Maruti Jimny: ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ 5 ಡೋರ್ ಬಿಡುಗಡೆ, ನೀರಿಕ್ಷೆಗೂ ಮೀರಿದ ವಿಶೇಷತೆಗಳಿವೆ

ನವದೆಹಲಿಯಲ್ಲಿ ಕಳೆದ ಜನವರಿಯಲ್ಲಿ ನಡೆದ ಆಟೋ ಎಕ್ಸ್‌ಪೋದಲ್ಲಿ ಮಾರುತಿ ಸುಜುಕಿ (Maruti Suzuki) ಆಫ್-ರೋಡ್ ಎಸ್‌ಯುವಿ 'ಜಿಮ್ನಿ 5 ಡೋರ್' ಅನ್ನು ಪ್ರದರ್ಶಿಸಿ, ಬುಕಿಂಗ್ ಕೂಡ ಪ್ರಾರಂಭಿಸಿತ್ತು. ಅಂದಿನಿಂದಲೇ ದೊಡ್ಡ ಮಟ್ಟದಲ್ಲಿ ಕ್ರೇಜ್ ಸೃಷ್ಟಿಯಾಗಿತ್ತು. ಅಂತಿಮವಾಗಿ ಭಾರತದ ಮಾರುಕಟ್ಟೆಯಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಗೊಳಿಸಿದೆ.

ಮೊದಲಿಗೆ ಅದ್ದೂರಿಯಾಗಿ ಲಾಂಚ್ ಆಗಿರುವ ನೂತನ 'ಜಿಮ್ನಿ 5 ಡೋರ್' ಎಸ್‌ಯುವಿ ಬೆಲೆ ಬಗ್ಗೆ ಮಾತನಾಡೋಣ. ಇದು ವಿವಿಧ ರೂಪಾಂತರಗಳಿಗೆ ಅನುಗುಣವಾಗಿ ಬೇರೆ-ಬೇರೆ ದರವನ್ನು ಹೊಂದಿದೆ. ಝಿಟಾ MT ರೂ.1,274,000, ಆಲ್ಪಾ MT 1,369,000, ಆಲ್ಪಾ MT (ಡುಯೆಲ್ ಟೋನ್) ರೂ.1,385,000, ಝಿಟಾ AT ರೂ.1,394,000, ಆಲ್ಪಾ AT ರೂ.1,489,000 ಹಾಗೂ ಆಲ್ಪಾ AT (ಡುಯೆಲ್ ಟೋನ್) 1,505,000 ಎಕ್ಸ್ ಶೋರೂಂ ದರವನ್ನು ಪಡೆದಿದೆ.

Maruti Jimny: ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ 5 ಡೋರ್ ಬಿಡುಗಡೆ, ನೀರಿಕ್ಷೆಗೂ ಮೀರಿದ ವಿಶೇಷತೆಗಳಿವೆ

ಮಾರುತಿ ಸುಜುಕಿ ಜಿಮ್ನಿ 5 ಡೋರ್ ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ ಅದಕ್ಕೆ ತಕ್ಕಂತೆಯೇ ವಿನ್ಯಾಸವನ್ನು ಹೊಂದಿದೆ . ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಪಡೆದಿದೆ. ಜೊತೆಗೆ ಇದರ ಫ್ರಂಟ್ ಲುಕ್ ನೋಡುಗರನ್ನು ಸೆಳೆಯುತ್ತದೆ. ರೇರ್ ಆಕರ್ಷವಾಗಿದ್ದು, ಕ್ಯಾಬಿನ್ ಒಳಭಾಗವು ಅತ್ಯುತ್ತಮವಾಗಿದೆ. 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ.

ಜಿಮ್ನಿ 5 ಡೋರ್ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು ಐಡಲ್ ಸ್ಟಾರ್ಟ್/ ಸ್ಟಾಪ್ ಬಟನ್ ವೈಶಿಷ್ಟ್ಯದೊಂದಿಗೆ 1.5L ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 6000 rpmನಲ್ಲಿ 104.8 Ps ಗರಿಷ್ಠ ಪವರ್ ಹಾಗೂ 4000 rpmನಲ್ಲಿ 134.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

Maruti Suzuki Jimny 5-Door
Variant Price
Zeta MT ₹12,74,000
Alpha MT ₹13,69,000
Alpha MT (Dual Tone) ₹13,85,000
Zeta AT ₹13,94,000
Alpha AT ₹14,89,000
Alpha AT (Dual Tone) ₹15,05,000

