Maruti Suzuki Swift: 30 ಕಿ.ಮೀ ಮೈಲೇಜ್‌ನ 'ಮಾರುತಿ ಸುಜುಕಿ ಸ್ವಿಫ್ಟ್'ಗೆ ಭಾರೀ ರಿಯಾಯಿತಿ
ದೇಶಾದ್ಯಂತ ಮಾರುತಿ ಸುಜುಕಿ (Maruti Suzuki)ಯ ಆಯ್ದ ಅರೆನಾ ಹಾಗೂ ನೆಕ್ಸಾ ಡೀಲರ್‌ಶಿಪ್‌ಗಳು ವಿವಿಧ ಮಾದರಿಗಳ ಮೇಲೆ ವರ್ಷಾಂತ್ಯದಲ್ಲಿ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಣೆ ಮಾಡಿವೆ. ಜನಪ್ರಿಯ ಸ್ವಿಫ್ಟ್ (Swift) ಹ್ಯಾಚ್‌ಬ್ಯಾಕ್ ಕೂಡ ಈ ಡಿಸೆಂಬರ್ ತಿಂಗಳು ಉತ್ತಮ ಡಿಸ್ಕೌಂಟ್ ಆಫರ್ ಪಡೆದಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಒಟ್ಟು ರೂ.49,000 ರಿಯಾಯಿತಿಯನ್ನು ಹೊಂದಿದೆ. ಅದರಲ್ಲಿ ರೂ.25,000 ನಗದು ರಿಯಾಯಿತಿ (Cash discount), ರೂ.20,000 ವಿನಿಮಯ ಬೋನಸ್ (Exchange bonus) ಹಾಗೂ ರೂ.4,000 ಕಾರ್ಪೊರೇಟ್ ಡಿಸ್ಕೌಂಟ್ (Corporate discount) ಸೇರಿವೆ. ಆದರೆ, ಕಳೆದ ಕೆಲವು ತಿಂಗಳ ರಿಯಾಯಿತಿ ಆಫರ್‌ಗಳಿಗೆ ಹೋಲಿಸಿದರೆ, ಇದು ತುಂಬಾ ಕಡಿಮೆಯಾಗಿದೆ.

ದೇಶೀಯ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಖರೀದಿಗೆ ದೊರೆಯುವ ಮಾರುತಿ ಸುಜುಕಿ ಸ್ವಿಫ್ಟ್ ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಹ್ಯಾಚ್‌ಬ್ಯಾಕ್ ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ 4 ರೂಪಾಂತರ, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮಿಡ್ನೈಟ್ ಬ್ಲೂ, ಪರ್ಲ್ ಆರ್ಕ್ಟಿಕ್ ವೈಟ್, ಮೆಟಾಲಿಕ್ ಸಿಲ್ಕಿ ಸಿಲ್ವರ್ ಒಳಗೊಂಡದಂತೆ 3-ಡ್ಯೂಯಲ್ ಟೋನ್, 6-ಮೊನೊಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
ಮಾರುತಿ ಸುಜುಕಿ ಸ್ವಿಫ್ಟ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್ ಟ್ರೈನ್ ಆಯ್ಕೆಯಲ್ಲಿ ಲಭ್ಯವಿದೆ. 1.2 - ಲೀಟರ್ ಪೆಟ್ರೋಲ್ ಎಂಜಿನ್ 90 PS ಗರಿಷ್ಠ ಪವರ್, 113 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5 - ಸ್ವೀಡ್ ಮ್ಯಾನುವಲ್/ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ.
ಸಿಎನ್‌ಜಿ ಮಾದರಿಯೂ ಇದೇ ಎಂಜಿನ್ ಹೊಂದಿದೆ. ಆದರೆ, ಕಡಿಮೆ 77.5 PS ಪವರ್ ಮತ್ತು 98.5 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ಕೇವಲ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ಪೆಟ್ರೋಲ್ ರೂಪಾಂತರಗಳು 22.38 - 22.56 kmpl, ಸಿಎನ್‌ಜಿ ರೂಪಾಂತರಗಳು 30.90 km/kg ಮೈಲೇಜ್ ನೀಡುತ್ತವೆ.
ಮಾರುತಿ ಸುಜುಕಿ ಸ್ವಿಫ್ಟ್ ಪಡೆದುಕೊಂಡಿರುವ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ಫೀಚರ್ಸ್ ಪಡೆದಿದೆ. ಇದರೊಂದಿಗೆ 268 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಕೂಡ ಇದೆ.
ಸುರಕ್ಷತೆಯ ವಿಚಾರದಲ್ಲಿಯೂ ಈ ಕಾರು ಅತ್ಯುತ್ತಮವಾಗಿದ್ದು, ಫ್ರಂಟ್ ಡುಯಲ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ - ಹೋಲ್ಡ್ ಕಂಟ್ರೋಲ್, ರೇರ್ ಪಾರ್ಕಿಂಗ್ ಸೆನ್ಸರ್ ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳಿವೆ. ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗೆ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ರೆನಾಲ್ಟ್ ಟ್ರೈಬರ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








