ಮಾರುತಿ-ಟೊಯೊಟಾ ಎದೆಯಲ್ಲಿ ನಡುಕ ಹುಟ್ಟಿಸಿದ ಹೊಸ ಹೋಂಡಾ ಎಸ್‍ಯುವಿ ಹೇಗಿದೆ ಗೊತ್ತಾ?

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಇಂಡಿಯಾ ತನ್ನ ಬಹುನಿರೀಕ್ಷಿತ ಹೊಸ ಹೋಂಡಾ ಎಲಿವೇಟ್ (Honda Elevate) ಎಸ್‍ಯುವಿಯನ್ನು ಭಾರತಿಯ ಮಾರುಕಟ್ಟೆಯಲ್ಲಿ ಕೊನೆಗೂ ಬಿಡುಗಡೆಗೊಳಿಸಿದ್ದಾರೆ. ಈ ಹೋಂಡಾ ಎಲಿವೇಟ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಮಾರುತಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಹೈರ್ಡರ್, ಫೋಕ್ಸ್‌ವ್ಯಾಗನ್ ಟೈಗನ್ ಮತ್ತು ಸ್ಕೋಡಾ ಕುಶಾಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

ಬೆಲೆ ಮತ್ತು ರೂಪಾಂತರಗಳು: ಈ ಹೊಸ ಹೋಂಡಾ ಎಲಿವೇಟ್ ಎಸ್‍ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.10,99,900 ಆಗಿದೆ. ಹೊಸ ಹೋಂಡಾ ಎಲಿವೇಟ್ ಎಸ್‍ಯುವಿಯ ಟಾಪ್ ಎಂಡ್ ವೆರಿಯಂಟ್‌ನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.16 ಲಕ್ಷವಾಗಿದೆ. ಈ ಹೊಸ ಹೋಂಡಾ ಎಲಿವೇಟ್ ಎಸ್‍ಯುವಿಯ SV, V, VX ಮತ್ತು ZX ಎಂಬ ನಾಲ್ಕು ಟ್ರಿಮ್ ಹಂತಗಳಲ್ಲಿ ಲಭ್ಯವಿದೆ.

Honda Elevate

ಎಂಜಿನ್: ಹೊಸ ಹೋಂಡಾ ಎಲಿವೇಟ್ ಎಸ್‌ಯುವಿಯಲ್ಲಿ 1.5-ಲೀಟರ್, ಡಿಒಹೆಚ್‌ಸಿ, 4-ಸಿಲಿಂಡರ್, ನ್ಯಾಚುರಲ್ ಆಸ್ಪೈರ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 5ನೇ ತಲೆಮಾರಿನ ಹೋಂಡಾ ಸಿಟಿಯಲ್ಲಿ ಲಭ್ಯವಿದೆ. ಎಲಿವೇಟ್ ಎಸ್‍ಯುವಿ ಈ ಎಂಜಿನ್ 6,600rpm ನಲ್ಲಿ 119.4 bhp ಪವರ್ ಮತ್ತು 4,300rpm ನಲ್ಲಿ 145 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಹೋಂಡಾ ಎಲಿವೇಟ್ ಎಸ್‌ಯುವಿಯಲ್ಲಿ ಈ 1.5-ಲೀಟರ್ ಎಂಜಿನ್ ಹೊಂದಿರುವ ಟ್ರಾನ್ಸ್‌ಮಿಷನ್ ಆಯ್ಕೆಗಳು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಮತ್ತು ಸಿವಿಟಿ ಗೇರ್‌ಬಾಕ್ಸ್ ಅನ್ನು ಒಳಗೊಂಡಿವೆ. ಹೋಂಡಾ ಪ್ರಕಾರ, ಹೋಂಡಾ ಎಲಿವೇಟ್ ಎಸ್‍ಯುವಿ ಮ್ಯಾನುವಲ್ ರೂಪಾಂತರವು 15.31 ಕಿ.ಮೀ ಮೈಲೇಜ್ ನೀಡಿದರೆ, CVT ರೂಪಾಂತರವು 16.92 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

Honda Elevate

ವಿನ್ಯಾಸ: ಹೋಂಡಾ ಎಲಿವೇಟ್ ಎಸ್‍ಯುವಿಯನ್ನು ಹೋಂಡಾ ಆರ್&ಡಿ ಏಷ್ಯಾ ಪೆಸಿಫಿಕ್, ಥೈಲ್ಯಾಂಡ್ ಅಭಿವೃದ್ಧಿಪಡಿಸಿದೆ. ಈ ಹೊಸ ಎಸ್‍ಯುವಿಯು ಅತ್ಯಾಧುನಿಕ ಸೌಕರ್ಯ ಮತ್ತು ತಂತ್ರಜ್ಞಾನದ ಜೊತೆಗೆ ಸ್ಥಿತಿ ಮತ್ತು ಹೆಚ್ಚು ವಿಶೇಷವಾದ ಖರೀದಿದಾರರನ್ನು ಆಕರ್ಷಿಸಿಸುವಂತೆ ವಿನ್ಯಾಸಗೊಳಿಸಲಾಗಿದೆ. ಈ ಹೊಸ ಎಸ್‍ಯುವಿ ಮಾದರಿಯ ವಿನ್ಯಾಸವು ನ್ಯೂ ಜನರೇಷನ್ CR-V ಮತ್ತು WR-V ಎಸ್‍ಯುವಿಗಳಿಂದ ಸ್ಫೂರ್ತಿ ಪಡೆದಿದೆ.

ಹೋಂಡಾ ಎಲಿವೇಟ್ ಎಸ್‍ಯುವಿಯು ಬಾಕ್ಸಿ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಮುಂಭಾಗವು ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಈ ಎಸ್‍ಯುವಿಯು ಎಲ್ಇಡಿ ಹೆಡ್‌ಲೈಟ್‌ಗಳು ಗ್ರಿಲ್‌ನ ಎರಡೂ ಬದಿಯಲ್ಲಿವೆ ಮತ್ತು ದಪ್ಪ ಕ್ರೋಮ್ ಸ್ಟ್ರಿಪ್‌ನಿಂದ ಸಂಪರ್ಕ ಹೊಂದಿವೆ. ಇನ್ನು ಈ ಎಸ್‍ಯುವಿಯ ಫಾಂಗ್ ಲ್ಯಾಂಪ್ ಗಳನ್ನು ಬಂಪರ್‌ನಲ್ಲಿ ಕೆಳಕ್ಕೆ ಇರಿಸಲಾಗಿದೆ.

ಆಯಾಮಗಳು: ಈ ಹೊಸ ಹೋಂಡಾ ಎಲಿವೇಟ್ ಎಸ್‍ಯುವಿಯು 4,392 ಎಂಎಂ ಉದ್ದ, 1,790 ಎಂಎಂ ಅಗಲ ಮತ್ತು 1,650 ಎತ್ತರ ಮತ್ತು 2,650 ಎಂಎಂ ಉದ್ದದ ವ್ಹೀಲ್ ಬೇಸ್ ಅನ್ನು ಹೊಂದಿದೆ. ಇನ್ನು ಹೋಂಡಾ ಎಲಿವೇಟ್ ಎಸ್‍ಯುವಿಯು 220mm ಗ್ರೌಂಡ್ ಕ್ಲಿಯರೆನ್ಸ್ ಮತ್ತು 458-ಲೀಟರ್ ಬೂಟ್ ಸ್ಪೇಸ್ ಅನ್ನು ನೀಡುತ್ತದೆ.

ಫೀಚರ್ಸ್: ಎಸ್‍ಯುವಿಯ ಒಳಭಾಗದಲ್ಲಿ ಡ್ಯುಯಲ್-ಡಿಸ್ ಪ್ಲೇ ಡ್ಯಾಶ್ ಅನ್ನು ಹೊಂದಿದೆ, ಇದು 10.25 ಇಂಚಿನ HD ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಹೊಂದಿದೆ. ಇದು ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಕನೆಕ್ಟಿವಿಟಿಯನ್ನು ಹೊಂದಿದೆ ಮತ್ತು 8-ಸ್ಪೀಕರ್ ಸರೌಂಡ್ ಸೌಂಡ್ ಸಿಸ್ಟಮ್‌ಗೆ ಕನೆಕ್ಟ್ ಹೊಂದಿದೆ. ಇದರೊಂದಿಗೆ ಅನಲಾಗ್ ಸ್ಪೀಡೋದ ಪಕ್ಕದಲ್ಲಿ 7-ಇಂಚಿನ ಡಿಜಿಟಲ್ ಡಿಸ್ಪ್ಲೇ, ಸಿಂಗಲ್ ಪೇನ್ ಸನ್‌ರೂಫ್, ಪ್ಲಶ್ ಸೀಟಿಂಗ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಹೊಂದಿದೆ,

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮತ್ತು ಶೇರ್ ಮಾಡಲ್ಯ್ ಮರೆಯದಿರಿ.

More from DriveSpark

Article Published On: Tuesday, September 5, 2023, 13:38 [IST]
English summary
New honda elevate suv top things you need to know
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+