MG Comet: ನಿರೀಕ್ಷಿಸಿದ ಬೆಲೆಗೆ ಬಿಡುಗಡೆಯಾದ ಪುಟ್ಟ ಎಲೆಕ್ಟ್ರಿಕ್ ಕಾರ್... ಅಗ್ಗದ ಬೆಲೆಗೆ ಹಲವು ವೈಶಿಷ್ಟ್ಯಗಳು!

ಜನಪ್ರಿಯ ಕಾರು ತಯಾರಕ ಕಂಪನಿಯಾದ ಎಂಜಿ ಮೋಟಾರ್ ತನ್ನ ಹೊಸ ಎಂಜಿ ಕಾಮೆಟ್ ಎಂಬ ಹೊಸ ಪುಟ್ಟ ಎಲೆಕ್ಟ್ರಿಕ್ ಕಾರನ್ನು ಕೊನೆಗೂ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಪ್ರಾರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.7.98 ಲಕ್ಷವಾಗಿದೆ,

ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಏಪ್ರಿಲ್ 27 ರಿಂದ ಟೆಸ್ಟ್ ಡ್ರೈವ್‌ಗಳು ಪ್ರಾರಂಭವಾಗುತ್ತದೆ. ಇನ್ನು ಈ ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಮೇ 15 ರಂದು ಪ್ರಾರಂಭವಾಗುತ್ತದೆ. ಇನ್ನು ಈ ಎಲೆಕ್ಟ್ರಿಕ್ ಕಾರಿನ ವಿತರಣೆಯು ಮೇ ತಿಂಗಳಿನಲ್ಲೇ ಪ್ರಾರಂಭವಾಗುತ್ತವೆ. ಈ ಕಾರಿನ ಹೆಸರು ಇಂಗ್ಲೆಂಡ್-ಆಸ್ಟ್ರೇಲಿಯಾ ಮ್ಯಾಕ್‌ರಾಬರ್ಟ್‌ಸನ್ ಏರ್ ರೇಸ್‌ನಲ್ಲಿ ಭಾಗವಹಿಸಿದ 1934 ರ ಸಾಂಪ್ರದಾಯಿಕ ಬ್ರಿಟಿಷ್ ವಿಮಾನದಿಂದ ಸ್ಫೂರ್ತಿ ಪಡೆದಿದೆ.

MG Comet

ವುಲಿಂಗ್ ಏರ್ ಇವಿ ಮಾದರಿಯನ್ನು ಆಧರಿಸಿರುವ, ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು ಪೂರ್ಣ-ಅಗಲ LED ಲೈಟ್ ಬಾರ್‌ನಂತಹ ಆಸಕ್ತಿದಾಯವಾದ ಬಾಕ್ಸ್ ವಿನ್ಯಾಸ ಭಾಷೆಯನ್ನು ಹೊಂದಿದೆ, ಜೊತೆಗೆ, ಎರಡೂ ವಿಂಗ್ ಮೀರರ್ಸ್ ಕ್ರೋಮ್ ಮತ್ತು ಪಿಯಾನೋ ಬ್ಲ್ಯಾಕ್ ಪಟ್ಟಿ ಇದೆ. ಇನ್ನು ಈ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಚಾರ್ಜರ್ ಅನ್ನು ಲೈಟ್ ಬಾರ್ ಅಡಿಯಲ್ಲಿ ಮುಂಭಾಗದಲ್ಲಿ ಇರಿಸಲಾಗುತ್ತದೆ ಮತ್ತು ಅದರ ಫ್ಲಾಪ್ ಪ್ರಕಾಶಿತ MG ಲೋಗೋವನ್ನು ಹೊಂದಿದೆ.

ಈ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು 12-ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಯಾವುದೇ ವಾಹನದ ಚಿಕ್ಕ ಚಕ್ರದ ಗಾತ್ರವಾಗಿದೆ. ಇದು ಆಕರ್ಷಕವಾದ ವಿಂಡೋ ವಿನ್ಯಾಸವನ್ನು ಸಹ ಪಡೆಯುತ್ತದೆ, ಹಿಂಭಾಗದ ವಿಂಡೋಗಳನ್ನು ಲಂಬವಾಗಿ ಜೋಡಿಸಲಾಗಿದೆ. ಹಿಂಭಾಗದಲ್ಲಿ, ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು ವಿಸ್ತೃತ ಹಾರಿಜಾನ್ ಸಂಪರ್ಕಿಸುವ ಲ್ಯಾಂಪ್ ಗಳನ್ನು ಪಡೆಯುತ್ತದೆ.

