Maruti Swift ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್: ಈ ಜನಪ್ರಿಯ ಕಾರು ಖರೀದಿ ಈಗ ಸುಲಭ

ದೇಶಿಯ ಮಾರುಕಟ್ಟೆಯಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವಿಫ್ಟ್ ಕಳೆದ 15 ವರ್ಷದಿಂದ ದೇಶಿಯ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಜನಪ್ರಿಯ ಸ್ವಿಫ್ಟ್ ಕಾರು ಮಾರಾಟವಾಗುತ್ತಿದೆ. ಇದೀಗ ಮಾರುತಿಯು ಈ ಸ್ವಿಫ್ಟ್ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ.

ಜನಪ್ರಿಯ ಮತ್ತು ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ ಮೇಲೆ ರೂ.65,000 ವರೆಗೂ ರಿಯಾಯಿತಿಗಳನ್ನು ನೀಡುತ್ತಿದೆ. ಇದರ ಪರಿಣಾಮವಾಗಿ, ಮುಂಬರುವ ತಿಂಗಳುಗಳಲ್ಲಿ ಮಾರುತಿ ಸುಜುಕಿ ಸ್ವಿಫ್ಟ್‌ನ ಮಾರಾಟದ ಅಂಕಿಅಂಶಗಳು ಹೆಚ್ಚಾಗುವ ನಿರೀಕ್ಷೆಯಿದೆ. ಮಾರುತಿ ಸುಜುಕಿ ಸ್ವಿಫ್ಟ್‌ನ LXi ಮತ್ತು AMT ರೂಪಾಂತರಗಳು ರೂ 45,000 ವರೆಗೆ ಪ್ರಯೋಜನಗಳು ಮತ್ತು ರಿಯಾಯಿತಿಗಳೊಂದಿಗೆ ಬರುತ್ತವೆ.

Maruti Suzuki Swift

ಇದರಲ್ಲಿ ರೂ.10,000 ನಗದು ರಿಯಾಯಿತಿ, ರೂ.15,000 ಕಾರ್ಪೊರೇಟ್ ರಿಯಾಯಿತಿ ಮತ್ತು ರೂ.20,000 ವಿನಿಮಯ ರಿಯಾಯಿತಿಯನ್ನು ನೀಡಲಾಗಿದೆ. ಇನ್ನು ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ CNG ರೂಪಾಂತರಗಳ ಮೇಲೆ ರೂ 10,000 ನಗದು ರಿಯಾಯಿತಿಯನ್ನು ನೀಡಲಾಗಿದೆ. ಇನ್ನು ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ ಇತರ ರೂಪಾಂತರಗಳು ರೂ.30,000 ನಗದು ರಿಯಾಯಿತಿ, ರೂ 15,000 ರ ಕಾರ್ಪೊರೇಟ್ ರಿಯಾಯಿತಿ ಮತ್ತು ರೂ 20,000 ವಿನಿಮಯ ಬೋನಸ್‌ನೊಂದಿಗೆ ಬರುತ್ತವೆ.

ಇದೇ ರೀತಿ ಒಟ್ಟು ರಿಯಾಯಿತಿ ಮೊತ್ತವು ರೂ.65,000 ಆಗಿದೆ. ಇನ್ನು ಪ್ರಸ್ತುತ ತಲೆಮಾರಿನ ಸ್ವಿಫ್ಟ್ ಕಾರನ್ನು ಸುಜುಕಿ ಕಂಪನಿಯು 2017ರಲ್ಲಿಬಿಡುಗಡೆ ಮಾಡಲಾಯಿತು. ಇದನ್ನು 2018ರಲ್ಲಿ ಆರಂಭದಲ್ಲಿ ಇದನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಮಾರುತಿ ಸ್ವಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಗಮನಸೆಳೆಯುವಲ್ಲಿ ಯಶಸ್ವಿಯಾಗಿದೆ. ಇನ್ನು ಮಾರುತಿ ಸ್ವಿಫ್ಟ್ ಕಾರಿನಲ್ಲಿ 1.2 ಎಲ್ ಡ್ಯುಯಲ್‌ಜೆಟ್ ಪೆಟ್ರೋಲ್ ಇಂಜಿನ್ ಅನ್ನು ಹೊಂದಿದೆ.

