Maruti Suzuki Invicto: ಬಹುಬೇಡಿಕೆಯ ಮಾರುತಿ ಸುಜುಕಿ ಇನ್ವಿಕ್ಟೋ ವಿತರಣೆ ಶುರು.. ಸಂಭ್ರಮದಲ್ಲಿ ಗ್ರಾಹಕ

ಭಾರತದ ಕಾರು ಮಾರುಕಟ್ಟೆಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಬಹುಬೇಡಿಕೆಯ ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಎಂಪಿವಿ ವಿತರಣೆಗಳು ಶುರುವಾಗಿದೆ. ಈಗಾಗಲೇ ದೊಡ್ಡ ಮಟ್ಟದಲ್ಲಿ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ಸಖತ್ ಕ್ರೇಜ್ ಮೂಡಿಸಿತ್ತು. ಇದು, ರೂ.20 ಲಕ್ಷ ಬೆಲೆಯನ್ನು ದಾಟಿರುವ ಕಂಪನಿಯ ಮೊದಲ ಕಾರಾಗಿದೆ.

ಕೆಲವು ವಾರಗಳ ಹಿಂದೆ, ದೇಶದಲ್ಲಿ ಬಿಡುಗಡೆಗೊಂಡಿದ್ದ ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿಯ ಮೊದಲ ಬ್ಯಾಚ್ ಡಿಲೆವರಿಗಳು ದೇಶಾದ್ಯಂತ ಪ್ರಾರಂಭವಾಗಿದ್ದು, ಗ್ರಾಹಕರು ಖುಷಿಯಿಂದಲೇ ಇನ್ವಿಕ್ಟೋ ಕಾರುಗಳನ್ನು ವಿತರಣೆ ಪಡೆದುಕೊಂಡರು. ಈ ಎಂಪಿವಿ ಝೀಟಾ ಪ್ಲಸ್ (Zeta Plus) ಮತ್ತು ಆಲ್ಫಾ ಪ್ಲಸ್ (Alpha Plus) ರೂಪಾಂತರ ಹಾಗೂ ಐದು ಬಣ್ಣದ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

Maruti Suzuki Invicto: ಬಹುಬೇಡಿಕೆಯ ಮಾರುತಿ ಸುಜುಕಿ ಇನ್ವಿಕ್ಟೋ ವಿತರಣೆ ಶುರು.. ಸಂಭ್ರಮದಲ್ಲಿ ಗ್ರಾಹಕ

ಬೆಲೆ ವಿಚಾರವಾಗಿ ಮಾತನಾಡುವುದಾದರೆ, ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ ರೂ.24.84 ಲಕ್ಷದಿಂದ ರೂ.28.42 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗಲಿದ್ದು, ಆನ್ - ರೋಡ್ ದರಗಳು ರೂ.34 ಲಕ್ಷವರೆಗೆ ಇರುತ್ತವೆ. ಈ ಕಾರು, ಬಿಡುಗಡೆಯಾದ ಕೆಲವೇ ದಿನಗಳಲ್ಲಿ ದೊಡ್ಡಮಟ್ಟದ ಬೇಡಿಕೆಯನ್ನು ಪಡೆದುಕೊಂಡಿದ್ದು, 7,000ಕ್ಕೂ ಅಧಿಕ ಬುಕ್ಕಿಂಗ್ ಪಡೆದಿತ್ತು. ಕಂಪನಿಯು ಆ ಸಂಖ್ಯೆ ಮತ್ತಷ್ಟು ದ್ವಿಗುಣಗೊಳ್ಳಬಹುದು ಎಂದು ಲೆಕ್ಕಹಾಕಿದೆ.

ಈ ಪರಿಪ್ರಮಾಣದಲ್ಲಿ ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ ಆರ್ಡರ್ ಪಡೆದುಕೊಂಡ ಹಿನ್ನೆಲೆ, ದಿಢೀರನೇ ಕಾಯುವಿಕೆ ಅವಧಿಯು ಹೆಚ್ಚಾಗಿ, ಎರಡು ತಿಂಗಳು ಕಾಯುವಿಕೆ ಅವಧಿಯನ್ನು ಪಡೆದುಕೊಂಡಿದೆ. ಈ ಕಾರು, ಟೊಯೊಟಾ ಇನ್ನೋವಾ ಹೈಕ್ರಾಸ್‌ ಆಧಾರಿತವಾಗಿದ್ದು, ವಿನ್ಯಾಸದಲ್ಲಿ ಸೂಕ್ಷ್ಮ ಬದಲಾವಣೆ ಹೊಂದಿದೆ. ಆ ಕಾರಣಕ್ಕೆ ಬಹುತೇಕರು, ಇನ್ನೋವಾ ಬುಕ್ಕಿಂಗ್ ರದ್ದುಗೊಳಿಸಿ, ಇನ್ವಿಕ್ಟೋ ಎಂಪಿವಿಯನ್ನೇ ಆರ್ಡರ್ ಮಾಡುತ್ತಿದ್ದಾರೆ ಎಂದು ಕೂಡ ವರದಿಯಾಗಿತ್ತು.

ಏಳು ಅಥವಾ ಎಂಟು ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯುವ ಮಾರುತಿ ಸುಜುಕಿ ಇನ್ವಿಕ್ಟೋ, 2 - ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 186 PS ಪವರ್ ಹಾಗೂ 206 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. e - CVT ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿದ್ದು, 23.24 kmpl ಮೈಲೇಜ್ ನೀಡುತ್ತದೆ

ಇದಿಷ್ಟೇ ಅಲ್ಲದೆ, ಈ ಎಂಪಿವಿ 9.5 ಸೆಕೆಂಡುಗಳಲ್ಲಿ 0 ಯಿಂದ 100 kmph ವೇಗವನ್ನು ಪಡೆಯಲಿದ್ದು, ಈಗಿನ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ರೂಫ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ಫೋನ್ ಚಾರ್ಜಿಂಗ್ ವಿವಿಧ ಫೀಚರ್ಸ್ ಹೊಂದಿದೆ.

ಸುರಕ್ಷತೆಯ ದೃಷ್ಟಿಯಿಂದ ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್ಸ್, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) 360 ಡಿಗ್ರಿ ಕ್ಯಾಮೆರಾ ಮತ್ತು ಫ್ರಂಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಹೊಂದಿದೆ. ಈ ಕಾರಿಗೆ ಟೊಯೊಟಾ ಇನ್ನೋವಾ ಹೈಕ್ರಾಸ್, ಇನ್ನೋವಾ ಕ್ರಿಸ್ಟಾ ಹಾಗೂ ಕಿಯಾ ಕ್ಯಾರೆನ್ಸ್‌ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಒಟ್ಟಾರೆ, ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ ವಿತರಣೆ ಆರಂಭವಾಗಿದ್ದು, ದೇಶೀಯ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ದೊಡ್ಡಮಟ್ಟದಲ್ಲಿ ಬೇಡಿಕೆ ಪಡೆದುಕೊಂಡಿದ್ದು, ಅದು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಬಹುದು. ಇದರ ಯಶಸ್ಸಿನಿಂದ ಪ್ರೇರಿತಗೊಂಡಿರುವ ಕಂಪನಿಯು ಕೆಲವೇ ತಿಂಗಳಲ್ಲಿ ಹೊಸ ಕಾರುಗಳನ್ನು ಬಿಡುಗಡೆಗೊಳಿಸಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Article Published On: Sunday, July 30, 2023, 10:30 [IST]
English summary
Maruti suzuki invicto official deliveries begin details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+