Maruti Swift: ಮಾರುತಿ ಸುಜುಕಿ ಸ್ವಿಫ್ಟ್ ಕಾರು ಕೊಂಡುಕೊಳ್ಳಬೇಕೇ?.. ಇಲ್ಲಿದೆ ಗುಡ್ ನ್ಯೂಸ್

ಮಾರುತಿ ಸುಜುಕಿ (Maruti Suzuki), ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಖ್ಯಾತಿ ಗಳಿಸಿದೆ. ಈ ಅಕ್ಟೋಬರ್ (2023) ತಿಂಗಳು ಅರೆನಾ (Arena) ಮತ್ತು ನೆಕ್ಸಾ (Nexa) ಡೀಲರ್‌ಶಿಪ್‌ ಮೂಲಕ ಮಾರಾಟ ಮಾಡುವ ವಿವಿಧ ಕಾರುಗಳ ಮೇಲೆ ಭರ್ಜರಿ ರಿಯಾಯತಿ ನೀಡಿದೆ.

ಈ ತಿಂಗಳು, ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಅತಿಹೆಚ್ಚು (ರೂ. 60,000) ಡಿಸ್ಕೌಂಟ್ ಆಫರ್ ಒಳಗೊಂಡಿದೆ. ಆದರೆ, ರಿಯಾಯಿತಿ ಸೌಲಭ್ಯಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಹತ್ತಿರದ ಡೀಲರ್‌ಶಿಪ್‌ ಸಂಪರ್ಕಿಸಿರಿ. ಸ್ವಿಫ್ಟ್ ಎಲ್ಎಕ್ಸ್ಐ ಹಾಗೂ ವಿಎಕ್ಸ್ಐ ರೂಪಾಂತರಗಳು ರೂ.35,000 ನಗದು ರಿಯಾಯಿತಿ, 20,000 ವರೆಗೆ ಎಕ್ಸ್ಚೇಂಜ್ ಬೋನಸ್, ರೂ.5,000 ಕಾರ್ಪೊರೇಟ್ ಡಿಸ್ಕೌಂಟ್ ಅನ್ನು ಹೊಂದಿವೆ.

Maruti Swift: ಮಾರುತಿ ಸುಜುಕಿ ಸ್ವಿಫ್ಟ್ ಕಾರು ಕೊಂಡುಕೊಳ್ಳಬೇಕೇ?.. ಇಲ್ಲಿದೆ ಗುಡ್ ನ್ಯೂಸ್

ಮಾರುತಿ ಸುಜುಕಿ ಸ್ವಿಫ್ಟ್ ಝಡ್ಎಕ್ಸ್ಐ ಹಾಗೂ ಝಡ್ಎಕ್ಸ್ಐ ರೂಪಾಂತರಗಳು ರೂ.25,000 ಕ್ಯಾಶ್ ಡಿಸ್ಕೌಂಟ್, ರೂ.20,000 ವರೆಗೆ ಎಕ್ಸ್ಚೇಂಜ್ ಬೋನಸ್ ಮತ್ತು ರೂ.5,000 ಕಾರ್ಪೊರೇಟ್ ರಿಯಾಯಿತಿಯನ್ನು ಪಡೆದಿವೆ. ಸ್ವಿಫ್ಟ್ ಸಿಎನ್‌ಜಿ ರೂಪಾಂತರಗಳು ಕೂಡ ಉತ್ತಮ ರಿಯಾಯತಿ ಪ್ರಯೋಜನವನ್ನು ಹೊಂದಿದ್ದು, ರೂ.25,000 ಕ್ಯಾಶ್ ಡಿಸ್ಕೌಂಟ್ ಒಳಗೊಂಡಿವೆ. ಈ ಮೂಲಕ ದಸರಾ ಹಬ್ಬಕ್ಕೆ ಮಾರುತಿ ಗ್ರಾಹಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಮಾರುತಿ ಸುಜುಕಿ ಸ್ವಿಫ್ಟ್ ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಸಾಲಿಡ್ ಫೈರ್ ರೆಡ್, ಪರ್ಲ್ ಮೆಟಾಲಿಕ್ ಲ್ಯೂಸೆಂಟ್ ಆರೆಂಜ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಈ ಕಾರು ಸಿಗುತ್ತದೆ.

ಈ ಕಾರು, 1.2 - ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 90 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಒಳಗೊಂಡಿದೆ. 5 - ಸ್ವೀಡ್ ಮ್ಯಾನುವಲ್ ಅಥವಾ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಸಿಎನ್‌ಜಿ ರೂಪಾಂತರವು ಇದೇ ಎಂಜಿನ್ ಒಳಗೊಂಡಿದೆ. ಆದರೆ, 77.5 PS ಪವರ್ ಮತ್ತು 98.5 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಕೆಲವೇ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 22.38 kmpl - 22.56 kmpl, ಸಿಎನ್‌ಜಿ ವೇರಿಯೆಂಟ್ 30.90 km/kg ಮೈಲೇಜ್ ನೀಡುತ್ತದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಯುವ ಗ್ರಾಹಕರನ್ನು ಆಕರ್ಷಿಯುವ ಹತ್ತು ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮುಖ್ಯವಾಗಿ ಐಡಲ್ ಸ್ಟಾರ್ಟ್/ ಸ್ಟಾಪ್ ಬಟನ್, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಯಂತಹ ಅತ್ಯಾಧುನಿಕ ಫೀಚರ್ಸ್ ಪಡೆದಿದೆ.

ಸುರಕ್ಷತೆ ದೃಷ್ಟಿಯಿಂದ ಈ ಕಾರು ಅತ್ಯುತ್ತಮವಾಗಿದ್ದು, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಯಮ್) ಹಿಲ್ - ಹೋಲ್ಡ್ ಕಂಟ್ರೋಲ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಹೊಂದಿದೆ. ಸ್ವಿಫ್ಟ್ ಕಾರಿಗೆ ಹುಂಡೈ ಗ್ರಾಂಡ್ i10 ನಿಯೋಸ್ ಹಾಗೂ ರೆನಾಲ್ಟ್ ಟ್ರೈಬರ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, October 7, 2023, 15:18 [IST]
English summary
Maruti suzuki swift car discount in october 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+