ಇದೊಂದು ಆಫ್-ರೋಡ್ ಎಸ್‌ಯುವಿಯಾಗಿದ್ದರೂ ಅತ್ಯುತ್ತಮ ಇಂಧನ ದಕ್ಷತೆ ಹೊಂದಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದರ 5-ಸ್ವೀಡ್ MT ರೂಪಾಂತರ, 16.94 km/l ಹಾಗೂ 4-ಸ್ವೀಡ್ AT ರೂಪಾಂತರ 16.39km/l ಮೈಲೇಜ್ ನೀಡುತ್ತದೆ. ಈ ಜಿಮ್ನಿ 5 ಡೋರ್ ಸುತ್ತಳತೆ ಬಗ್ಗೆ ಹೇಳುವುದಾದರೆ, ಇದು 3985 ಎಂಎಂ ಉದ್ದ, 1645 ಎಂಎಂ ಅಗಲ, 1720 ಎತ್ತರವಿದ್ದು, 2590 ಎಂಎಂ ಅಳತೆಯ ವೀಲ್ಸ್ ಬೇಸ್ ಹೊಂದಿದೆ.

Maruti Jimny: ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ 5 ಡೋರ್ ಬಿಡುಗಡೆ, ನೀರಿಕ್ಷೆಗೂ ಮೀರಿದ ವಿಶೇಷತೆಗಳಿವೆ

ಮಾರುತಿ ಸುಜುಕಿ ಜಿಮ್ನಿ 5 ಡೋರ್ ವೈಶಿಷ್ಟ್ಯಗಳ ಬಗ್ಗೆ ಮಾತನಾಡುವುದಾದರೆ, 9 ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಹಾಗೂ ಕಿವಿಗೆ ಕೇಳಲು ಹಿತವಾಗಿರುವ ಸೌಂಡ್ ಸಿಸ್ಟಮ್ ಅನ್ನು ಹೊಂದಿದೆ. ಇದು ಆಫ್-ರೋಡ್ ಪ್ರಿಯರಿಗೆ ಖಂಡಿತ ಇಷ್ಟವಾಗುತ್ತದೆ.

ಸುರಕ್ಷತೆಯ ದೃಷಿಯಿಂದಲ್ಲೂ ಜಿಮ್ನಿ 5 ಡೋರ್ ಅತ್ಯತ್ತಮವಾಗಿದ್ದು, 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಬ್ರೇಕ್ ಲಿಮಿಟೆಡ್ ಸ್ಲಿಪ್ ಡಿಫರೆನ್ಷಿಯಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಸೈಡ್ ಇಂಪ್ಯಾಕ್ಟ್ ಡೋರ್ ಬೀಮ್ಸ್, 3-ಪಾಯಿಂಟ್ ಎಮರ್ಜೆನ್ಸಿ ಲಾಕಿಂಗ್ ರಿಟ್ರಾಕ್ಟರ್ ಸೀಟ್‌ಬೆಲ್ಟ್ಸ್, ISOFIX ಚೈಲ್ಡ್ ಸೀಟ್ ಆಂಕಾರೇಜ್ಸ್, ರೇರ್ ವ್ಯೂ ಕ್ಯಾಮೆರಾವನ್ನು ಪಡೆದಿದೆ.

Maruti Jimny: ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ 5 ಡೋರ್ ಬಿಡುಗಡೆ, ನೀರಿಕ್ಷೆಗೂ ಮೀರಿದ ವಿಶೇಷತೆಗಳಿವೆ

ಈಗಾಗಲೇ, 30,000ಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡು ದೊಡ್ಡಮಟ್ಟದಲ್ಲಿ ದಾಖಲೆ ನಿರ್ಮಿಸಿರುವ ಈ ಮಾರುತಿ ಸುಜುಕಿ ಜಿಮ್ನಿ 5 ಡೋರ್, ಕೈಗೆಟುಕುವ ಬೆಲೆಯಲ್ಲಿ ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಿರುವುದು ಅದರ ಅಭಿಮಾನಿಗಳಿಗೆ ಖುಷಿ ತಂದಿದೆ. ಇದು ನೆಕ್ಸಾ ಡೀಲರ್ ಶಿಪ್ ಮೂಲಕ ಖರೀದಿಗೆ ಲಭ್ಯವಿದ್ದು, ಮಹೀಂದ್ರಾ ಥಾರ್ ಮತ್ತು ಫೋರ್ಸ್ ಗೂರ್ಖಾ ಎಸ್‌ಯುವಿಗಳು ಪ್ರತಿಸ್ಪರ್ಧಿಯಾಗಿವೆ.

Article Published On: Wednesday, June 7, 2023, 11:54 [IST]
English summary
Maruti suzuki jimny 5 door launched specs features variants pricelist images
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+