MG Comet

ಇನ್ನು ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನಲ್ಲಿ ಸ್ಟಿಕ್ಕರ್ ಶೈಲಿಗಳು ಮತ್ತು ಲಿಟ್ ಪ್ಯಾಕ್‌ಗಳ ಅಡಿಯಲ್ಲಿ ವರ್ಗೀಕರಿಸಲಾದ ಬಹು ಗ್ರಾಫಿಕ್ಸ್ ಪ್ಯಾಕ್‌ಗಳೊಂದಿಗೆ ಐದು ಬಣ್ಣಗಳಲ್ಲಿ ಲಭ್ಯವಿದೆ. ಈ ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನಲ್ಲಿ ಒಳಭಾಗದಲ್ಲಿ, ಎರಡು 10.25-ಇಂಚಿನ ಸ್ಕ್ರೀನ್‌ಗಳಿಂದ ಹೈಲೈಟ್ ಮಾಡಲಾದ ಬಿಳಿ ಮತ್ತು ಬೂದು ಬಣ್ಣದ ಒಳಾಂಗಣವನ್ನು ಹೊಂದಿದೆ.

ಇನ್ನು ಒಂದು ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಮತ್ತು ಇನ್ನೊಂದು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ. ಮುಂಭಾಗದ ಪ್ರಯಾಣಿಕರ ಸೀಟ್ ಒನ್-ಟಚ್ ಟಂಬಲ್ ಮತ್ತು ಫೋಲ್ಡ್ ಫೀಚರ್ಸ್ ಅನ್ನು ಹೊಂದಿದೆ, ಇನ್ನು ಈ ಕಾರಿನ ಹಿಂದಿನ ಸೀಟುಗಳು 50:50 ಸ್ಪ್ಲಿಟ್ ಅನ್ನು ಪಡೆಯುತ್ತವೆ. ಕಾಮೆಟ್ ರೋಟರಿ ಡ್ರೈವ್ ಸೆಲೆಕ್ಟರ್ ಅನ್ನು ಸಹ ಹೊಂದಿದೆ. ಇನ್ನು ಈ ಕಾರಿನಲ್ಲಿ ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಮತ್ತು ಮ್ಯಾನುಯಲ್ ಎಸಿ ಕಂಟ್ರೋಲ್ ಹೊಂದಿವೆ.

MG Comet

ಇದರೊಂದಿಗೆ ಕೀಲೆಸ್ ಎಂಟ್ರಿ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು, ಮೂರು ಯುಎಸ್‌ಬಿ ಪೋರ್ಟ್‌ಗಳು ಮತ್ತು 55 ಕ್ಕೂ ಹೆಚ್ಚು ಕನೆಕ್ಟಿವಿಟಿಗಳನ್ನು ಪಡೆಯುತ್ತದೆ. ಈ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನಲ್ಲಿ ಸುರಕ್ಷತೆ ಫೀಚರ್ಸ್ ಗಳಿಗೆ ಹೆಚ್ಚು ಪ್ರಾಮುಖ್ಯಯತೆಯನ್ನು ನೀಡಲಾಗಿದೆ. ಈ ಕಾರಿನಲ್ಲಿ ಸುರಕ್ಷತೆಗಾಗಿ, ABS, EBD, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ರಿವರ್ಸ್ ಕ್ಯಾಮೆರಾ ಮತ್ತು ಸೆನ್ಸರ್‌ಗಳು ಮತ್ತು ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಸೇರಿವೆ.

ಈ ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನಲ್ಲಿ 17.3kWh ಬ್ಯಾಟರಿ ಪ್ಯಾಕ್ ಅನ್ನು ಹೊಂದಿದ್ದು, ಇದು ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP67-ರೇಟ್ ಮಾಡಲ್ಪಟ್ಟಿದೆ ಮತ್ತು ARAI- ಪ್ರಮಾಣೀಕೃತ ರೇಂಜ್ 230 ಕಿ.ಮೀ ಆಗಿದೆ. ಈ ಎಂಜಿ ಕಾರಿನಲ್ಲಿ 3.3kW ಆನ್‌ಬೋರ್ಡ್ ಚಾರ್ಜರ್ ಅನ್ನು ಸಹ ನೀಡುತ್ತಿದೆ, ಇದು ಬ್ಯಾಟರಿಯನ್ನು ಸಂಪೂರ್ಣವಾಗಿ ಚಾರ್ಜ್ ಮಾಡಲು ಏಳು ಗಂಟೆಗಳನ್ನು ತೆಗೆದುಕೊಳ್ಳುತ್ತದೆ.

ಈ ಎಂಜಿ ಕಾಮೆಟ್ 42hp ಮತ್ತು 110Nm ಟಾರ್ಕ್ ಅನ್ನು ಉತ್ಪಾದಿಸುವ ಸಿಂಗಲ್ ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ. ಇದು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮೂಲಕ ಹಿಂದಿನ ವ್ಹೀಲ್ ಗಳಿಗೆ ಪವರ್ ಅನ್ನು ಕಳುಹಿಸುತ್ತದೆ. ಈ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು 2,974 mm ಉದ್ದ, 1,505 mm ಅಗಲ ಮತ್ತು 1,640 mm ಎತ್ತರವನ್ನು ಹೊಂದಿದೆ, ಇನ್ನು ಇದು 2,010 mm ವ್ಹೀಲ್‌ಬೇಸ್‌ ಅನ್ನು ಹೊಂದಿದೆ.

More from DriveSpark

Article Published On: Wednesday, April 26, 2023, 12:37 [IST]
English summary
Mg comet ev launched in india price variants booking delivery details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+