2020ರಲ್ಲಿ ಅತಿ ಹೆಚ್ಚು ಮಾರಾಟವಾದ ನಂ.1 ಕಾರ್ ಆಗಿ ಹೊರಹೊಮ್ಮಿದ ಮಾರುತಿ ವ್ಯಾಗನ್ಆರ್

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (MSIL) ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಕಳೆದ ತಿಂಗಳ ಮಾರಾಟದಲ್ಲಿಯು ಪಾರುಪತ್ಯ ಮುಂದುವರೆಸಿದೆ. ಮಾರುತಿ ಸುಜುಕಿ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರತಿ ಮಾಸಿಕ ಪ್ರಯಾಣಿಕ ಕಾರು ಮಾರಾಟ ಪಟ್ಟಿಯಲ್ಲಿ ಪ್ರಾಬಲ್ಯ ಹೊಂದಿದೆ.

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (MSIL) ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳನ್ನು ಪರಿಚಯಿಸುತ್ತಿದೆ. ಇದು ಈಗಾಗಲೇ ಸ್ಪರ್ಧಿಸುತ್ತಿರುವ ವಿಭಾಗಗಳಲ್ಲಿ ತನ್ನ ಮುನ್ನಡೆಯನ್ನು ಕ್ರೋಢೀಕರಿಸಲು ಮತ್ತು ಹೆಚ್ಚಿನ ಮಾರುಕಟ್ಟೆ ಪಾಲನ್ನು ಪಡೆದುಕೊಳ್ಳಲು ಹೊಸ ವಿಭಾಗಗಳಲ್ಲಿ ತೊಡಗಿದೆ. ಮಾರುತಿ ಸುಜುಕಿ ವ್ಯಾಗನ್ಆರ್ 2022ರಲ್ಲಿ ದೇಶದಲ್ಲಿ ಹೆಚ್ಚು ಮಾರಾಟವಾದ ಪ್ರಯಾಣಿಕ ಕಾರಾಗಿದೆ. ಏಕೆಂದರೆ ಇದು ಹಿಂದಿನ ವರ್ಷದಿಂದ 2,21,850 ಯುನಿಟ್‌ಗಳ ಸಂಚಿತ ದೇಶೀಯ ಮೊತ್ತದೊಂದಿಗೆ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.

2020ರಲ್ಲಿ ಹೆಚ್ಚು ಮಾರಾಟವಾದ ಕಾರ್ ಆಗಿ ಹೊರಹೊಮ್ಮಿದ ಮಾರುತಿ ವ್ಯಾಗನ್

ಕಳೆದ ವರ್ಷ ಮಾರುತಿ ಸುಜುಕಿ ವ್ಯಾಗನ್ಆರ್ ಎರಡು ಲಕ್ಷ ಮಾರಾಟದ ಮೈಲಿಗಲ್ಲನ್ನು ದಾಟಿದೆ. ಈ ಕಾರನ್ನು ಮೊದಲ ಬಾರಿಗೆ 1999 ರಲ್ಲಿ ಪರಿಚಯಿಸಲಾಯಿತು, ಮಾರುತಿ ಸುಜುಕಿ ವ್ಯಾಗನ್‍ಆರ್ ಸುಮಾರು ಎರಡು ದಶಕಗಳಿಂದ ಮಾರಾಟದಲ್ಲಿದೆ. ಈ ವ್ಯಾಗನ್‍ಆರ್ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ ದೇಶದಲ್ಲಿ ಪ್ರಾರಂಭಿಸಿದಾಗಿನಿಂದಲೂ ಕೂಡ ಉತ್ತಮ ಬೇಡಿಕೆಯಿಂದ ಮಾರಾಟವಾಗುತ್ತಿದೆ. ಈಗ ಮೂರನೇ ತಲೆಮಾರಿನ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ. ಪ್ರಸ್ತುತ ಈ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5.47 ಲಕ್ಷವಾಗಿದೆ.

2019 ರಲ್ಲಿ, ಎತ್ತರದ ರೈಡಿಂಗ್ ಹ್ಯಾಚ್‌ಬ್ಯಾಕ್ ಹೊಸ ಪ್ಲಾಟ್‌ಫಾರ್ಮ್, ಹೊಚ್ಚ ಹೊಸ ವಿನ್ಯಾಸ ಮತ್ತು ಹೆಚ್ಚು ವಿಶಾಲವಾದ ಒಳಾಂಗಣದ ಉಪಸ್ಥಿತಿಯೊಂದಿಗೆ ತನ್ನ ಅತಿದೊಡ್ಡ ನವೀಕರಣವನ್ನು ಪಡೆದುಕೊಂಡಿದೆ. ವ್ಯಾಗನ್‌ಆರ್‌ನ ಸುಮಾರು 3 ಮಿಲಿಯನ್ ಯುನಿಟ್‌ಗಳು ಈಗಾಗಲೇ ರಸ್ತೆಯಲ್ಲಿ ಸಂಚರಿಸುತ್ತಿದೆ,. ಇದು ಭಾರತದಲ್ಲಿ ಇದುವರೆಗೆ ಅತ್ಯಂತ ಯಶಸ್ವಿ ಕಾರುಗಳಲ್ಲಿ ಒಂದಾಗಿದೆ. ಐದು-ಸೀಟುಗಳ್ಳು ಸಾಮಾನ್ಯ ಪೆಟ್ರೋಲ್ ಮತ್ತು CNG ರೂಪಾಂತರಗಳಲ್ಲಿ ಬರುತ್ತದೆ ಆದರೆ ಪ್ರವಾಸ-ನಿರ್ದಿಷ್ಟ ಮಾದರಿಯು ಸಹ ಲಭ್ಯವಿದೆ.

