Maruti Suzuki Jimny: ಮಾರುತಿ ಸುಜುಕಿ ಜಿಮ್ನಿ ಈ ರೂಪಾಂತರಕ್ಕೆ ಭಾರೀ ಬೇಡಿಕೆ.. ವಿಶೇಷತೆಗಳೇನು?
ದೇಶದ ಯುವಕರಿಗೆ ನಿಮ್ಮ ನೆಚ್ಚಿನ ಆಫ್-ರೋಡ್ ಕಾರು ಯಾವುದೆಂದು ಕೇಳಿದರೆ ತಕ್ಷಣ ಬರುವ ಒಂದೇ ಉತ್ತರ ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಎಂದು. ಅಷ್ಟರಮಟ್ಟಿಗೆ ಈ ಎಸ್‌ಯುವಿ ಖ್ಯಾತಿಗಳಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಅದರ ಎಟಿ (AT) ರೂಪಾಂತರಕ್ಕೆ ಭಾರೀ ಬೇಡಿಕೆಯಿದೆ.
ಮಾರುತಿ ಸುಜುಕಿ, 5 - ಡೋರ್ ಜಿಮ್ನಿಯನ್ನು ಈ ವರ್ಷದ ಆರಂಭದಲ್ಲಿ ಜನವರಿಯಲ್ಲಿ ನಡೆದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿತ್ತು. ಆಗಿನಿಂದಲೇ ಬುಕ್ಕಿಂಗ್ ಕೂಡ ಶುರು ಮಾಡಿತ್ತು. ಜೂನ್ ತಿಂಗಳಲ್ಲಿ ಈ ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಎಟಿ (AT) ರೂಪಾಂತರಕ್ಕೆ ಸಖತ್ ಡಿಮ್ಯಾಂಡ್ ಸೃಷ್ಟಿಯಾಗಿ, ಹೆಚ್ಚಿನ ಗ್ರಾಹಕರಿಗೆ ಇಷ್ಟವಾಗಿತ್ತು.

ಕಂಪನಿಯೂ 5-ಡೋರ್ ಜಿಮ್ನಿಯ 14,500 ಯುನಿಟ್ ಉತ್ಪಾದಿಸಿದ್ದು, ಅದರಲ್ಲಿ ಇದುವರೆಗೆ 10,000 ಯುನಿಟ್ ಮಾರಾಟವಾಗಿವೆ. ಈಗಲೂ ಪ್ರತಿ ತಿಂಗಳು 2,500 ಯುನಿಟ್ ಕಾರನ್ನು ತಯಾರಿಸುತ್ತಿದ್ದು, ಇದರಿಂದ ಜಿಮ್ನಿ ಬೇಡಿಕೆ ಎಷ್ಟಿದೆ ಎಂಬುದನ್ನು ನಾವು ಸುಲಭವಾಗಿ ಅರ್ಥ ಮಾಡಿಕೊಳ್ಳಬಹುದು. ಗ್ರಾಮೀಣ ಪ್ರದೇಶಕ್ಕೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ 5-ಡೋರ್ ಜಿಮ್ನಿಗೆ ತುಂಬಾ ಬೇಡಿಕೆಯಿದ್ದು, ಸೆಪ್ಟೆಂಬರ್ 30 ರವರೆಗೆ 10,000 ಓಪನ್ ಬುಕ್ಕಿಂಗ್ ಇದೆ.
ಭಾರತದ ಮಾರುಕಟ್ಟೆಯಲ್ಲಿ 5 - ಡೋರ್ ಮಾರುತಿ ಸುಜುಕಿ ಜಿಮ್ನಿ ಎಸ್‌ಯುವಿ, ರೂ.12.74 ಲಕ್ಷದಿಂದ ರೂ.15.05 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಖರೀದಿಗೆ ಸಿಗುತ್ತದೆ. ಇದು, 1.5ಎಲ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 6000 rpm ನಲ್ಲಿ 104.8 Ps ಪವರ್, 4000 rpm ನಲ್ಲಿ 134.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್/ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಹೊಂದಿದೆ.
ವಿನ್ಯಾಸದ ದೃಷ್ಟಿಯಿಂದ ಈ ಎಸ್‌ಯುವಿಗೆ ಸರಿ ಸಾಟಿಯೇ ಇಲ್ಲ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದು, ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಅಲಾಯ್ ವೀಲ್ಸ್, ಹೊಂದಿದೆ. ಜೊತೆಗೆ 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ. 2590 ಎಂಎಂ ಅಳತೆಯ ವೀಲ್ಸ್ ಬೇಸ್ ಒಳಗೊಂಡಿದೆ.
ಮಾರುತಿ ಸುಜುಕಿ ಜಿಮ್ನಿ ಎಸ್‌ಯುವಿ ಮೈಲೇಜ್ ಬಗ್ಗೆ ಮಾತನಾಡುವುದಾದರೆ, ಇದು 16.39km/l - 16.94 km/l ಮೈಲೇಜ್ ನೀಡುತ್ತದೆ. ವೈಶಿಷ್ಟ್ಯದ ವಿಚಾರವಾಗಿ ಹೇಳುವುದಾದರೆ, 9 - ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ ಪ್ಲಸ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ ಕೀಲೆಸ್ ಎಂಟ್ರಿಯನ್ನು ಹೊಂದಿದೆ.
ಈ ಎಸ್‌ಯುವಿ ಸುರಕ್ಷತೆ ದೃಷ್ಟಿಯಿಂದ ಅತ್ಯಾಧುನಿಕವಾಗಿದ್ದು, 6 ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಬ್ರೇಕ್ ಲಿಮಿಟೆಡ್ ಸ್ಲಿಪ್ ಡಿಫರೆನ್ಷಿಯಲ್, ಹಿಲ್ ಹೋಲ್ಡ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಸೈಡ್ ಇಂಪ್ಯಾಕ್ಟ್ ಡೋರ್ ಬೀಮ್ಸ್ ಸೇರಿದಂತೆ ಹತ್ತಾರು ಸೇಫ್ಟಿ ಫೀಚರ್ಸ್ ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications