Diesel Cars: ಮೈಲೇಜ್‌ಗೂ ಸೈ.. ಕೈಗೆಟುಕುವ ಬೆಲೆಯಲ್ಲಿ ಸಿಗುವ ಟಾಟಾ, ಮಹೀಂದ್ರಾ ಡೀಸೆಲ್ ಕಾರುಗಳು
ಭಾರತದ ಗ್ರಾಹಕರು ನಿಧಾನವಾಗಿ ಎಲೆಕ್ಟ್ರಿಕ್ ಕಾರುಗಳ ಖರೀದಿಯತ್ತ ಮನಸ್ಸು ಮಾಡುತ್ತಿದ್ದಾರೆ. ಆದರೂ ಪೆಟ್ರೋಲ್, ಡೀಸೆಲ್ ಕಾರುಗಳ ಮೇಲೆ ವ್ಯಾಮೋಹ ಕಡಿಮೆಯಾಗಿಲ್ಲ. ಪ್ರಮುಖವಾಗಿ ಡೀಸೆಲ್ ಚಾಲಿತ ವಾಹನಗಳು ಹೆಚ್ಚಿನ ಕಾರ್ಯಕ್ಷಮತೆ ಹೊಂದಿರುವುದರಿಂದ ಅವುಗಳನ್ನೇ ಇಷ್ಟಪಡುತ್ತಾರೆ. ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವ ಟಾಟಾ, ಮಹೀಂದ್ರಾ ಡೀಸೆಲ್ ಕಾರುಗಳ ಪಟ್ಟಿ ಇಲ್ಲಿದೆ.
ಮೊದಲಿಗೆ ಟಾಟಾದ ಜನಪ್ರಿಯ ಡೀಸೆಲ್ ಚಾಲಿತ ಕಾರಾಗಿರುವ 'ಆಲ್ಟ್ರೋಜ್' ಬಗ್ಗೆ ಮಾತನಾಡೋಣ. ಇದು, ರೂ.8 ಲಕ್ಷದಿಂದ ರೂ.10.40 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಕಾರಿನಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಬಳಕೆ ಮಾಡಲಾಗಿದ್ದು, 88.7 bhp ಗರಿಷ್ಠ ಪವರ್ ಹಾಗೂ 200 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ 5 ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ.

ಈ ಆಲ್ಟ್ರೋಜ್ ಕಾರು, ಅತ್ಯುತ್ತಮ ಮೈಲೇಜ್ ನೀಡಲಿದ್ದು, 23.60 kmpl ಇಂಧನ ದಕ್ಷತೆಯನ್ನು ಹೊಂದಿದೆ. ಜೊತೆಗೆ ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಮುಖವಾಗಿ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕ್ರೂಸ್ ಕಂಟ್ರೋಲ್ ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯೆಲ್ ಫ್ರಂಟ್ ಏರ್ ಬಾಗ್ಸ್ ಇದೆ.
ಮಹೀಂದ್ರಾ ಕಂಪನಿಯ ಬೊಲೆರೋ ಭಾರತದ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಖ್ಯಾತಿಗಳಿಸಿದೆ. ಬೊಲೆರೋ ನಿಯೋ ರೂ.9.63 ಲಕ್ಷದಿಂದ ರೂ.12.14 ಲಕ್ಷ ಬೆಲೆಯಲ್ಲಿ ಸಿಗಲಿದೆ. ಇದರ 1.5 ಲೀಟರ್ ಡೀಸೆಲ್ ಎಂಜಿನ್ 100 PS ಗರಿಷ್ಠ ಪವರ್ ಹಾಗೂ 260 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5 ಸ್ವೀಡ್ ಮ್ಯಾನುವಲ್ ಟ್ರಾನ್ಸ್ಮಿಷನ್ ಆಯ್ಕೆಯಲ್ಲಿ ದೊರೆಯಲಿದ್ದು, 17.29 kmp ಮೈಲೇಜ್ ನೀಡುತ್ತದೆ.
ಮಹೀಂದ್ರಾ ಬೊಲೆರೋ ರೂ.9.78 ಲಕ್ಷದಿಂದ ರೂ.10.79 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗಲಿದೆ. ಈ ಕಾರು ಪಡೆದಿರುವ 1.5 ಲೀಟರ್ ಡೀಸೆಲ್ ಎಂಜಿನ್, 75 PS ಗರಿಷ್ಠ ಪವರ್ ಹಾಗೂ 210 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ವೀಡ್ ಮ್ಯಾನುವಲ್ ಟ್ರಾನ್ಸ್ಮಿಷನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಭಾರತದ ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಮಹೀಂದ್ರಾ XUV300 ಫ್ಯಾಮಿಲಿ ಕಾರೆಂದು ದೇಶಾದ್ಯಂತ ಜನಪ್ರಿಯತೆಯನ್ನು ಪಡೆದಿದೆ. ಇದು ರೂ.9.90 ಲಕ್ಷದಿಂದ ರೂ.14.60 ಲಕ್ಷ ಬೆಲೆಯಲ್ಲಿ ಖರೀದಿಗೆ ಸಿಗಲಿದ್ದು, ಇದರ 1.5 ಲೀಟರ್ ಡೀಸೆಲ್ ಎಂಜಿನ್ 115 PS ಗರಿಷ್ಠ ಪವರ್ ಹಾಗೂ 300 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 6 ಸ್ವೀಡ್ ಮ್ಯಾನುವಲ್, 6 ಸ್ವೀಡ್ AMT ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ.
ಕಿಯಾ ಕಂಪನಿಯ ಸೋನೆಟ್ ಕಾರು, ಅತ್ಯುತ್ತಮ ನಗರ ಕಾರೆಂದು ಖ್ಯಾತಿಗಳಿಸಿದೆ. ಇದು ರೂ.9.95 ಲಕ್ಷದಿಂದ ರೂ.14.89 ಲಕ್ಷ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 1.5 ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 113.4 bhp ಗರಿಷ್ಠ ಪವರ್ ಹಾಗೂ 250 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6 ಸ್ವೀಡ್ ಮ್ಯಾನುವಲ್, 6 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.
ಕಡೆಯದಾಗಿ ಟಾಟಾದ ಜನಪ್ರಿಯ, ನೆಕ್ಸಾನ್ ಬಗ್ಗೆ ಮಾತನಾಡೋಣ. ಇದು ರೂ.10 ಲಕ್ಷದಿಂದ ರೂ .13.70 ಲಕ್ಷ ದರದಲ್ಲಿ ಖರೀದಿಗೆ ಲಭ್ಯವಿದೆ. ಇದರ 1.5-ಲೀಟರ್, ಟರ್ಬೋಚಾರ್ಜ್ಡ್, 4 ಸಿಲಿಂಡರ್ ಡೀಸೆಲ್ ಎಂಜಿನ್, 113.4 bhp ಗರಿಷ್ಠ ಪವರ್ ಮತ್ತು 260 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 6 ಸ್ಪೀಡ್ ಮ್ಯಾನುವಲ್ ಅಥವಾ 6 ಸ್ಪೀಡ್ AMT ಆಯ್ಕೆಯನ್ನು ಹೊಂದಿದೆ.


Click it and Unblock the Notifications