Tata - Maruti Suzuki - Hyundai: 7.5 ಲಕ್ಷಕ್ಕೆ ಸಿಗುವ ಪ್ರಮುಖ ಕಂಪನಿಗಳ ಶಕ್ತಿಯುತ ಕಾರುಗಳು

ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಅವರಿಗೆ ಜೀವನದಲ್ಲಿ ಕಾರು ಖರೀದಿಸಬೇಕೆಂದು ದೊಡ್ಡ ಆಸೆಯಾಗಿದ್ದು, ಕೈಗೆಟುಕುವ ಬೆಲೆಯ ಕಾರುಗಳನ್ನು ಹುಡುಕುತ್ತಿರುತ್ತಾರೆ. ಅಂತಹವರಿಗಾಗಿ ರೂ.7.5 ಲಕ್ಷ ಬೆಲೆಯ ಆಸುಪಾಸಿನಲ್ಲಿ ಸಿಗುವ ಟಾಟಾ (Tata), ಮಾರುತಿ ಸುಜುಕಿ (Maruti Suzuki), ಹ್ಯುಂಡೈ (Hyundai) ಕಂಪನಿಯ ಕಾರುಗಳ ಪಟ್ಟಿಯಿಲ್ಲಿದೆ.

ಮೊದಲಿಗೆ ಟಾಟಾ ಪಂಚ್ ಬಗ್ಗೆ ಮಾತನಾಡೋಣ. ಇದೊಂದು ಮೈಕ್ರೋ ಎಸ್‌ಯುವಿಯಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ರೂ.6 ಲಕ್ಷದಿಂದ ರೂ.10.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 1.2 - ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 5 ಸ್ವೀಡ್ ಮ್ಯಾನುವಲ್ ಹಾಗೂ 5 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

Tata - Maruti Suzuki - Hyundai: 7.5 ಲಕ್ಷಕ್ಕೆ ಸಿಗುವ ಪ್ರಮುಖ ಕಂಪನಿಗಳ ಶಕ್ತಿಯುತ ಕಾರುಗಳು

ಈ ಕಾರು, ರೂಪಾಂತರಗಳಿಗೆ ಅನುಗುಣವಾಗಿ 18.8 kmpl ರಿಂದ 26.99 km/kg ಮೈಲೇಜ್ ನೀಡಲಿದ್ದು, 7 - ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 7 - ಇಂಚಿನ ಸೆಮಿ - ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಒಳಗೊಂಡಂತೆ ವಿವಿಧ ಸೇಫ್ಟಿ ಫೀಚರ್ಸ್ ಹೊಂದಿದೆ.

ಹ್ಯುಂಡೈ ಎಕ್ಸ್‌ಟರ್‌ (Hyundai Exter) ಬಗ್ಗೆ ಹೇಳುವುದಾದರೆ, ಈ ಕಾರು, ರೂ.6 ರಿಂದ ರೂ.10.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಕೆಲವೇ ತಿಂಗಳ ಹಿಂದೆ, ಬಿಡುಗಡೆಯಾದ ಎಕ್ಸ್‌ಟರ್‌ ಎಸ್‌ಯುವಿಗೆ ಖರೀದಿದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 1.2-ಲೀಟರ್, 4 ಸಿಲಿಂಡರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ.

Tata - Maruti Suzuki - Hyundai: 7.5 ಲಕ್ಷಕ್ಕೆ ಸಿಗುವ ಪ್ರಮುಖ ಕಂಪನಿಗಳ ಶಕ್ತಿಯುತ ಕಾರುಗಳು

ಪೆಟ್ರೋಲ್ ರೂಪಾಂತರಗಳು, 19.2 kmpl ರಿಂದ 19.4 kmpl, ಸಿಎನ್‌ಜಿ ರೂಪಾಂತರಗಳು 27.1 km/kg ಮೈಲೇಜ್ ನೀಡುತ್ತವೆ. 8 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಭಾರತದ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki FRONX) ರೂ.7.46 ಲಕ್ಷದಿಂದ ರೂ.13.13 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ, 20.1 kmpl ರಿಂದ 28.51 km/kg ಮೈಲೇಜ್ ನೀಡುವ ಸಾಮರ್ಥ್ಯ ಹೊಂದಿದೆ. ಕಂಪನಿಯು ಈ ಕಾರನ್ನು ವಿದೇಶಿ ಮಾರುಕಟ್ಟೆಯಲ್ಲೂ ಮಾರಾಟ ಮಾಡುತ್ತಿದೆ.

Tata - Maruti Suzuki - Hyundai: 7.5 ಲಕ್ಷಕ್ಕೆ ಸಿಗುವ ಪ್ರಮುಖ ಕಂಪನಿಗಳ ಶಕ್ತಿಯುತ ಕಾರುಗಳು

ಈ ಮಾರುತಿ ಸುಜುಕಿ ಫ್ರಾಂಕ್ಸ್ ಎಸ್‌ಯುವಿ, ನೆಕ್ಸಾ ಬ್ಲೂ, ಅರ್ಥನ್ ಬ್ರೌನ್, ಆರ್ಕ್ಟಿಕ್ ವೈಟ್, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. 9 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದ್ದು, ಕಿಯಾ ಸೋನೆಟ್, ರೆನಾಲ್ಟ್ ಕಿಗರ್, ನಿಸ್ಸಾನ್ ಮ್ಯಾಗ್ನೈಟ್ ಪ್ರತಿಸ್ಪರ್ಧಿಯಾಗಿವೆ.

ಇನ್ನು, ರೆನಾಲ್ಟ್ ಕಿಗರ್ ರೂ.6.50 ಲಕ್ಷದಿಂದ ರೂ.11.23 ಲಕ್ಷ ಹಾಗೂ ನಿಸ್ಸಾನ್ ಮ್ಯಾಗ್ನೈಟ್ ರೂ.6 ಲಕ್ಷದಿಂದ ರೂ.11.02 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿವೆ. ಇವೆಲ್ಲ ಕಾರುಗಳು ಕಡಿಮೆ ಬೆಲೆಯನ್ನು ಹೊಂದಿವೆ. ಜೊತೆಯಲ್ಲಿ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿವೆ. ಇದೇ ಕಾರಣಕ್ಕೆ ಏನೋ ಹೆಚ್ಚಿನ ಮಂದಿ ತಮ್ಮ ಕುಟುಂಬದ ಆಯ್ಕೆಯ ವಾಹನವಾಗಿ ಪರಿಗಣಿಸುತ್ತಿದ್ದಾರೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, September 22, 2023, 13:00 [IST]
English summary
Most affordable suvs india tata maruti suzuki hyundai
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+