ಭಾರತದಲ್ಲಿ ಹೆಚ್ಚು ಪವರ್‌ಫುಲ್ ಆಗಿರುವ ಕಮ್ಮಿ ಬೆಲೆಯ ಕಾರುಗಳು: ಟಾಟಾದಿಂದ ಮಹೀಂದ್ರಾವರೆಗೆ...

ಅತಿಹೆಚ್ಚು ಮಧ್ಯಮ ವರ್ಗದ ಜನರು ವಾಸಿಸುವ ನಮ್ಮ ದೇಶದಲ್ಲಿ ಬಹುತೇಕರು ಕೈಗೆಟುಕುವ ಬೆಲೆಯ ಉತ್ತಮ ಕಾರ್ಯಕ್ಷಮತೆ ಹೊಂದಿರುವ ಕಾರುಗಳನ್ನು ಖರೀದಿಸಲು ಇಷ್ಟಪಡುತ್ತಾರೆ. ಅದರಂತೆ ಟಾಟಾ ಹಾಗೂ ಮಹೀಂದ್ರಾ ಈ ರೀತಿಯ ಕಾರುಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡುತ್ತಿರುತ್ತವೆ. ಪವರ್‌ಫುಲ್ ಟರ್ಬೊ ಪೆಟ್ರೋಲ್ ಎಂಜಿನ್‌ನೊಂದಿಗೆ ದೊರೆಯುವ ಬೆಸ್ಟ್ ಕಾರುಗಳಿವು..

ಟಾಟಾ ನೆಕ್ಸಾನ್:
ಭಾರತದ ಮಾರುಕಟ್ಟೆಯಲ್ಲಿ ಪ್ರಮುಖ ವಾಹನ ತಯಾರಕ ಕಂಪನಿ ಟಾಟಾ ಮೋಟಾರ್ಸ್ ತಯಾರಿಸುವ ನೆಕ್ಸಾನ್ ಕಾರುಗಳು ಭಾರೀ ಬೇಡಿಕೆಯನ್ನು ಪಡೆದುಕೊಂಡಿವೆ. ರೂ.7.80 ಲಕ್ಷದಿಂದ ರೂ.14.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿದ್ದು, ಒಟ್ಟು ಎಂಟು ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದೆ. ಅವುಗಳೆಂದರೆ, ಎಕ್ಸ್ಇ, ಎಕ್ಸ್ಎಂ, ಎಕ್ಸ್ಎಂ (ಎಸ್), ಎಕ್ಸ್ಎಂ ಪ್ಲಸ್ (ಎಸ್), XZ ಪ್ಲಸ್, XZ ಪ್ಲಸ್ (ಹೆಚ್ಎಸ್), XZ ಪ್ಲಸ್ (ಎಲ್) ಮತ್ತು X Zಪ್ಲಸ್ (ಪಿ).

ಭಾರತದಲ್ಲಿ ಹೆಚ್ಚು ಪವರ್‌ಫುಲ್ ಆಗಿರುವ ಕಮ್ಮಿ ಬೆಲೆಯ ಕಾರುಗಳು: ಟಾಟಾದಿಂದ ಮಹೀಂದ್ರಾವರೆಗೆ...

ಟಾಟಾ ನೆಕ್ಸಾನ್ ಕಾರಿನ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು ಎರಡು ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ದೊರೆಯಲಿದೆ ಅವುಗಳೆಂದರೆ,1.2-ಲೀಟರ್ 3-ಸಿಲಿಂಡರ್, ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದು 120 PS ಪವರ್ ಹಾಗೂ 170 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.5-ಲೀಟರ್ 4-ಸಿಲಿಂಡರ್, ಟರ್ಬೊ ಡೀಸೆಲ್ ಎಂಜಿನ್ ಪಡೆದಿದ್ದು, 110 PS ಗರಿಷ್ಠ ಪವರ್ ಹಾಗೂ 260 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಏರ್ ಬ್ಯಾಗ್ ಸೇರಿದಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ.

ಸಿಟ್ರಸ್ C3:
ಫ್ರೆಂಚ್ ದೇಶದ ಪ್ರಮುಖ ವಾಹನ ತಯಾರಕ ಕಂಪನಿಯಾಗಿರುವ ಸಿಟ್ರಸ್, C3 ಕಾರನ್ನು ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ನೀಡುತ್ತಿದೆ. ಇದು ರೂ.5.98 ಲಕ್ಷದಿಂದ ರೂ.8.25 ಬೆಲೆಗೆ ಸಿಗಲಿದೆ. ಇದು ಎರಡು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 82 PS ಗರಿಷ್ಠ ಪವರ್ ಹಾಗೂ 115 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.2-ಲೀಟರ್ ಟರ್ಬೊಚಾರ್ಜ್ಡ್ ಎಂಜಿನ್ ಪಡೆದಿದ್ದು, 110 PS ಪವರ್ ಹಾಗೂ 190 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 19.8 kmpl ಇಂಧನ ದಕ್ಷತೆ ಪಡೆದಿದೆ.

ಸಿಟ್ರಸ್ C3 ಕಾರಿನ ವೈಶಿಷ್ಟ್ಯಗಳ ಕುರಿತು ಮಾತನಾಡುವುದಾದರೆ, ಇದು 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಸೌಂಡ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್-ಮೌಂಟೆಡ್ ಆಡಿಯೊ ಕಂಟ್ರೋಲ್ ದಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತಾ ದೃಷ್ಟಿಯಿಂದ ಫ್ರಂಟ್ ಡ್ಯುಯಲ್ ಏರ್‌ಬ್ಯಾಗ್ಸ್, ABS (ಆಂಟಿ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಭಾರತದಲ್ಲಿ ಹೆಚ್ಚು ಪವರ್‌ಫುಲ್ ಆಗಿರುವ ಕಮ್ಮಿ ಬೆಲೆಯ ಕಾರುಗಳು: ಟಾಟಾದಿಂದ ಮಹೀಂದ್ರಾವರೆಗೆ...

ಮಹೀಂದ್ರಾ XUV300:
ದೇಶದ ಮಾರುಕಟ್ಟೆಯಲ್ಲಿ ಮಹೀಂದ್ರಾ ಕಂಪನಿಯು ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಮಾರಾಟ ಮಾಡುತ್ತದೆ. ಇದು 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್, 1.5-ಲೀಟರ್ ಡೀಸೆಲ್ ಎಂಜಿನ್ ಹಾಗೂ 1.2-ಲೀಟರ್ TGDI ಟರ್ಬೊ-ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿವೆ. ರೂ.8.41 ಲಕ್ಷದಿಂದ ರೂ.14.07 ಲಕ್ಷ ಬೆಲೆಗೆ ಸಿಗಲಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್ಸ್, ಎಬಿಎಸ್ ಜೊತೆಗೆ ಇಬಿಡಿಯನ್ನು ಪಡೆದಿದೆ.

ಟಾಟಾ ಆಲ್ಟ್ರೋಜ್ XZ ಟರ್ಬೊ:
ಈ ಕಾರು ಅತ್ಯಂತ ಪವರ್‌ಫುಲ್ ಎಂಜಿನ್ ಹೊಂದಿದೆ ಎಂದು ಹೇಳಬಹುದು. ಟಾಟಾ ಆಲ್ಟ್ರೋಜ್ XZ ಟರ್ಬೊ ರೂ.8.95 ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, 18.13 kmpl ಇಂಧನ ದಕ್ಷತೆಯನ್ನು ಹೊಂದಿದೆ. ಇದು 1199 ಸಿಸಿ ಎಂಜಿನ್ ಹೊಂದಿದ್ದು, 5500 rpmನಲ್ಲಿ 108.50 bhp ಪವರ್ ಹಾಗೂ 5500 rpmನಲ್ಲಿ 140 nm ಪೀಕ್ ಟಾರ್ಕ್ ಉತ್ಪಾದಿಸಲಿದೆ. ಮ್ಯಾನುಯಲ್ ಟ್ರಾನ್ಸ್ಮಿಷನ್ ಆಯ್ಕೆಯಲ್ಲಿ ದೊರೆಯಲಿದೆ.

ಹುಂಡೈ i20 N ಲೈನ್:
ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಹುಂಡೈ i20 N ಲೈನ್ ರೂ.10.16 ಲಕ್ಷದಿಂದ ರೂ.12.27 ಲಕ್ಷ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಇದು 1-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿದ್ದು, 120 PS ಪವರ್ ಹಾಗೂ 172 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, 10.25- ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹಲವು ನವೀನ ವೈಶಿಷ್ಟ್ಯಗಳನ್ನು ಹೊಂದಿದೆ.

Most Read Articles

Kannada
English summary
Most powerful budget cars in india details kannada
Story first published: Monday, February 6, 2023, 8:35 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X