MG Comet: ಭಾರತದಲ್ಲಿ ಆಕರ್ಷಕವಾದ ಪುಟ್ಟ ಎಲೆಕ್ಟ್ರಿಕ್ ಕಾರು ಅನಾವರಣ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಎಂಜಿ ಮೋಟಾರ್ ತನ್ನ ಹೊಸ ಎಂಜಿ ಕಾಮೆಟ್ ಎಂಬ ಹೊಸ ಪುಟ್ಟ ಎಲೆಕ್ಟ್ರಿಕ್ ಕಾರನ್ನು ಅನಾವರಣಗೊಳಿಸಿದೆ. ಈ ಬಹುನಿರೀಕ್ಷಿತ 2-ಡೋರಿನ ಎಂಜಿ ಎಲೆಕ್ಟ್ರಿಕ್ ಕಾರು ಬಹಳಷ್ಟು ತಂತ್ರಜ್ಞಾನ ಮತ್ತು ಇತರ ಅತ್ಯಾಧುನಿಕ ಫೀಚರ್ಸ್ ಗಳೊಂದಿಗೆ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ.
ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು ಡ್ಯುಯಲ್ 10.25-ಇಂಚಿನ ಡಿಸ್ ಪ್ಲೇಯನ್ನು ಹೊಂದಿದ್ದು, ಇದರಲ್ಲಿ ಟಚ್‌ಸ್ಕ್ರೀನ್ ಯುನಿಟ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಆಗಿ ಕಾರ್ಯನಿರ್ವಹಿಸುತ್ತದೆ. ಆದರೆ ಡ್ರೈವರ್‌ನ ಮುಂಭಾಗದಲ್ಲಿರುವ ಇನ್ನೂಂದು ಡಿಸ್ ಪ್ಲೇ ಕ್ಲಸ್ಟರ್ ಆಗಿದೆ. ಇನ್ನು ಈ ಸಣ್ಣ ಎಲೆಕ್ಟ್ರಿಕ್ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಮುಂಭಾಗ ಮತ್ತು ಹಿಂಭಾಗದ ಪಾರ್ಕಿಂಗ್ ಸೆನ್ಸೆರ್ ಗಳು, ರಿವರ್ಸಿಂಗ್ ಕ್ಯಾಮೆರಾ ಮತ್ತು ಡ್ಯುಯಲ್ ಏರ್‌ಬ್ಯಾಗ್‌ಗಳನ್ನು ಹೊಂದಿರಬಹುದು.

ಇದರೊಂದಿಗೆ ಪವರ್-ಫೋಲ್ಡಿಂಗ್ ORVM ಗಳು, ಎಲ್‌ಇಡಿ ಹೆಡ್‌ಲೈಟ್‌ಗಳು, ಆಂಬಿಯೆಂಟ್ ಲೈಟಿಂಗ್, ಕನೆಕ್ಟ್ ಕಾರ್ ಟೆಕ್, Apple CarPlay ಮತ್ತು Android Auto ನಂತಹ ಕನೆಕ್ಟಿವಿಟಿ ಫೀಚರ್ಸ್ ಗಳನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸುತ್ತೇವೆ. ಮುಂಬರುವ ಈ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು ಎರಡು-ಸ್ಪೋಕ್ ಸ್ಟೀರಿಂಗ್ ವೀಲ್‌ನೊಂದಿಗೆ ಆಟೋಮ್ಯಾಟಿಕ್ ಅಡ್ಜೆಸ್ಟ್ಮೆಂಟ್ ನೊಂದಿಗೆ ಬರುತ್ತದೆ ಎಂದು ಹೇಳಲಾಗುತ್ತಿದೆ.
ಸ್ಟೀಯರಿಂಗ್ ಅಡ್ಜೆಸ್ಟ್ಮೆಂಟ್ ನೊಂದಿಗೆ ಬರುತ್ತದೆಯೇ ಎಂಬುವುದು ಇನ್ನು ಖಚಿತವಾಗಿಲ್ಲ. ಸೋರಿಕೆಯಾದ ಮಾಹಿತಿಯ ಪ್ರಕಾರ, ಮುಂಬರುವ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು 17.3kWh ಬ್ಯಾಟರಿ ಪ್ಯಾಕ್ ಮತ್ತು 41.4 bhp ಪವರ್ ಮತ್ತು 110 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಎಲೆಕ್ಟ್ರಿಕ್ ಕಾರಿನ ಹಿಂಭಾಗದ ಆಕ್ಸಲ್-ಮೌಂಟೆಡ್ ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ.

ಚಾರ್ಜಿಂಗ್ ವಿಷಯದಲ್ಲಿ, ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು 3.3kW AC ಚಾರ್ಜರ್ ಅನ್ನು ಬಳಸಿಕೊಂಡು ಕೇವಲ 5 ಗಂಟೆಗಳಲ್ಲಿ 0 ಪ್ರತಿಶತದಿಂದ 80 ಪ್ರತಿಶತದವರೆಗೆ ಚಾರ್ಜ್ ಮಾಡಬಹುದು. ಅದೇ ಚಾರ್ಜರ್ ಅನ್ನು ಬಳಸಿಕೊಂಡು ಪೂರ್ಣ ಸಾಮರ್ಥ್ಯಕ್ಕೆ ಚಾರ್ಜ್ ಮಾಡಲು ಹೆಚ್ಚುವರಿ 2 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಇನ್ನು ಈ ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಬೆಲೆಯನ್ನು ಮುಂದಿನ ತಿಂಗಳಾದ ಮೇ 26 ರಂದು ಬಹಿರಂಗಪಡಿಸಲಾಗುತ್ತದೆ,
ಆಯಾಮಗಳ ವಿಷಯದಲ್ಲಿ, ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು 2,974 mm ಉದ್ದ, 1,505 mm ಅಗಲ ಮತ್ತು 1,613 mm ಎತ್ತರವನ್ನು ಹೊಂದಿದೆ. ಇನ್ನು ಈ ಪುಟ್ಟ ಎಲೆಕ್ಟ್ರಿಕ್ ಕಾರು ಕೇವಲ 2,010 mm ವ್ಹೀಲ್‌ಬೇಸ್ ಅನ್ನು ಹೊಂದಿದೆ. ಈ ಹೊಸ ಎಂಜಿ ಎಲೆಕ್ಟ್ರಿಕ್ ಕಾರಿನ ಬೆಲೆಯು ಸುಮಾರು ರೂ.10 ಲಕ್ಷ ಬೆಲೆಯನ್ನು ಹೊಂದಿರಬಹುದು ಎಂದು ನಿರೀಕ್ಷಿಸುತ್ತೇವೆ. ಈ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.
ಈ ಹೊಸ ಎಂಜಿ ಎಲೆಕ್ಟ್ರಿ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಟಿಯಾಗೋ ಇವಿ ಮತ್ತು ಸಿಟ್ರನ್ eC3 ಕಾರುಗಳಿಗೆ ಪೈಪೋಟಿ ನೀಡುತ್ತದೆ. ಈ ಹೊಸ ಎಂಜಿ ಕಾಂಪ್ಯಾಕ್ಟ್ ಎಲೆಕ್ಟ್ರಿಕ್ ಕಾರಿನ ಹೆಸರು MG Comet ಆಗಿದೆ. ಈ ಹೆಸರು ಇಂಗ್ಲೆಂಡ್-ಆಸ್ಟ್ರೇಲಿಯಾ ಮ್ಯಾಕ್‌ರಾಬರ್ಟ್‌ಸನ್ ಏರ್ ರೇಸ್‌ನಲ್ಲಿ ಭಾಗವಹಿಸಿದ 1934 ರ ಸಾಂಪ್ರದಾಯಿಕ ಬ್ರಿಟಿಷ್ ವಿಮಾನದಿಂದ ಸ್ಫೂರ್ತಿ ಪಡೆದಿದೆ ಎಂದು ಕಂಪನಿ ಹೇಳಿದೆ.
ಎಂಜಿ ಟಾಟಾ ಆಟೋಕಾಂಪ್‌ನಿಂದ ಸ್ಥಳೀಯವಾಗಿ ಬ್ಯಾಟರಿಗಳನ್ನು ಪಡೆಯುತ್ತದೆ. MG Comet ಎಲೆಕ್ಟ್ರಿಕ್ ಕಾರಿನಲ್ಲಿ FWD (ಫ್ರಂಟ್-ವೀಲ್-ಡ್ರೈವ್) ಸಿಸ್ಟಂ ಅನ್ನು ಹೊಂದಿರುತ್ತದೆ ಮತ್ತು ಸುಮಾರು 2.9 ಮೀಟರ್ ಉದ್ದವನ್ನು ಹೊಂದಿರುತ್ತದೆ. ಇದನ್ನು ಬ್ರ್ಯಾಂಡ್‌ನ ಹೊಸ ಗ್ಲೋಬಲ್ ಸ್ಮಾಲ್ ಎಲೆಕ್ಟ್ರಿಕ್ ವೆಹಿಕಲ್ಸ್ (GSEV) ಪ್ಲಾಟ್‌ಫಾರ್ಮ್‌ನಲ್ಲಿ ವಿನ್ಯಾಸಗೊಳಿಸಲಾಗಿದೆ ಮತ್ತು ಎತ್ತರದ ಮತ್ತು ಬಾಕ್ಸಿ ನಿಲುವು ಹೊಂದಿದೆ.


Click it and Unblock the Notifications