Maruti Suzuki: ದಸರಾ ಹಬ್ಬ.. ಈ ಕಾರುಗಳಿಗೆ ಬಂಪರ್ ರಿಯಾಯಿತಿ ಘೋಷಣೆ
ದೇಶದ ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಈ ಅಕ್ಟೋಬರ್ ತಿಂಗಳು ಅರೆನಾ (Arena) ಹಾಗೂ ನೆಕ್ಸಾ (Nexa) ಡೀಲರ್‌ಶಿಪ್ ಮೂಲಕ ಮಾರಾಟ ಹಲವು ಮಾದರಿಗಳಿಗೆ ಬಂಪರ್ ರಿಯಾಯಿತಿ ಘೋಷಿಸಿದೆ. ಈ ಮೂಲಕ ದಸರಾ ಹಬ್ಬಕ್ಕೆ ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ.
ಮೊದಲಿಗೆ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಕಾರಿನ ಬಗ್ಗೆ ತಿಳಿಯೋಣ. ಇದರ ಪೆಟ್ರೋಲ್ ಎಂಟಿ (ಮ್ಯಾನುವಲ್) ಹಾಗೂ ಎಎಂಟಿ (ಆಟೋಮೆಟಿಕ್) ರೂಪಾಂತರಗಳು ರೂ.45,000 ವರೆಗೆ ರಿಯಾಯಿತಿ ಪ್ರಯೋಜನವನ್ನು ಹೊಂದಿವೆ. ಸಿಎನ್‌ಜಿ ವೇರಿಯೆಂಟ್ಸ್ ರೂ. 20,000 ವರೆಗೆ ಡಿಸ್ಕೌಂಟ್ ಆಫರ್ ಒಳಗೊಂಡಿವೆ. ದೇಶೀಯ ಮಾರುಕಟ್ಟೆಯಲ್ಲಿ ಬ್ರೆಝಾ ರೂ.8.29 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ.

ಈ ಕಾರು, ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್, 5 - ಸ್ವೀಡ್ ಮ್ಯಾನುವಲ್ ಅಥವಾ 6 - ಸ್ವೀಡ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ರೂಪಾಂತರಗಳಿಗೆ ಅಣುಗುಣವಾಗಿ 17.38 - 19.8 kmpl ಮೈಲೇಜ್ ನೀಡುತ್ತದೆ. 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4 - ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹತ್ತಾರು ಫೀಚರ್ಸ್ ಹೊಂದಿದೆ.
ಮಾರುತಿ ಸುಜುಕಿಯ ಎಂಟ್ರಿ ಲೆವೆಲ್ ಮಾದರಿಯಾಗಿರುವ ಆಲ್ಟೊ ಕೆ10 ಪಡೆದುಕೊಂಡಿರುವ ರಿಯಾಯಿತಿ ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ಸಿಎನ್‌ಜಿ ರೂಪಾಂತರಗಳು ರೂ.68,000 ಡಿಸ್ಕೌಂಟ್ ಆಫರ್ ಹೊಂದಿವೆ. ಪೆಟ್ರೋಲ್ ಮ್ಯಾನುವಲ್ ಹಾಗೂ ಎಎಂಟಿ ವೇರಿಯೆಂಟ್ಸ್ ರೂ.53,000 ರಿಯಾಯಿತಿಯನ್ನು ಒಳಗೊಂಡಿವೆ. ಆಲ್ಟೊ ಕೆ10 ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ.

ಮಾರುತಿ ಸುಜುಕಿ ಆಲ್ಟೊ ಕೆ10, ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್, 5 - ಸ್ವೀಡ್ ಮ್ಯಾನುವಲ್ ಅಥವಾ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಸಿಗುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ, 24.39 - 24.9 kmpl ಮೈಲೇಜ್ ನೀಡುತ್ತದೆ. 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಅನ್ನು ಹೊಂದಿದೆ.
ಮಾರುತಿ ಸುಜುಕಿ ಎಸ್ ಪ್ರೆಸ್ಸೊ (Maruti Suzuki S Presso) ಕೂಡ ಉತ್ತಮ ರಿಯಾಯಿತಿ ಒಳಗೊಂಡಿದೆ. ಸಿಎನ್‌ಜಿ ರೂಪಾಂತರಗಳು ರೂ.68,000 ಹಾಗೂ ಪೆಟ್ರೋಲ್ ಎಂಟಿ ಹಾಗೂ ಎಎಂಟಿ ರೂಪಾಂತರಗಳು ರೂ.51,000 ಡಿಸ್ಕೌಂಟ್ ಆಫರ್ ಹೊಂದಿವೆ. ಈ ಕಾರು,ರೂ.4.26 - 6.12 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ.

ಮಾರುತಿ ಸುಜುಕಿ ವ್ಯಾಗನ್ ಆರ್ (Maruti Suzuki Wagon R) ಪೆಟ್ರೋಲ್ ರೂಪಾಂತರಗಳು ರೂ.46,000 ಹಾಗೂ ಸಿಎನ್‌ಜಿ ರೂಪಾಂತರಗಳು ರೂ.58,000 ಡಿಸ್ಕೌಂಟ್ ಆಫರ್ ಹೊಂದಿವೆ. ಈ ಕಾರು, ರೂ.5.54 ಲಕ್ಷದಿಂದ ರೂ.7.42 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್-ಮೌಂಟೆಡ್ ಆಡಿಯೋ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಸೆಲರಿಯೊ (Maruti Suzuki Celerio) ಕೂಡ ಉತ್ತಮ ರಿಯಾಯಿತಿ ಪ್ರಯೋಜನವನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು ರೂ.51,000 ಹಾಗೂ ಸಿಎನ್‌ಜಿ ವೇರಿಯೆಂಟ್ಸ್ ರೂ.68,000 ಡಿಸ್ಕೌಂಟ್ ಆಫರ್ ಹೊಂದಿವೆ. ಈ ಕಾರು, ರೂ.5.37 ಲಕ್ಷದಿಂದ ರೂ.7.14 ಲಕ್ಷ ಬೆಲೆಗೆ ಖರೀದಿದಾರರಿಗೆ ದೊರೆಯುತ್ತದೆ. ಇನ್ನು, ಈ ಡಿಸ್ಕೌಂಟ್ ಆಫರ್ ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಡೀಲರ್ ಶಿಪ್ ಸಂಪರ್ಕಿಸಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications