Maruti Suzuki: ಬೈಕ್‌ನಂತೆ ಮೈಲೇಜ್‌ನ ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ ಬಿಡುಗಡೆ ದಿನಾಂಕ ಬಹಿರಂಗ?

ದೇಶದಲ್ಲಿ ಮಾರುತಿ ಸುಜುಕಿ (Maruti Suzuki) ಅತಿದೊಡ್ಡ ಕಾರು ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಮೇ 2005ರಲ್ಲಿ ಕಂಪನಿ ಬಿಡುಗಡೆಗೊಳಿಸಿದ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ್ನು ಈಗಲೂ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಅನೇಕ ಬದಲಾವಣೆಗಳನ್ನು ಒಳಗೊಂಡ ಫೇಸ್‌ಲಿಫ್ಟ್‌ ಹಾಗೂ ಜನರೇಷನ್ ಗಳಿಗೆ ಈ ಕಾರು ಸಾಕ್ಷಿಯಾಗಿದೆ.

ಇದೀಗ, ನವೀನ ಎಂಜಿನ್ ಹಾಗೂ ಆಕರ್ಷಕ ವೈಶಿಷ್ಟ್ಯಗಳೊಂದಿಗೆ ಹೊಚ್ಚ ಹೊಸ ಐದನೇ ತಲೆಮಾರಿನ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ್ನು ಬಿಡುಗಡೆಗೊಳಿಸಲು ಮಾರುತಿ ಸುಜುಕಿ ಕಂಪನಿ ಸಿದ್ಧತೆ ನಡೆಸುತ್ತಿದೆ. ಬಹುತೇಕ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ವರ್ಷದ ಅಕ್ಟೋಬರ್‌ನಲ್ಲಿ ಅನಾವರಣಗೊಳ್ಳಬಹುದು. ಆ ಬಳಿಕ, 2024ರ ಆರಂಭ ಅಂದ್ರೆ ಫೆಬ್ರವರಿ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳ್ಳುವ ನೀರಿಕ್ಷೆಯಿದೆ. ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

Maruti Suzuki: ಬೈಕ್‌ನಂತೆ ಮೈಲೇಜ್‌ನ ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ ಬಿಡುಗಡೆ ದಿನಾಂಕ ಬಹಿರಂಗ?

ಮುಂಬರಲಿರುವ ಐದನೇ ತಲೆಮಾರಿನ ಸ್ವಿಫ್ಟ್ ಶಕ್ತಿಯುತ ಹೈಬ್ರಿಡ್ ಪವರ್ ಟ್ರೈನ್ ಹೊಂದಿರಲಿದೆ. ಅದಕ್ಕಾಗಿ ಈ ಹ್ಯಾಚ್‌ಬ್ಯಾಕ್‌ ಟೊಯೊಟಾ ಕಾರುಗಳಂತೆ 1.2 ಲೀಟರ್ 3 ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರುವ ನೀರಿಕ್ಷೆಯಿದೆ. (ನಿಮಗೆ ಗೊತ್ತಿರಲಿ.. ಭಾರತದಲ್ಲಿ ಮಾರುತಿ ಸುಜುಕಿ ಹಾಗೂ ಟೊಯೊಟಾ ಕಂಪನಿಗಳು ಪಾಲುದಾರಿಕೆ ಹೊಂದಿವೆ) ಯಾವ ಬೈಕ್‌ಗೂ ಕಮ್ಮಿಯಿಲ್ಲದಂತೆ ಸರಿ ಸುಮಾರು 35 - 40kmpl (ARAI) ಮೈಲೇಜ್ ನೀಡಬಹುದು.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ದೊರೆಯುವ ಸ್ವಿಫ್ಟ್ ಕಾರಿನಂತೆಯೇ ಐದನೇ ತಲೆಮಾರಿನ (ಫೇಸ್‌ಲಿಫ್ಟ್‌) ಸ್ವಿಫ್ಟ್, 89 bhp ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸಲು ಸಾಮರ್ಥ್ಯವಿರುವ 1.2 ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ ಪಡೆದಿರುವ ಸಾಧ್ಯತೆಯಿದೆ. ಜೊತೆಗೆ 23.76 kmpl ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ.

ಮುಂಬರಲಿರುವ ಮಾರುತಿ ಸುಜುಕಿ ಸ್ವಿಫ್ಟ್, ಸ್ಮಾರ್ಟ್ ಪ್ಲೇ ಪ್ರೋ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ , ಒಟಿಎ ಅಪ್‌ಡೇಟ್‌, ಸುಜುಕಿ ವಾಯ್ಸ್ ಅಸಿಸ್ಟಂಟ್, ಆಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು 360 ಡಿಗ್ರಿ ಕ್ಯಾಮೆರಾ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ವಿನ್ಯಾಸದ ದೃಷ್ಟಿಯಿಂದ ನೂತನವಾದ ಫ್ರಂಟ್ ಗ್ರಿಲ್, ಆಕರ್ಷಕ ಬಂಪರ್ ಹಾಗೂ ಹೆಡ್ ಲ್ಯಾಂಪ್ ಅನ್ನು ಪಡೆದಿರುವ ನೀರಿಕ್ಷೆಯಿದೆ.

ಸದ್ಯ, ದೇಶದಲ್ಲಿ ಖರೀದಿಗೆ ಲಭ್ಯವಿರುವ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಬಗ್ಗೆ ಮಾತನಾಡುವುದಾದರೆ, ಇದು ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. ಎಲ್ಎಕ್ಸ್ಐ ಹಾಗೂ ವಿಎಕ್ಸ್ಐ ಸೇರಿದಂತೆ ಐದು ರೂಪಾಂತರಗಳ ಆಯ್ಕೆಯಲ್ಲಿ ದೊರೆಯುತ್ತದೆ. ಜೊತೆಗೆ 3 ಡ್ಯುಯಲ್ ಟೋನ್ ಹಾಗೂ 6 ಮೊನೊಟೋನ್ ಬಣ್ಣಗಳೊಂದಿಗೆ ಲಭ್ಯವಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ, ಇದು 1.2 - ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 90 PS ಗರಿಷ್ಠ ಪವರ್ ಹಾಗೂ 113 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 -ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಲಭ್ಯವಿದೆ. ಸಿಎನ್‌ಜಿ ಕಿಟ್ ಪಡೆದಿರುವ ಕಾರು, ಕೊಂಚ ಕಡಿಮೆ ಪವರ್ ಉತ್ಪಾದಿಸಲಿದ್ದು, 22.38 - 22.56 kmpl ಮೈಲೇಜ್ ನೀಡುತ್ತದೆ.

ಮಾರುತಿ ಸುಜುಕಿ ಸ್ವಿಫ್ಟ್ ಪಡೆದಿರುವ ವೈಶಿಷ್ಟ್ಯಗಳ ಬಗ್ಗೆ ಮಾತನಾಡುವುದಾದರೆ, ಇದು 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಆಟೋ ಎಸಿ ಎಲ್‌ಇಡಿ ಹೆಡ್‌ಲೈಟ್‌ ಅನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಒಳಗೊಂಡಂತೆ ವಿವಿಧ ಸೇಫ್ಟಿ ಫೀಚರ್ಸ್ ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Article Published On: Sunday, August 20, 2023, 11:00 [IST]
English summary
New generation maruti suzuki swift global debut october details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+