Maruti Suzuki: ಭಾರತದಲ್ಲಿ ಮಾರುತಿ ಸುಜುಕಿಯ ಇವೆರೆಡು 'ಬಾಹುಬಲಿ' ಕಾರುಗಳಿಗೆ ಫುಲ್ ಡಿಮ್ಯಾಂಡ್

ಭಾರತದಲ್ಲಿ ಮಾರುತಿ ಸುಜುಕಿ (Maruti Suzuki) ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಖ್ಯಾತಿ ಗಳಿಸಿದೆ. ಅದರ ಕಾರುಗಳ ಆಕರ್ಷಕ ವೈಶಿಷ್ಟ್ಯ, ವಿನ್ಯಾಸ ಹಾಗೂ ಕೈಗೆಟುಕುವ ಬೆಲೆ ಪ್ರತಿಯೊಬ್ಬ ಗ್ರಾಹಕರಿಗೆ ಇಷ್ಟವಾಗುತ್ತದೆ. ಇತ್ತೀಚೆಗೆ ಪ್ರಕಟಗೊಂಡಿರುವ ಮೇ ತಿಂಗಳ ಮಾರಾಟ ವರದಿಯಲ್ಲಿ ಕಂಪನಿಯ ಈ ಕಾರುಗಳು ಭರ್ಜರಿಯಾಗಿ ಸೇಲ್ ಆಗಿವೆ.

ಮಾರುತಿ ಸುಜುಕಿ ನೆಕ್ಸಾ ಡೀಲರ್ ಶಿಪ್ ಮೂಲಕ ಸೇಲ್ ಮಾಡುವ ಬಲೆನೊ ಹಾಗೂ ಫ್ರಾಂಕ್ಸ್ ಕಾರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ದೇಶೀಯ ಗ್ರಾಹಕರು ಕೊಂಡುಕೊಳ್ಳುತ್ತಿದ್ದಾರೆ. ಬಲೆನೊ ಕಾರು 18,733 ಯುನಿಟ್, ಫ್ರಾಂಕ್ಸ್ ಎಸ್‌ಯುವಿ 9,863 ಯುನಿಟ್ ಮಾರಾಟವಾಗಿದೆ. ಒಟ್ಟು 28,000 ಯುನಿಟ್ ಸೇಲ್ ಆಗಿದ್ದು, ಈ ಮೂಲಕ ಇವೆರೆಡು ಮಾರುತಿ ಸುಜುಕಿಯ ಜನಪ್ರಿಯ ಮಾದರಿಗಳೆಂದು ಮತ್ತೊಮ್ಮೆ ಸಾಬೀತಾಗಿದೆ.

Maruti Suzuki: ಭಾರತದಲ್ಲಿ ಮಾರುತಿ ಸುಜುಕಿಯ ಇವೆರೆಡು ಬಾಹುಬಲಿ ಕಾರುಗಳಿಗೆ ಫುಲ್ ಡಿಮ್ಯಾಂಡ್

ಮೊದಲಿಗೆ ಈ ಮೇ ತಿಂಗಳಲ್ಲಿಯು ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿರುವ ಬಲೆನೊ ಬಗ್ಗೆ ಮಾತನಾಡೋಣ. ಇದು ರೂ.6.61 ಲಕ್ಷದಿಂದ ರೂ.9.88 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ 1.2 ಲೀಟರ್ ಪೆಟ್ರೋಲ್ ಎಂಜಿನ್ 90 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

CNG ಕಿಟ್ ಪಡೆದಿರುವ ಕಾರು, 77.49 PS ಪವರ್ ಹಾಗೂ 98.5 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಬಲೆನೊ ಕಾರು, 22.35 - 22.94 kmpl ಮೈಲೇಜ್ ನೀಡುತ್ತದೆ. ಸಿಗ್ಮಾ, ಡೆಲ್ಟಾ, ಝೀಟಾ, ಆಲ್ಫಾ ಎಂಬ ನಾಲ್ಕು ರೂಪಾಂತರಗಳು ಹಾಗೂ ನೆಕ್ಸಾ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ಆರು ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.

Maruti Suzuki: ಭಾರತದಲ್ಲಿ ಮಾರುತಿ ಸುಜುಕಿಯ ಇವೆರೆಡು ಬಾಹುಬಲಿ ಕಾರುಗಳಿಗೆ ಫುಲ್ ಡಿಮ್ಯಾಂಡ್

ಮಾರುತಿ ಸುಜುಕಿ ಬಲೆನೊ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಇದು 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್‌ಪ್ಲೇ, ಆಂಡ್ರಾಯ್ಡ್ ಆಟೋ, ಕ್ರೂಸ್ ಕಂಟ್ರೋಲ್, ಆಟೋ ಎಸಿ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಕೀಲೆಸ್ ಎಂಟ್ರಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ಹಲವು ಫೀಚರ್ಸ್ ಹೊಂದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ ರೂ.7.46 ಲಕ್ಷದಿಂದ ರೂ.13.13 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಇದರ 1.2 ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 90 PS ಪವರ್, 113 Nm ಪೀಕ್ ಟಾರ್ಕ್, 1.0 ಲೀಟರ್ ಬೂಸ್ಟರ್ ಜೆಟ್ ಟರ್ಬೊ ಪೆಟ್ರೋಲ್ ಎಂಜಿನ್ 100 PS ಪವರ್, 147.6 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇವೆರೆಡು, ಮ್ಯಾನುವಲ್, ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿವೆ.

ಮೈಲೇಜ್ ಕುರಿತು ಹೇಳುವುದಾದರೆ, ಫ್ರಾಂಕ್ಸ್ ಎಸ್‌ಯುವಿ ರೂಪಾಂತರಗಳಿಗೆ ಅನುಗುಣವಾಗಿ, 20.01 kml ನಿಂದ 22.89 kml ಇಂಧನ ದಕ್ಷತೆ ಹೊಂದಿದ್ದು, ಹೊರಭಾಗ ಹಾಗೂ ಒಳಭಾಗದ ವಿನ್ಯಾಸ ಅತ್ಯಾಕರ್ಷವಾಗಿದೆ. ಈ ಕಾರು, ಐದು ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಝೀಟಾ ಮತ್ತು ಆಲ್ಫಾ ಎಂಬ ಐದು ರೂಪಾಂತರಗಳ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ.

ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ ಭಾರತದ ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಅವುಗಳೆಂದರೆ, 9.0 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೈಮೇಟ್ ಕಂಟ್ರೋಲ್, ಟೈಪ್ ಸಿ ಚಾರ್ಜರ್‌ ಹೊಂದಿದೆ. ಸುರಕ್ಷತೆ ಸಲುವಾಗಿ 6 ಏರ್‌ಬ್ಯಾಗ್ಸ್, 3 ಪಾಯಿಂಟ್ ELR ಸೀಟ್‌ಬೆಲ್ಟ್ಸ್ ಪಡೆದಿದೆ.

Article Published On: Monday, June 12, 2023, 11:13 [IST]
English summary
Maruti suzuki sold 28000 units baleno fronx cars may details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+