Maruti Suzuki Swift

ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ, ಮೋಟಾರ್ ಅನ್ನು ಸ್ಟಾರ್ಟ್/ಸ್ಟಾಪ್ ಫಂಕ್ಷನ್ ಮೂಲಕ ಹೆಚ್ಚಿಸಲಾಗಿದ್ದು ಅದು ಇಂಧನ ಕ್ಷಮತೆಯನ್ನು ಹೆಚ್ಚಿಸುತ್ತದೆ. ಇದು ARAI- ಪ್ರಮಾಣೀಕೃತ ಮೈಲೇಜ್ ಅನ್ನು 23.20 ಕಿ.ಮೀ ಆಗಿದೆ. ಇನ್ನು ಈ ಎಂಜಿನ್ ನೊಂದಿಗೆ ಮ್ಯಾನುಯಲ್ ಗೇರ್ ಬಾಕ್ಸ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಸಿಎನ್‌ಜಿ ಡಿಜೈರ್ ಸಿಎನ್‌ಜಿಯೊಂದಿಗೆ ಎಂಜಿನ್ ಅನ್ನು ಹಂಚಿಕೊಳ್ಳುತ್ತದೆ, ಇದು ಫ್ಯಾಕ್ಟರಿ-ಫಿಟ್ ಮಾಡಿದ ಸಿಎನ್‌ಜಿ ಕಿಟ್‌ನೊಂದಿಗೆ 1.2 ಲೀಟರ್ ಎನ್ಎ ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 77 ಬಿಹೆಚ್‍ಪಿ ಪವರ್ ಮತ್ತು 98.5 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ಪೆಟ್ರೋಲ್ ಮಾತ್ರ ಮಾದರಿಗಿಂತ ಗಮನಾರ್ಹವಾಗಿ ಕಡಿಮೆಯಾಗಿದೆ.

Maruti Suzuki Swift

ಪೆಬೂಟ್‌ನಲ್ಲಿರುವ ಸಿಎನ್‌ಜಿ ಟ್ಯಾಂಕ್ ಲಗೇಜ್ ಸ್ಪೇಸ್ ಮೇಲೆ ಪರಿಣಾಮ ಬೀರಲಿದೆ. ಈ 2022ರ ಮಾರುತಿ ಸುಜುಕಿ ಸ್ವಿಫ್ಟ್ ಎಸ್-ಸಿಎನ್‌ಜಿ ಒಟ್ಟಾರೆ ಉದ್ದ 3,845 ಎಂಎಂ, ಅಗಲ 1,530 ಎಂಎಂ ಮತ್ತು ಎತ್ತರ 1,735 ಎಂಎಂ ಮತ್ತು ವೀಲ್‌ಬೇಸ್ 2,450 ಎಂಎಂ ವರೆಗೆ ಹೊಂದಿದೆ. 2022ರ ಮಾರುತಿ ಸುಜುಕಿ ಸ್ವಿಫ್ಟ್ ಎಸ್-ಸಿಎನ್‌ಜಿಯನ್ನು ಸ್ಟ್ಯಾಂಡರ್ಡ್ ಮಾದರಿಗೆ ಹೋಲಿಸಿದರೆ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ.

ಮಾರುತಿ ಸುಜುಕಿ ಸ್ವಿಫ್ಟ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಫೋರ್ಡ ಫಿಗೊ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತಿದೆ. ಈ ಸ್ವಿಫ್ಟ್ ಕಾರು ಮಾರುತಿ ಸುಜುಕಿ ಕಂಪನಿಗೆ ಮಾರಾಟದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ. ಹಲವು ವರ್ಷಗಳಿಂದ ತನ್ನ ಜನಪ್ರಿಯತೆಯನ್ನು ಅದೇ ರೀತಿ ಉಳಿಸಿಕೊಂಡಿರುವ ಖ್ಯಾತಿಯನ್ನು ಸ್ವಿಫ್ಟ್ ಕಾರು ಹೊಂದಿದೆ. ಇನ್ನು ಮಾರುತಿ ಸುಜುಕಿ ಕಂಪನಿಯು ನ್ಯೂ ಜನರೇಷನ್ ಸಿಫ್ಟ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

Article Published On: Saturday, April 15, 2023, 18:12 [IST]
English summary
Maruti suzuki swift discount in april 2023 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+