ವ್ಯಾಗನ್ಆರ್ ಮಾದರಿಯಲ್ಲಿ 1.0 ಲೀಟರ್ ಮತ್ತು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಸಿಎನ್‌ಜಿ ಮಾದರಿಯು ಖರೀದಿಗೆ ಲಭ್ಯವಿವೆ. 1.0 ಲೀಟರ್ ಎಲ್ಎಕ್ಸ್ಐ ಮತ್ತು ವಿಎಕ್ಸ್ಐ ಮಾದರಿಗಳಲ್ಲಿ ಸಿಎನ್‌ಜಿ ಮಾದರಿಯು ಖರೀದಿಗೆ ಲಭ್ಯವಿದ್ದು, ವಾಣಿಜ್ಯ ಬಳಕೆದಾರರ ಬೇಡಿಕೆ ಅನುಸಾರವಾಗಿ ಸಿಎನ್‌ಜಿ ಮಾದರಿಯಲ್ಲಿ ವಿಶೇಷವಾಗಿ ಎಲ್ಎಕ್ಸ್ಐ ಸಿಎನ್‌ಜಿ ಟೂರ್ ಹೆಚ್3 ಎನ್ನುವ ವೆರಿಯೆಂಟ್ ಅಭಿವೃದ್ದಿಪಡಿಸಿದೆ. 1.2 ಲೀಟರ್ ಪೆಟ್ರೋಲ್ ಮಾದರಿಯಲ್ಲಿ ಕಂಪನಿಯು ಈ ಬಾರಿಗೆ ಹೊಸದಾಗಿ ಜೆಡ್ಎಕ್ಸ್ಐ ಮಾದರಿಯನ್ನು ಪರಿಚಯಿಸಿದೆ,

ಈ ಹಿಂದಿನ ವಿಎಕ್ಸ್ಐ ಮಾದರಿಯನ್ನು ಸ್ಥಗಿತಗೊಳಿಸಿ ಹೊಸ ಮಾದರಿಯಲ್ಲಿ ಡ್ಯುಯಲ್ ಟೋನ್ ಆವೃತ್ತಿಯನ್ನು ಲಭ್ಯವಿದೆ. ಇದರೊಂದಿಗೆ ಗಲ್ಯಾಂಟ್ ರೆಡ್ ಮತ್ತು ಬ್ಲ್ಯಾಕ್ ರೂಫ್, ಮ್ಯಾಗ್ಮಾ ಗ್ರೇ ಮತ್ತು ಬ್ಲ್ಯಾಕ್ ರೂಫ್ ನೀಡಲಾಗಿದ್ದು, ಡ್ಯುಯಲ್ ಟೋನ್ ಹೊಂದಿರುವ ಜೆಡ್ಎಕ್ಸ್ಐ ಪ್ಲಸ್ ಮಾದರಿಯ ಸ್ಟ್ಯಾಂಡರ್ಡ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ. ಮಾರುತಿ ಸುಜುಕಿಯು ಸಹ ಹೊಸ ಮಾದರಿಗಳಲ್ಲಿ ನವೀಕೃತ ಮಾಲಿನ್ಯ ನಿಯಂತ್ರಕ ಮಾನದಂಡಗಳನ್ನು ಅಳವಡಿಸಿಕೊಂಡಿದ್ದು, ವ್ಯಾಗನ್ಆರ್ ಮಾದರಿಯು 1.0-ಲೀಟರ್ ಮತ್ತು 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ.

ಆರಂಭಿಕ ಮಾದರಿಗಳಲ್ಲಿ 1.0 ಲೀಟರ್ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಖರೀದಿಗೆ ಲಭ್ಯವಿದ್ದು, ಹೊಸ ಕಾರು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿವೆ. ಕಂಪನಿಯು ಹೊಸ ಕಾರಿನಲ್ಲಿ ಈ ಹಿಂದಿನ 4-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಮಾದರಿಯನ್ನು ಸ್ಥಗಿತಗೊಳಿಸಿದ್ದು, ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿರುವ 5-ಸ್ಪೀಡ್ ಎಎಂಟಿಗೆ ಬದಲಾಯಿಸಿದೆ.

ಈ ಕಾರಿನಲ್ಲಿ 1.0 ಲೀಟರ್ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 24.35 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 25.19 ಕಿ.ಮೀ ಮೈಲೇಜ್ ನೀಡಲಿದೆ. ಹಾಗೆಯೇ 1.2 ಲೀಟರ್ ಪೆಟ್ರೋಲ್ ಕಾರಿನ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 23.56 ಕಿ.ಮೀ ಮೈಲೇಜ್ ನೀಡಿದರೆ ಆಟೋಮ್ಯಾಟಿಕ್ ಮಾದರಿಯು ಪ್ರತಿ ಲೀಟರ್‌ಗೆ 24.43 ಕಿ.ಮೀ ಮೈಲೇಜ್ ನೀಡುತ್ತದೆ. ವ್ಯಾಗನ್ಆರ್ ಸಿಎನ್‌ಜಿ ಮಾದರಿಯು ಸಹ ತನ್ನ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಮೈಲೇಜ್ ಖಾತ್ರಿಪಡಿಸಿದೆ.

Article Published On: Monday, January 9, 2023, 10:36 [IST]
English summary
Maruti wagonr becomes best selling car in india 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+