂಟ್ ಆಫರ್, ಡಿಸೆಂಬರ್ 31ರವರೆಗೆ ಲಭ್ಯವಿದೆ.

ರಾಜ್ಯಗಳು, ವೇರಿಯೆಂಟ್, ಕಲರ್, ಸ್ಟಾಕ್ ಲಭ್ಯತೆ ಆಧಾರ ಮೇಲೆ ಈ ರಿಯಾಯಿತಿ ಪ್ರಯೋಜನಗಳು ಬೇರೆ - ಬೇರೆ ಇರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಡೀಲರ್‌ಶಿಪ್ ಅನ್ನು ಸಂಪರ್ಕಿಸಿರಿ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಇಗ್ನಿಸ್ ರೂ.5.84 ಲಕ್ಷದಿಂದ ರೂ.8.16 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.
ನೂತನ ಇಗ್ನಿಸ್ ಕಾರು, ಸಿಗ್ಮಾ, ಡೆಲ್ಟಾ, ಜಿಟಾ ಹಾಗೂ ಆಲ್ಪಾ ರೂಪಾಂತರಗಳ ಆಯ್ಕೆಯಲ್ಲಿ
ಸಿಗುತ್ತದೆ. ಜೊತೆಗೆ ನೆಕ್ಸಾ ಬ್ಲೂ, ಲ್ಯೂಸೆಂಟ್ ಆರೆಂಜ್, ಸಿಲ್ಕಿ ಸಿಲ್ವರ್, ವೈಡೂರ್ಯ ಬ್ಲೂ, ಗ್ಲಿಸ್ಟೆನಿಂಗ್ ಗ್ರೇ, ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ 6 ಮೊನೊಟೋನ್ ಹಾಗೂ 3 ಡುಯಲ್ ಟೋನ್ ಬಣ್ಣಗಳೊಂದಿಗೆ ದೊರೆಯುತ್ತದೆ.

ಹೊಚ್ಚ ಹೊಸ ಮಾರುತಿ ಸುಜುಕಿ ಇಗ್ನಿಸ್ ಕಾರಿನ 1.2 - ಲೀಟರ್ ಪೆಟ್ರೋಲ್ ಎಂಜಿನ್ 83 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 5 - ಸ್ವೀಡ್ ಮ್ಯಾನುವಲ್, 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, 20.89 kmpl ಮೈಲೇಜ್ ನೀಡುತ್ತದೆ.
ಇಗ್ನಿಸ್ ಕೈಗೆಟುಕುವ ಬೆಲೆಯಲ್ಲಿ ದೊರೆಯುವ ಕಾರಾದರೂ ಭರಪೂರ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಅನ್ನು ಹೊಂದಿದೆ. ವಿನ್ಯಾಸದ ದೃಷ್ಟಿಯಿಂದಲ್ಲೂ ಅತ್ಯುತ್ತಮವಾಗಿದ್ದು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್, ಹಾಗೂ ಡಿಆರ್‌ಎಲ್ ಅನ್ನು ಒಳಗೊಂಡಿದೆ.

ಸುರಕ್ಷತೆಯ ದೃಷ್ಟಿಯಿಂದಲೂ ಈ ಮಾರುತಿ ಸುಜುಕಿ ಇಗ್ನಿಸ್ ಅತ್ಯುತ್ತಮವಾಗಿದ್ದು, ಫ್ರಂಟ್ ಡುಯಲ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ. ಈ ಕಾರಿಗೆ ಏಕೈಕ ಪ್ರಬಲ ಪ್ರತಿಸ್ಪರ್ಧಿ ಎಂದರೆ ಅದು ಟಾಟಾ ಟಿಯಾಗೊ ಆಗಿದೆ.
ಇನ್ನು, ಮಾರುತಿ ಸುಜುಕಿ ಸ್ವಿಫ್ಟ್ ಒಟ್ಟು ರೂ.49,000 ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 22.38 kmpl ರಿಂದ 30.90 km/kg ಮೈಲೇಜ್ ನೀಡುತ್ತದೆ. 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








